Breaking News

Breaking News

ಗರ್ಭದಲ್ಲೇ ಕಣ್ಮುಚ್ಚಿದ 9 ತಿಂಗಳ ಕಂದಮ್ಮ, ಅಮ್ಮನೂ ಸಾವು -ಆರೋಪಿ ಅರೆಸ್ಟ್! ಆಗಿದ್ದೇನು?

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ 9 ತಿಂಗಳ ಗರ್ಭಿಣಿ ಸವಿತಾ (21) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ನೇಪಾಳ ಮೂಲದ ದಂಪತಿ ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ವಾಸವಿದ್ದು, ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದರು. ಮೃತಳ ಸಾವು ಸಹಜವಲ್ಲ, ಪತಿ ಹೇಮರಾಜು ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೂರ್ಯನಗರ ಠಾಣೆ ಪೊಲೀಸರು ಹೇಮರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸವಿತಾ ಸಾವಿಗೆ ನಿಖರ ಕಾರಣ …

Read More »

ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ರಕ್ತಪಾತ: ಮೂವರನ್ನು ಭೀಕರವಾಗಿ ಕೊಲೆ ಮಾಡಿ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ 34 ವರ್ಷದ ಪ್ರಶಾಂತ್ ಎಂಬಾತ ತನ್ನ ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಹಾಗೂ ಮಾವ ಸತೀಶ್ ಅವರನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಕೃತ್ಯದ ಬಳಿಕ ಓಡಿಹೋಗಲು ಯತ್ನಿಸಿದ ಆತನನ್ನು ಮನೆ ಮಾಲೀಕರು ಕೋಣೆಯಲ್ಲಿ ಹಾಕಿ ಲಾಕ್ ಮಾಡಿದ್ದಾರೆ. ಇದರಿಂದ ಹೆದರಿದ ಪ್ರಶಾಂತ್ ಪೊಲೀಸರ ಬಂಧನದ ಭೀತಿಯಿಂದ ಅದೇ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಪ್ರಶಾಂತ್ ಕಳೆದ ಒಂದು ವರ್ಷದಿಂದ ಕೆಲಸವಿಲ್ಲದೆ ಮನೆಯಲ್ಲೇ ಖಾಲಿ ಕುಳಿತಿದ್ದನು. …

Read More »

ಬೀದರ್ ನಲ್ಲಿ ಭೀಕರ ಮರ್ಡರ್ : ಸ್ನಾನ ಮಾಡುವಾಗಲೇ, ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

ಬೀದರ್ ನಲ್ಲಿ ಭೀಕರವಾಗಿ ಕೊಲೆ ನಡೆದಿದ್ದು ಕೊಡಲಿಯಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೂಟ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು, ಸ್ನಾನ ಮಾಡುವಾಗ ಮನೆಗೆ ನುಗ್ಗಿ ದುಷ್ಕರ್ಮಿ ಕೊಲೆಗೈದಿದ್ದಾನೆ.ಹತ್ಯೆಯಾದ ಮಹಿಳೆಯನ್ನು ಅನಿತಾ (32) ಎಂದು ತಿಳಿದುಬಂದಿದೆ. ಕೈಲಾಶ್ ವೈಜನಾಥ್ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಕಟಕ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ …

Read More »

ವಿಜಯಪುರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ತಾಯಿ, ಇಬ್ಬರು ಮಕ್ಕಳ ಸಾವು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಕುಟುಂಬದ ಕ್ರೇಟಾ ಕಾರು ಅಪಘಾತಕ್ಕೀಡಾಗಿದೆ. ಕಾರು ಚಲಾಯಿಸುತ್ತಿದ್ದ ಹರಿವೆಂಕಟರಾಮ್ ಹಿಂದಿನ ರಾತ್ರಿ ನಿದ್ದೆ ಮಾಡಿರದ ಕಾರಣ ನಿದ್ದೆ ಮಂಪರಿನಲ್ಲಿ ವೇಗವಾಗಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಮೃತರನ್ನು ಸತ್ಯವೇಣಿ …

Read More »

ರಾಜ್ಯದಲ್ಲಿ ಹೀನ ಕೃತ್ಯ : ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಗುಪ್ತಾಂಗ ಪ್ರದರ್ಶನ : ಕಂಡಕ್ಟರ್ ಅರೆಸ್ಟ್!

ಮಂಗಳೂರು-ವಿಟ್ಲ ಮಾರ್ಗದ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ, ಅಸಭ್ಯ ಸನ್ನೆ ಹಾಗೂ ಗುಪ್ತಾಂಗ ಪ್ರದರ್ಶಿಸಿದ ಆರೋಪದ ಮೇಲೆ ಬಸ್ ಕಂಡಕ್ಟರ್ ಇರ್ಫಾನ್ (32)ನನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 9ರಂದು ಸಂಜೆ ಸಂಚರಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಯರನ್ನು ಹಿಂದಿನ ಸೀಟಿಗೆ ಬರುವಂತೆ ಸನ್ನೆ ಮಾಡಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ …

Read More »

ದಾವಣಗೆರೆ: ಜಿಮ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಶೋಷಣೆ. ಬ್ಲಾಕ್‌ಮೇಲ್‌!

