Breaking News

Breaking News

19 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬಿಡುವ ನೀಡಿದ್ದ ಮಳೆ ಈಗ ಮತ್ತೆ ಸುರಿಯುತ್ತಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಜಮೀನುಗಳಿಗೆ ನೀರು ಹೋಗಿ ಅಪಾರ ನಷ್ಟವೂ ಸಂಭವಿಸಿದೆ. ಅದರಲ್ಲೂ ಒಂದು ವಾರದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಜಮೀನುಗಳಿಗೆ ನೀರು ಹೋಗಿ ಅಪಾರ ನಷ್ಟವೂ ಸಂಭವಿಸಿದೆ. ಇದರ ಮಧ್ಯೆ ರಾಜ್ಯದಲ್ಲಿ …

Read More »

ಬಸನಗೌಡ ಪಾಟೀಲ ಯತ್ನಾಳ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅರುಣ್‌ಸಿಂಗ್

‌ಹಾವೇರಿ: ‘ಕೆಲವರು ಹೀಗೂ ಇರುತ್ತಾರೆ, ಮಾತಾಡೋದೇ ಅವರ ಕೆಲಸ. ಇದು ಅವರ ಹವ್ಯಾಸ. ಪಕ್ಷದಿಂದ ಈಗಾಗಲೇ ಬಸನಗೌಡ ಪಾಟೀಲ ಯತ್ನಾಳ್‌ ಅವರಿಗೆ ನೋಟಿಸ್ ಜಾರಿಯಾಗಿದೆ. ಆದ್ರೆ ಕಲಿಯುವುದಿಲ್ಲ, ತಿಳಿದುಕೊಳ್ಳಲ್ಲ ಅಂದ್ರೆ ಏನು ಮಾಡೋದು? ಬಿಜೆಪಿ ಕಾರ್ಯಕರ್ತರು ಇದನ್ನ ಇಷ್ಟಪಡಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌ ಅಸಮಾಧಾನ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರನ್ನ ಎಲ್ಲ ಪಕ್ಷಗಳು ಗೌರವಿಸುತ್ತವೆ. ಬಿಜೆಪಿ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಇದು ಅವರಿಗೆ ಕಾಣುತ್ತಿಲ್ವಾ? ನಮ್ಮ …

Read More »

67ನೇ ಕನ್ನಡ ರಾಜ್ಯೋತ್ಸವ : 10 ದಿನ ಮನೆ ಮೇಲೆ ಧ್ವಜಾರೋಹಣ

ಬೆಂಗಳೂರು : 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆಮನೆಯ ಮೇಲೂ ಅಕ್ಟೋಬರ್ 28ರಿಂದ ಹತ್ತು ದಿನಗಳ ಕಾಲ ಕನ್ನಡ ಧ್ವಜಾರೋಹಣ ಮಾಡಲಾಗುವುದು ಎಂದು ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಜ್ಯೋತ್ಸವ ಆಚರಣೆ ಕುರಿತು ಕ್ಷೇತ್ರ ವ್ಯಾಪ್ತಿಯ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಅವರು, ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆಮನೆಯ ಮೇಲೂ ರಾಷ್ಟ್ರಧ್ಜಜ ಹಾರಿಸಿದಂತೆಯೇ …

Read More »

ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ತೆರಳುವುದು : ಸಿಎಂ

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಇತರ ಹಿರಿಯ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ಜನ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ನೀಡಿದಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ಹೇಳಿದರು. ಕೊಲ್ಹಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಿವಸೇನೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ …

Read More »

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ : ಅರುಣ್ ಸಿಂಗ್

ಹಾವೇರಿ: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ರಾಜ್ಯದಲ್ಲೂ 2023 ರ ಚುನಾವಣೆ ತಯಾರಿ ಬಹಳ ಚೆನ್ನಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾದಗ ಮಾಸೂರಿನಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ …

Read More »

ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿಗೆ ನೋಟಿಸ್ ಜಾರಿ

ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಸೂಕ್ತ ಕಾರಣ ನೀಡದೆ, ಅನುಮತಿ ಪಡೆಯದೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಿರುವುದಾಗಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೆ ಸಚಿವರು, ಶಾಸಕರು ಲಿಖಿತವಾಗಿ ಅಥವಾ ಮೌಖಿಕವಾಗಿ ಸೂಕ್ತ ಕಾರಣ ನೀಡುತ್ತಾರೆ. ಆದರೆ, ರಮೇಶ್ …

Read More »

ವೀರಪ್ಪನ್‌ ಹತ್ಯೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿಜಯ್‌ ಕುಮಾರ್‌ ರಾಜಿನಾಮೆ

