Breaking News

Breaking News

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿತ್ತು. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಕೆಲವೆಡೆ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, …

Read More »

ಸಿದ್ದರಾಮಯ್ಯ, ಡಿಕೆಶಿ ಅವರನ್ನು ಜೋಡಿಸುವುದರಲ್ಲೇ ರಗಾ ಸುಸ್ತಾಗಿದ್ದಾರೆ : ಬೊಮ್ಮಾಯಿ

ಹೊಸಪೇಟೆ/ಕೊಪ್ಪಳ: ಅಖಂಡ ಭಾರತವನ್ನು ವಿಭಜಿಸಿದ್ದ ಕಾಂಗ್ರೆಸ್​ನಿಂದ ಈಗ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಜೋಡಿಸುವುದರಲ್ಲೇ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸುಸ್ತಾಗಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು. ಹೊಸಪೇಟೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನೀತಿಯಿಂದಾಗಿ ದೇಶದ ಪೂರ್ವದಿಂದ ದಕ್ಷಿಣದವರೆಗಿನ 11 ರಾಜ್ಯಗಳಲ್ಲಿ ನಕ್ಸಲೈಟ್​ಗಳು ಹುಟ್ಟಿಕೊಂಡರು. ಖಲಿಸ್ತಾನ್ ಪರಿಕಲ್ಪನೆ ಜನಿಸಿದ್ದು ಕಾಂಗ್ರೆಸ್ …

Read More »

ಬಸ್ ಗೆ ಬೆಂಕಿ : 20 ಮಂದಿ ಸಜೀವ ದಹನ, ಹಲವು ಜನರಿಗೆ ಗಾಯ

ಕರಾಚಿ:ಪ್ರವಾಹ ಸಂತ್ರಸ್ತರನ್ನು ಕರೆದೊಯ್ಯುತ್ತಿದ್ದ ಹವಾನಿಯಂತ್ರಿತ ಖಾಸಗಿ ಬಸ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 20 ಮಂದಿ ಸಜೀವ ದಹನವಾಗಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಬುಧವಾರ (ಅಕ್ಟೋಬರ್ 13) ಪಾಕಿಸ್ತಾನದ ನೂರಿಯಾಬಾದ್ ಸಮೀಪದ ಎಂ 9 ಹೆದ್ದಾರಿ ಪ್ರದೇಶದಲ್ಲಿ ಸಂಭವಿಸಿರುವುದಾಗಿ ವರದಿ ತಿಳಿಸಿದೆ. ಮಾಧ್ಯಮದ ವರದಿ ಪ್ರಕಾರ, ಪಾಕ್ ನ ಹೈದರಾಬಾದ್ ನಿಂದ ಪ್ರವಾಹ ಸಂತ್ರಸ್ತರನ್ನು ಕರಾಚಿಗೆ ಹವಾನಿಯಂತ್ರಿತ ಖಾಸಗಿ ಬಸ್ ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ …

Read More »

ಪ್ರಧಾನಿ ಅಭ್ಯರ್ಥಿಯ ಬಗ್ಗೆ ನೋಡೋಣ : ಮಲ್ಲಿಕಾರ್ಜುನ ೆ

ಭೋಪಾಲ/ಹೊಸದಿಲ್ಲಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಯ ಬಳಿಕ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ನೋಡೋಣ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭೋಪಾಲದಲ್ಲಿ ಪ್ರಚಾರ ನಡೆಸಿದ ವೇಳೆ, ಪತ್ರಕರ್ತರು 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ ಯಾರು ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಖರ್ಗೆ, “ಮೊದಲು ಈ ಚುನಾವಣೆಯನ್ನು ಎದುರಿಸೋಣ. “ಬಕ್ರೀದ್‌ ಮೇ ಬಚೇಂಗೆ ತೊ ಮೊಹರಮ್‌ ಮೇ ನಾಚೇಂಗೆ'(ಬಕ್ರೀದ್‌ ಹಬ್ಬದಲ್ಲಿ ಉಳಿದರೆ ಮೊಹರಂ ಹಬ್ಬದಲ್ಲಿ ಕುಣಿಯೋಣ). …

Read More »

