Breaking News

Breaking News

ಸಿಲಿಕಾನ್ ಸಿಟಿ ಜನ ಮಳೆಗೆ ತತ್ತರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಧಾರಾಕಾರ ಮಳೆಯಾಗಿದೆ. ನಗರದ , ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ವಿಜಯನಗರ, ಶಾಂತಿ ನಗರ, , ವಸಂತನಗರ, ಕಮಲ್ಲೇಶ್ವರಂನಲ್ಲಿ, ಲಾಲ್ ಭಾಗ್, ಜಯನಗರ, ಚಾಮರಾಜನಗರ ಸೇರಿ ಹಲವು ಕಡೆ ಭಾರೀ ಮಳೆಯಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಮುಂದುವರೆದು ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ.

Read More »

ಕಲ್ಯಾಣ ಕರ್ನಾಟಕದ‌ ಅಭಿವೃದ್ದಿಗೆ 5 ಸಾವಿರಕೋಟಿ ರೂ ನೀಡಲಾಗುವುದು : ಸಿಎಂ

ಬೀದರ್ :ಕಲ್ಯಾಣ ಕರ್ನಾಟಕದ‌ ಅಭಿವೃದ್ದಿಗೆ ಮುಂದಿನ ಬಜೆಟ್ನಲ್ಲಿ 5 ಸಾವಿರಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ . ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ …

Read More »

ಕೆರೆ ಪಕ್ಕದಲ್ಲಿ ನವಜಾತ ಶಿಶುವನ್ನು ಬಿಟ್ಟು‌ ಹೋದ ಪಾಪಿಗಳು

ಧಾರವಾಡ : ಅಣ್ಣಿಗೇರಿ ಶಲವಡಿ ಗ್ರಾಮದಲ್ಲಿ ನವಜಾತ ಶಿಶುವನ್ನು ಕೆರೆ ಪಕ್ಕದಲ್ಲಿ ಬಿಸಾಡಿ ಹೋದ ಕ್ರೂರಿಗಳು ಪರಾರಿಯಾಗಿದ್ದಾರೆ. ಶಲವಡಿ ಗ್ರಾಮದ ಹೊರವಲಯದಲ್ಲಿರುವ ಕೆರೆ ಪಕ್ಕದಲ್ಲಿ ದುರುಳರು ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದಾರೆ . ಮಗು ಅಳುವ ಧ್ವನಿ ಕೇಳಿ ಕೆಲ ಸ್ಥಳೀಯ ಮಗುವನ್ನು ರಕ್ಷಣೆ ಮಾಡಿದ್ದಾರೆ . ಸದ್ಯ ಶಿಶುವಿಗೆ ಶಲವಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದುಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .

Read More »

ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಕೊಲೆ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡ: ನಗರದಲ್ಲಿ ನಡೆದಿದ್ದ ಮಹಿಳೆಯ ಬರ್ಬರ ಹತ್ಯೆಯನ್ನು ಖಾಕಿ ಪಡೆ ಭೇದಿಸಿದೆ. ಇದೇ ತಿಂಗಳ 14ರ ಸಂಜೆ ಜಿಲ್ಲಾಸ್ಪತ್ರೆ ಎದುರು ಮಹಿಳೆಯ ಬರ್ಬರ ಹತ್ಯೆ ನಡೆದಿತ್ತು. ಹತ್ಯೆಯ ಆರೋಪಿ ಆನಂದ ದುಧನಿ ಎಂಬತನನ್ನು ಪೊಲೀಸರು ಬಂಧಿಸಿದ್ದಾರೆ. ಗಂಡನನ್ನು ಕಳೆದುಕೊಂಡಿದ್ದ ನೆಹರೂನಗರದ ಸವಿತಾ ಕಿತ್ತೂರು, ಆನಂದನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಆನಂದ ಸವಿತಾಗೆ ಹಣ ಕೂಡ ನೀಡಿದ್ದ. ಸವಿತಾ ಆನಂದನನ್ನು ಬಿಟ್ಟು ಮತ್ತೆ ಇನ್ನೊಬ್ಬರ ಜೊತೆ ಸಂಪರ್ಕ …

Read More »

ಕಾಂತಾರ ಸಿನಿಮಾ ಕುರಿತು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮೆಚ್ಚುಗೆ ಮಾತು

