ಬೆಂಗಳೂರು: 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಕೆ.ಆರ್.ಪುರ ಸಂಚಾರ ಠಾಣೆ ಪಿಎಸ್‌ಐ ಸುಬ್ರಮಣಿ (35) ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಎಡಿಜಿಪಿ ಅಮ್ರಿತ್ ಪೌಲ್, ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ 60ಕ್ಕೂ ಹೆಚ್ಚು ಆರೋಪಿಗಳನ್ನು ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿದೆ. ‘ಪಿಎಸ್‌ಐ ಅಕ್ರಮ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸುಬ್ರಮಣಿ ತಲೆಮರೆಸಿಕೊಂಡಿದ್ದ. ಬೆಂಗಳೂರಿನಲ್ಲಿ ಗುರುವಾರ ಈತನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