ಹೊಸದಿಲ್ಲಿ: ಕೇಂದ್ರ ಗೃಹ ಸಚಿವಾಲಯದ ಹಿರಿಯ ಭದ್ರತಾ ಸಲಹೆಗಾರ ಕೆ.ವಿಜಯ್‌ ಕುಮಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಖ್ಯಾತ ದಂತಚೋರ, ಕಾಡುಗಳ್ಳ ವೀರಪ್ಪನ್‌ ಹತ್ಯೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿಜಯ್‌ ಕುಮಾರ್‌ ಪ್ರಸ್ತುತ ತಮ್ಮ ವಾಸ್ತವ್ಯವನ್ನು ದಿಲ್ಲಿಯಿಂದ ಚೆನ್ನೈಗೆ ಬದಲಾಯಿಸಿಕೊಂಡಿದ್ದಾರೆ.ನಿವೃತ್ತಿಗೆ ಖಾಸಗಿ ವಿಚಾರಗಳನ್ನು ಕಾರಣವಾಗಿ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ವಿಜಯ್‌ ಕುಮಾರ್‌ …

Read More »

ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಅಕ್ಟೋಬರ್ 17 ರ ನಾಳೆಯಿಂದ ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 1 ರಿಂದ 10 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ 17 ರಿಂದ ಅಕ್ಟೋಬರ್ 27 ರವರೆಗೆ ನಡೆಸಲು ಉದ್ದೇಶಿಸಲಾಗಿದ್ದ ಮೊದಲ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 …

Read More »

ಮುರುಘಾ ಮಠದಲ್ಲಿ ಮಗು ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಚಿತ್ರದುರ್ಗ : ಮುರುಘಾ ಮಠದಲ್ಲಿ ಮಗು ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಗು ನಾಲ್ಕೂವರೆ ವರ್ಷದ ಹಿಂದೆ ಮಠದ ಮುಂದಿನ ಕಾಂಪೌಂಡ್ ನಲ್ಲಿ ಸಿಕ್ಕಿತ್ತು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಮಠದ ಮುಂದಿನ ಕಾಂಪೌಂಡ್ ನಲ್ಲಿ ನಾಲ್ಕೂವರೆ ವರ್ಷದ ಹಿಂದೆ ಈ ಮಗು ಸಿಕ್ಕಿತ್ತು ಎಂದು ಮಠದ ಬಳಿಯ ಹೋಟೆಲ್ ನ ಮಹಿಳೆಯೊಬ್ಬರು ಮಾಹಿತಿ ನೀಡಿದ್ದು, ಫೈರೋಜಾ ಎಂಬ ಮಹಿಳೆ ನಾಲ್ಕುವರೆ ವರ್ಷದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದು, ಮಗು …

Read More »

ಮೇಕ್ಕಾ ಉಮ್ರಾಗೆ ಹೋಗಿದ್ದ ಯಾತ್ರಾರ್ಥಿ ನಿಧನ : ಮೆಕ್ಕಾದಲ್ಲೇ ಅಂತ್ಯಕ್ರಿಯೆ

ಧಾರವಾಡ : ಮೇಕ್ಕಾಗೆ ಉಮ್ರಾಗೆ ಹೋಗಿದ್ದ ಯಾತ್ರಾರ್ಥಿ ಬೆಳಿಗ್ಗೆ ಹೃದಯಾಘಾತದಿಂದ ಸೌದಿಯ ಮೇಕ್ಕಾದಲ್ಲಿ ನಿಧನ ಹೊಂದಿದ್ದಾರೆ. ಧಾರವಾಡ ಜಿಲ್ಲೆಯ ವರವ ನಾಗಲಾವಿಯ ಸೈಯ್ಯದ ದಾದಾಪೀರ ಪೀರಜಾದೆ (70) ಎಂದು ತಿಳಿದು ಬಂದಿದೆ. ಕಳೆದ ಅಕ್ಟೋಬರ್ 9 ರಂದು ಧಾರವಾಡದಿಂದ ಉಮ್ರಾಗಾಗಿ ಸೌದಿಗೆ ಪೀರಜಾದೆ ಹೋಗಿದ್ದರು. ನಾಗಲಾವಿ ಗ್ರಾಮದಲ್ಲಿ ಇರುವ ಶರೀಫ್ ಸಜ್ಜಾದ ದರ್ಗಾದ ದಾದಾಪೀರ ಪೀರಜಾದೆ ಗುರುಗಳು ಆಗಿದ್ದರು. ಇವರ ಜೊತೆಯಲ್ಲಿ ಕುಟುಂಬದ ಕೆಲ‌ ಸದಸ್ಯರು ಕೂಡಾ ಹೋಗಿದ್ದರು. ಪೀರಜಾದೆ …

Read More »