Breaking News

Breaking News

ಬಳ್ಳಾರಿ ಜೀನ್ಸ್ ಅನ್ನು ಜಾಗತಿಕ ಬ್ರಾಂಡ್ ಆಗಿ ಮಾಡುತ್ತೇನೆ : ರಾಹುಲ್ ಗಾಂಧಿ

ಬಳ್ಳಾರಿ: ಬಿಜೆಪಿ ಆಡಳಿತವು ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಗಳನ್ನು ಬೆಂಬಲಿಸುವ ತನ್ನ ನೀತಿಗಳ ಮೂಲಕ ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಹಾನಿಕಾರಕ ಕ್ರಮಗಳನ್ನು ಸ್ಪಷ್ಟವಾಗಿ ತೆಗೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವುದಾಗಿಯೂ ಭರವಸೆ ನೀಡಿದರು. ರಾಹುಲ್‌ ನಿನ್ನೆ ತಮ್ಮ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಇಲ್ಲಿನ ಮೋಕಾದಲ್ಲಿ ಸಣ್ಣ ಮತ್ತು ಮಧ್ಯಮ ಜವಳಿ ಉದ್ಯಮದ ಉದ್ಯಮಿಗಳು ಮತ್ತು ಕಾರ್ಮಿಕರನ್ನು ಭೇಟಿ ಮಾಡಿದರು. …

Read More »

ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿ ನೇಣಿಗೆ ಶರಣು

ಹಾವೇರಿ : ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು. ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ …

Read More »

ನಟಿ ನಯನತಾರ ಅವರ ಬಾಡಿಗೆ ತಾಯ್ತನ ಪ್ರಕರಣವೀಗ ಸ್ಫೋಟಕ ತಿರುವು

ಚೆನ್ನೈ: ನಟಿ ನಯನತಾರ ಅವರ ಬಾಡಿಗೆ ತಾಯ್ತನ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಅವಳಿ ಮಕ್ಕಳನ್ನು ಪಡೆದ ಬಗ್ಗೆ ನಯನತಾರ ಪತಿ ವಿಘ್ನೇಶ್​ ಶಿವನ ಅ. 9ರಂದು ಟ್ವೀಟ್​ ಮಾಡಿದ್ದರು. ಇದರ ಬೆನ್ನಲ್ಲೇ ವಿವಾದ ಸೃಷ್ಟಿಯಾಗಿತ್ತು. ಕಳೆದ ಜೂನ್​ 9ರಂದು ಮದುವೆಯಾದ ತಾರಾಜೋಡಿಗೆ 4 ತಿಂಗಳಲ್ಲಿ ಮಗು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವವಾಗಿತ್ತು. ಬಳಿಕ ಬಾಡಿಗೆ ತಾಯ್ತನ ಮೂಲಕ ಮಗು ಪಡೆದಿದ್ದಾರೆ ಎಂಬ ಸುದ್ದಿಯಾಗುತ್ತಲೇ, ಬಾಡಿಗೆ ತಾಯ್ತನದ ನಿಯಮಗಳನ್ನು …

Read More »

ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರ : ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ.18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್​ ನೀಡಲಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ …

Read More »

ಹಿಂದಿಯಲ್ಲಿ ಭರ್ಜರಿ ಕಲೆಕ್ಷನ ಪಡೆದ ಕಾಂತಾರ

ಕಾಂತಾರ ಸದ್ಯ ಭಾರತೀಯ ಚಿತ್ರರಂಗದಲ್ಲಿ ಕೇಳಿಬರುತ್ತಿರುವ ಹೆಸರು. ಕರಾವಳಿಯ ದೈವಾರಾಧನೆ, ಕಲೆ ಸಂಸ್ಕೃತಿಯನ್ನೇ ಇಟ್ಟುಕೊಂಡು ನಟ ನಿರ್ದೇಶಕ ವೃಷಭ್ ಶೆಟ್ಟಿ ಹೊಸ ಲೋಕವನ್ನೇ ಸೃಷ್ಟಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಕಾಂತಾರ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕುತ್ತಿದೆ. ಒಂದೆಡೆ ಕೆಜಿಎಫ್ ದಾಖಲೆಯನ್ನು ಅಳಿಸಿರುವ ಕಾಂತಾರ, ಇದೀಗ ಹಿಂದಿ ಅವತರಿಣಿಕೆ ಕೂಡ ಬಾಕ್ಸ್ ಆಫೀಸ್ ಕೆಲೆಕ್ಷನ್ಸ್ ನಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಭಾರತೀಯ ಚಿತ್ರರಂಗದಲ್ಲಿಯೇ ಕಾಂತಾರ ಹೊಸ ಇತಿಹಾಸವನ್ನು ಸೃಷ್ಟಿಸುವತ್ತ ಮುನ್ನಡೆಯುತ್ತಿದೆ. ಕಳೆದ …

Read More »