ದಾವಣಗೆರೆಯಲ್ಲಿ ಜಿಮ್‌ಗೆ ಬರುತ್ತಿದ್ದ ಯುವತಿಯರು ಮತ್ತು ಗೃಹಿಣಿಯರನ್ನು ಲೈಂಗಿಕವಾಗಿ ಶೋಷಿಸಿ, ಅಶ್ಲೀಲ ಫೋಟೋ-ವಿಡಿಯೋಗಳ ಮೂಲಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಒಂದೇ ಸಮುದಾಯದ 13ಕ್ಕೂ ಹೆಚ್ಚು ಮಹಿಳೆಯರು ಈ ಕೃತ್ಯಕ್ಕೆ ಒಳಗಾಗಿರುವ ಆರೋಪ ಕೇಳಿಬಂದಿದೆ. ಆರೋಪಿ ಜಿಮ್ ಟ್ರೈನರ್ ಮದುವೆಯಾಗಿ ಮೂವರು ಮಕ್ಕಳಿದ್ದರೂ ತಾನು ಅವಿವಾಹಿತ ಎಂದು ನಂಬಿಸಿ, ವಿವಿಧ ಹೆಸರಿನಲ್ಲಿ ಮಹಿಳೆಯರ ಪರಿಚಯ ಬೆಳೆಸಿ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಬಳಿಕ ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. …

Read More »

ಬೆದರಿಸಿ ಕೋಣಂದೂರಿನ ಯುವತಿ ಮೇಲೆ ಅತ್ಯಾಚಾರ… ಇಬ್ಬರ ಬಂಧನ

ತೀರ್ಥಹಳ್ಳಿ: ಕೋಣಂದೂರಿನ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿರುವ ಆರೋಪದಡಿ ಇಬ್ಬರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ದೂರಿನ ಪ್ರಕಾರ, ಮುಖ್ಯ ಆರೋಪಿ ಆಸಿಫ್ ಎಂಬಾತ ಯುವತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಮೂರೂ ತಿಂಗಳ ಹಿಂದೆ ಪರಿಚಯಿಸಿಕೊಂಡು, ಬಳಿಕ ಆಕೆಯ ಫೋಟೋವನ್ನು ಅಸಭ್ಯವಾಗಿ ಎಡಿಟ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಲವು ಬಾರಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಆಸಿಫ್ ಜೊತೆ …

Read More »

ತಾಯಿ ಕೊಂದು ನಾಲ್ಕು ದಿನ ಶವದೊಂದಿಗೆ ಇದ್ದ ಮಗ !

ಮೈಸೂರು:ತಾಯಿಯನ್ನೇ ಕೊಂದ ಮಾನಸಿಕ ಅಸ್ವಸ್ಥನೊಬ್ಬ ನಾಲ್ಕು ದಿನ ಮನೆಯಲ್ಲಿ ಶವದೊಂದಿಗೆ ವಾಸವಿದ್ದ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಡಾ.ರಾಜ್‌ಕುಮಾರ್ ರಸ್ತೆಯ ಜೆಎಸ್‌ಎಸ್ ಲೇಔಟ್‌ನ ನಿವಾಸಿಯಾಗಿದ್ದ ಸರ್ಕಾರಿ ನಿವೃತ್ತ ಅಧಿಕಾರಿ ರತ್ನಮ್ಮ (74) ಕೊಲೆಯಾಗಿದ್ದು, ಪುತ್ರ ಅರುಣ್ ಕುಮಾರ್(39)ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥನಾಗಿದ್ದ ಅರುಣ್ ಕುಮಾರ್, ತಾಯಿಯೊಂದಿಗೆ ಮನೆಯಲ್ಲಿ ವಾಸವಿದ್ದ. ನಾಲ್ಕು ದಿನಗಳ ಹಿಂದೆಯೇ ಮನೆಯಲ್ಲಿ ತಾಯಿ ರತ್ನಮ್ಮ ಅವರನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. …

Read More »

ಪಂಚಾಯಿತಿ ಸಿಬ್ಬಂದಿ ಮೇಲೆ ಹಲ್ಲೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಯ ಬಿಲ್‌ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನೊಬ್ಬ ಕಚೇರಿಯಲ್ಲಿ ರಂಪಾಟ ನಡೆಸಿ ಕಂಪ್ಯೂಟರ್ ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ಯಾಗೊತ್ತೂರು ನಿವಾಸಿ ಗುತ್ತಿಗೆದಾರ ಮುನಿಶಾಮಪ್ಪ ವಿರುದ್ಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕುಮಾರ್ ದೂರು ನೀಡಿದ್ದಾರೆ. ಇಂಜಿನಿಯರ್ ಬಿಲ್ ಮೊತ್ತ ಕಡಿಮೆ ಮಾಡಿದ್ದಾರೆ ಎಂದು …

Read More »

ಮಂಗಳೂರಲ್ಲಿ 6 ಅಕ್ರಮ ಬಾಂಗ್ಲಾದೇಶ ವಲಸಿಗರು ಅರೆಸ್ಟ್!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೂರತ್ಕಲ್ ಬಳಿ ಅಕ್ರಮವಾಗಿ ನೆಲೆಸಿದ್ದ ಆರು ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೆ ಭಾರತದ ಗಡಿಯೊಳಗೆ ನುಸುಳಿ, ಮಂಗಳೂರಿನಲ್ಲಿ ತಂಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸೂರತ್ಕಲ್ ವ್ಯಾಪ್ತಿಯಲ್ಲಿ ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಬಾಂಗ್ಲಾದೇಶಿ ವಲಸಿಗರು ಮಂಗಳೂರಿನ ಸೂರತ್ಕಲ್‌ನ ಮುಕ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ …

Read More »