ಕಾಂತಾರ ಸಿನಿಮಾ ಭಾರತದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕಾಂತಾರ ಸಿನಿಮಾ  ವೀಕ್ಷಿಸಿದ ಬಳಿಕ ದಕ್ಷಿಣ ಭಾರತದ ಸ್ಟಾರ್‌ ನಟರು ಸೋಷಿಯಲ್‌ ಮೀಡಿಯಾ ಮೂಲಕ ಹಾಡಿ ಹೊಗಳಿದ್ದಾರೆ. ಈ ಸಾಲಿಗೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ. ಅಕ್ಟೋಬರ್‌ 16ರಂದು ಕಾಂತಾರ ಸಿನಿಮಾವನ್ನು ವೀಕ್ಷಿಸಿದ ಬಳಿಕ ಕ್ಲೈಮ್ಯಾಕ್ಸ್‌ ದೃಶ್ಯದ ಫೋಟೊವೊಂದನ್ನು ತಮ್ಮ ಅಧಿಕೃತ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಳ್ಳುವುದರ ಮೂಲಕ ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ‘ನಾನು ಥಿಯೇಟರ್‌ನಲ್ಲಿ ಸಿನಿಮಾ …

Read More »

ಸಿಎಂ ಸಚಿವ ಸ್ಥಾನದಿಂದ ಶ್ರೀರಾಮುಲು ಅವರನ್ನು ವಜಾಗೊಳಿಸಬೇಕು : ಉಗ್ರಪ್ಪ

ಬಳ್ಳಾರಿ : ಅಕ್ರಮ ಭೂ ಹಗರಣದಲ್ಲಿ ಭಾಗಿಯಾಗಿರುವ ಸಚಿವ ಶ್ರೀರಾಮುಲು, ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಥವಾ ಸಿಎಂ ಬೊಮ್ಮಾಯಿ ಅವರು ಸಚಿವ ಸ್ಥಾನದಿಂದ ಶ್ರೀರಾಮುಲು ಅವರನ್ನು ವಜಾಗೊಳಿಸಬೇಕು ಎಂದು ಮಾಜಿ ಸಂಸದ ಉಗ್ರಪ್ಪ ಆಗ್ರಹಿಸಿದ್ದಾರೆ. ಬಳ್ಳಾರಿಯ ಜಿಲ್ಲಾ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾನು ತಿನ್ನಲ್ಲ, ತಿನ್ನೋಕೆ …

Read More »

108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ

ಬೆಂಗಳೂರು: ದೇವನಹಳ್ಳಿ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ವ್ಯವಸ್ಥೆಗಳು, ಕಾರ್ಯಕ್ರಮ ಆಯೋಜನೆಗೆ ಬೇಕಾದ ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ. ನವೆಂಬರ್ 10ರಂದು ವಿಮಾನ ನಿಲ್ದಾಣದ ಆವರಣದಲ್ಲಿ ಪ್ರತಿಮೆಯ ಸಮೀಪವೇ ಇರುವ 25-30 ಎಕರೆ ಖಾಲಿ ಜಾಗದಲ್ಲಿ ಬೃಹತ್ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು …

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,542 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,913 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,449 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,77,068 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 4,23,087 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,37,66,738 ಡೋಸ್ …

Read More »

ನ. 11ಕ್ಕೆ ಕರ್ನಾಟಕಕ್ಕೆ ಪ್ರಧಾನಿ ಆಗಮನ

ಬೆಂಗಳೂರು: ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು  ಕರ್ನಾಟಕಕ್ಕೆ ನವೆಂಬರ್ 10ರಂದು ಬರೋದಕ್ಕೆ ದಿನಾಂಕ ನಿಗದಿಯಾಗಿತ್ತು. ಆದ್ರೇ ಇದೀಗ ಈ ಭೇಟಿ ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದ್ದು, ನವೆಂಬರ್ 10ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವಂತ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ನವೆಂಬರ್ 10ರ ಬದಲಾಗಿ ನವೆಂಬರ್ 11ರಂದು ಆಗಮಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ.

Read More »

ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ

ಬೆಂಗಳೂರು: ಕಳೆದ ವರ್ಷದ ಫೈಲ್ ಅನ್ನೇ ಕಾಪಿ ಪೇಸ್ಟ್ ಮಾಡಿಕೊಂಡು ಬಂದಿದ್ದ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಕೆಲ ಅಧಿಕಾರಿಗಳು ಹಳೇ ಅಂಕಿಅಂಶವನ್ನು ಕಾಪಿ ಪೇಸ್ಟ್ ಮಾಡಿ ಬಂದಿದ್ದರು. ಇದರಿಂದ ಸಿಟ್ಟಾದ ಸಿಎಂ ಬೊಮ್ಮಾಯಿ‌ ಹಾಗೂ ಸಚಿವ ಮಾಧುಸ್ವಾಮಿ ಅವರು ಸಿಇಒಗಳಿಗೆ ಸಭೆಯಲ್ಲೇ ಚಳಿ ಬಿಡಿಸಿದರು. ಬಳ್ಳಾರಿ ಸೇರಿದಂತೆ …

Read More »