ಬ್ರೇಕ್ ಫೇಲ್ : ಕಬ್ಬಿನ ಗದ್ದೆಗೆ ನುಗ್ಗಿದ ಬಸ್

ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್​ನ ಬ್ರೇಕ್ ಫೇಲ್ ಆದ ಹಿನ್ನೆಲೆ ಕಬ್ಬಿನ ಗದ್ದೆಗೆ ನುಗ್ಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ‌ಯರಗಟ್ಟಿ ತಾಲೂಕಿನ ಸೋಮಾಪುರ ಗ್ರಾಮದಿಂದ ತಲ್ಲೂರು ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಳಿಕ ನಿಯಂತ್ರಣ ತಪ್ಪಿ ತಲ್ಲೂರ ಗ್ರಾಮದ ಬಾಬು ಪಕಾಲಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ನುಗ್ಗಿದೆ. …

Read More »

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಬೆಂಗಳೂರು : ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಸಿದ್ದರಾಮಯ್ಯ ಅವರ ವಿರುದ್ಧ 200 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಜಾಗದ ಡಿನೋಟಿಫೈ ಆರೋಪವಿದೆ. ಈ ಹಿನ್ನೆಲೆ ಬಿಜೆಪಿ ನಾಯಕ ಎನ್.ಆರ್.ರಮೇಶ್ ದೂರು ಸಲ್ಲಿಸಲಾಗಿದೆ. ಲಾಲ್​ಬಾಗ್ ಸಿದ್ಧಾಪುರದ 2 ಎಕರೆ 36.5 ಗುಂಟೆ ಬಿಡಿಎ ಜಾಗವನ್ನ ಬಿಲ್ಡರ್​ಗೆ ಡಿನೋಟಿಫೈ ಮಾಡಿದ ಆರೋಪ ಕೇಳಿ ಬಂದಿದೆ. ಬಿಡಿಎ ಉದ್ಯಾನವನ , ಸಾರ್ವಜನಿಕ ಬಳಕೆಗೆ ಮೀಸಲಿಟ್ಟ …

Read More »

ಹಿಜಾಬ್ ವಿವಾದ : ಇಂದು ಸುಪ್ರೀಂಕೋರ್ಟ್ ತೀರ್ಪು

ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ , ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಗುರುವಾರ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ …

Read More »

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಘೋಷಣೆ

ಬೆಂಗಳೂರು: ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಸುವ ಕುರಿತು ಬುಧವಾರ ವಿಧಾನಸೌಧದಲ್ಲಿ ನಡೆದ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕಾರ್ಮಿಕ ಖಾತೆ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ‍ ವಿ ಸುನೀಲ್ ಕುಮಾರ್, …

Read More »

ಹುಬ್ಬಳ್ಳಿಯಿದ ದೆಹಲಿಗೆ ನವೆಂಬರ್​14 ರಿಂದ ನೇರ ವಿಮಾನ ಸೇವೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಅವಳಿ ನಗರದ ಜನರ ಬಹುದಿನಗಳ‌ ಕನಸು ನನಸಾಗುವ ದಿನ ಹತ್ತಿರವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂಡಿಗೋ ಏರ್‌ ಲೈನ್ಸ್‌ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹುಬ್ಬಳ್ಳಿಯಿಂದ ದೆಹಲಿಗೆ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಇದೇ ನವೆಂಬರ್‌ 14, 2022ರಿಂದ …

Read More »

ಹುಬ್ಬಳ್ಳಿ ಯಲ್ಲಿ ಖೋಟಾ ನೋಟಿನ ಹಾವಳಿ: ಮೂವರನ್ನು ಬಂಧನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಷ್ಟು ದಿನ ಬಂದ್ ಆಗಿದ್ದ ಖೋಟಾ ನೋಟ್ ಚಲಾವಣೆ ಮತ್ತೇ ಮುನ್ನೆಲೆಗೆ ಬಂದಿದೆ. ಪ್ರಖ್ಯಾತಿ ಮತ್ತು ಕುಖ್ಯಾತಿಗಳನ್ನು ಶ್ರೇಣೀಕೃತ ಹಂತದಲ್ಲಿ ಸರಿದೂಗಿಸಿಕೊಂಡು ಹೋಗುತ್ತಿರುವ ಹುಬ್ಬಳ್ಳಿಯಲ್ಲಿ ಖೋಟಾ ನೋಟಿನ ಹಾವಳಿ ಮತ್ತೇ ಸದ್ದು ಮಾಡುತ್ತಿದೆ. ಹುಬ್ಬಳ್ಳಿಯ ಚನ್ನಮ್ಮ ಬಸ್ ನಿಲ್ದಾಣದ ಬಳಿ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಮೂವರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಶಿವಾನಂದ ಕಾರಜೋಳ, ವಿಜಯಪುರದ ಅಡವಿ …

Read More »