ಯತ್ನಾಳ್ ಕುರಿತು ಬೆಲ್ಲದ ಹೇಳಿಕೆ ಒಪ್ಪುವುದಿಲ್ಲ : ಅರುಣ್ ಸಿಂಗ್

ಹುಬ್ಬಳ್ಳಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕನಲ್ಲ.ಇನ್ನೂ, ಮುಸ್ಲಿಮರ ಮೀಸಲಾತಿ ಕುರಿತು ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ಒಪ್ಪುವುದಿಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಲ್ಲ. ಅವರ ಸ್ವಭಾವವೇ ಹಾಗೇ. ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಇನ್ನೂ, ಶಾಸಕ ಅರವಿಂದ ಬೆಲ್ಲದ ಮುಸ್ಲಿಮ್ …

Read More »

ಕನ್ನಡ ಭಾಷೆಯ ದುರ್ಬಳಕೆ : ಸಂತೋಷ ಹೆಗ್ಡೆ

ಬೆಂಗಳೂರು : ‘ಕನ್ನಡಕ್ಕಿರುವ ಗೌರವವನ್ನು ದುರ್ಬಳಕೆ ಮಾಡಿಕೊಂಡು ಕೆಲವರು ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಬೇಸರ ವ್ಯಕ್ತಪಡಿಸಿದರು. ಕನ್ನಡ ಜನಶಕ್ತಿ ಕೇಂದ್ರದಿಂದ ಭಾನುವಾರ ನಡೆದ ‘ಕನ್ನಡವೆಂದರೆ ಬರಿ ನುಡಿಯಲ್ಲ’ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ‘ಕನ್ನಡವನ್ನು ಸಂವಿಧಾನ ಗೌರವಿಸಿ ಮಾನ್ಯತೆ ನೀಡಿದೆ. ಕರ್ನಾಟಕ ಹಾಗೂ ಕನ್ನಡಕ್ಕೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಎಂಬ ಭೇದಭಾವ ಇಲ್ಲ. ಕನ್ನಡಿಗರಲ್ಲಿ …

Read More »

ಆಧುನಿಕ ಭಗೀರಥ ವಿಧಿವಶ

ಮಂಡ್ಯ :16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಹಾಗೂ ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರ ಶ್ಲಾಘನೆಗೆ ಪಾತ್ರರಾಗಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಕಾಮೇಗೌಡ ಇಂದು ಮುಂಜಾನೆ ವಿಧಿವಶರಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಮೇಗೌಡರ ಸಾಮಾಜಿಕ ಕಾರ್ಯ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡು ಬಂದಿದ್ದವು. ಪ್ರಧಾನಿ …

Read More »

4 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನರೇಂದ್ರ ಕುಮಾರ್ ಅವರನ್ನು ಸಿಐಡಿ ಯಿಂದ ಪರಪ್ಪನ ಅಗ್ರಹಾರಕ್ಕೆ , ರಾಮಚಂದ್ರಪ್ಪ ಎಸ್ ಚೌಧರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಿಂದ ಕಮರ್ಷಿಯಲ್ ಸ್ಟ್ರೀಟ್ ಪೊಲಿಸ್ ಠಾಣೆಗೆ ಹಾಗೂ ಸಂದೀಪ್ ಎಸ್, ಪರಪ್ಪನ ಅಗ್ರಹಾರ ಠಾಣೆಯಿಂದ ಸಿಐಡಿಗೆ , ಸೋಮಶೇಖರ್ ಟಿ,ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್​ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.

Read More »

ಬಸನಗೌಡ ಪಾಟೀಲ ಯತ್ನಾಳ ಪಕ್ಷದ ನಾಯಕಲ್ಲ- ಅರುಣ ಸಿಂಗ್

ಹುಬ್ಬಳ್ಳಿ: ಬಸನಗೌಡ ಪಾಟೀಲ ಯತ್ನಾಳ ಪಕ್ಷದ ನಾಯಕಲ್ಲ. ಅವರೇನೋ ರಾಜ್ಯ- ರಾಷ್ಟ್ರ ನಾಯಕರಲ್ಲ. ಪಕ್ಷದ ಕೋರ್ ಕಮಿಟಿಯಲ್ಲಿ ಇಲ್ಲ. ಹೀಗಾಗಿ ಅವರ ಮಾತಿಗೆ ಮನ್ನಣೆ ಕೊಡಬೇಕಾಗಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರ ಬಗ್ಗೆ ಮಾತನಾಡಿದ್ದರ ಬಗ್ಗೆ ಹಿಂದೆಯೇ ನೋಟೀಸ್ ನೀಡಲಾಗಿದೆ. ಅದಕ್ಕೆ ಉತ್ತರ ನೀಡಿದ್ದಾರೆ. ಹಲವು ಬಾರಿ ಹೇಳಿದರೂ ಅದು ಪುನರಾವರ್ತನೆಯಾಗಿದೆ. ಅವರ ಸ್ವಭಾವ ಇರುವುದೇ ಹಾಗೆ. …

Read More »