BigTv News
October 2, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ನೈಋುತ್ಯ ಮುಂಗಾರು ಭರ್ಜರಿ ಮಳೆ ಸುರಿಸಿದೆ. ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.20ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದ ಯಾವುದೇ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಳೆಯ ಕೊರತೆ ಆಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ರಾಜ್ಯದ ವಾಡಿಕೆಯ ಮುಂಗಾರು ಮಳೆಯ ಪ್ರಮಾಣ 85.2 ಸೆಂ.ಮೀ. ಇದೆ. ಆದರೆ ಈ ಬಾರಿ 100.19 ಸೆಂ.ಮೀ. ಮಳೆ ಸುರಿಯುವ ಮೂಲಕ ಸುಮಾರು …
Read More »
BigTv News
October 2, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ, ಪ್ರಕಾಶಕ, ಗೋಕುಲಂ ಬಡಾವಣೆ ನಿವಾಸಿ ಟಿ.ಎಸ್.ಛಾಯಾಪತಿ (79) ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆ ಎಂಬ ಪ್ರಕಾಶನ ನಡೆಸುತ್ತಿದ್ದ ಅವರು, ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿದ್ದರು. 25 ಕೃತಿಗಳನ್ನು ತಾವೇ ಬರೆದಿದ್ದರು. ಅವರಿಗೆ ಸರ್ಕಾರದಿಂದ ಅತ್ಯುತ್ತಮ ಪ್ರಕಾಶಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅಂತ್ಯಕ್ರಿಯೆ ಅ.2 (ಭಾನುವಾರ) ಮಧ್ಯಾಹ್ನ ಗೋಕುಲಂ ಬಡಾವಣೆಯ ರುದ್ರಭೂಮಿಯಲ್ಲಿ …
Read More »
BigTv News
October 2, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ನಲ್ಲಿದೆ. ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ. ರಾಹುಲ್ ಗಾಂಧಿ, ಸೋನಿಯಾಗಾಂಧಿ, ಡಿ.ಕೆ. ಶಿವಕುಮಾರ್ ಬೇಲ್ ನಲ್ಲಿದ್ದಾರ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಎಟಿಎಂ ಆಗಿತ್ತು ಎಂದು ತಿರುಗೇಟು ನೀಡಿದ್ದಾರೆ. …
Read More »
BigTv News
October 2, 2022
Breaking News, ಬೆಂಗಳೂರು
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಯೋಗ ಕ್ಷೇಮ ವಿಚಾರಿಸಿದರು.ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
Read More »
BigTv News
October 2, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಇಂದು ಅವರು ಕೊರೊನಾ ವೇಳೆ ಸೋಂಕು ಟೆಸ್ಟ್ ಮಾಡಿಸಿಕೊಂಡಿದ್ದರು,ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Read More »
BigTv News
October 2, 2022
Breaking News, ಬೆಳಗಾವಿ
ಬೆಳಗಾವಿ: ಜಿಲ್ಲೆಯ ಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಿಡಲಗಾ ಜೈಲಿನಲ್ಲಿ ಇದ್ದ ವಿಚಾರಣಾದೀನ ಕೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್ಶೀಟ್ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read More »
BigTv News
October 2, 2022
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪ ಸಂಬಂಧ ನಡೆದ ಜಗಳದಲ್ಲಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನನ್ನ ಬರ್ಬರವಾಗಿ ಕೊಲೆ ಮಾಡಿದ್ದಾರೆ. ದೊಡ್ಡಬಳ್ಳಾಫುರ ಮೂಲದ ಯುವಕ ನಂದಾ (ಕೊಲೆಯಾದವ) ಎಂಬಾತ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ …
Read More »
BigTv News
October 2, 2022
Breaking News
ಭಾರತದ ಮೂರನೆಯ ವಂದೇ ಭಾರತ್ ಸೆಮಿ ಹೈ ಸ್ಪೀಡ್ ರೈಲು ಅಹಮದಾಬಾದ್ ಇಂದ ಮುಂಬೈಗೆ ತನ್ನ ಮೊದಲ ಪ್ರಯಾಣವನ್ನು 313 ಪ್ರಯಾಣಿಕರನ್ನು ಹೊತ್ತು ಸಂಚರಿಸಿದೆ. 492 ಕಿ.ಮೀ ದೂರದ ಈ ಪ್ರಯಾಣವನ್ನ 5 ಗಂಟೆ 30 ನಿಮಿಷಗಳಲ್ಲಿ ಮುಗಿಸಿದೆ. ಪ್ರಧಾನಿ ನರೇಂದ್ರ ಮೋದಿ ನೆನ್ನೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ರೈಲಿನಲ್ಲಿದ್ದ ಪ್ರಯಾಣಿಕರು ವಂದೇ ಮಾತರಂ ಘೋಷಣೆಯನ್ನು ಕೂಗುವ ಮೂಲಕ ಹರ್ಷವನ್ನು ವ್ಯಕ್ತಪಡಿಸಿದರು. ಮೊದಲ ವಂದೇ ಭಾರತ್ …
Read More »
BigTv News
October 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನೂರಾರು ಸ್ಟಾರ್ಟಫ್ ಗಳ ಬೆಳವಣಿಗೆಗೆ ಹೆಸರಾಗಿರುವ ದೇಶಪಾಂಡೆ ಸ್ಟಾರ್ಟ್ ಅಫ್ ಸಹಯೋಗದೊಂದಿಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟೆಕ್ಸಲರೇಶನ್(ಟೆಕ್ ಉತ್ಸವ) 2022 ರಾಷ್ಟ್ರೀಯ ತಾಂತ್ರಿಕ ಶಕ್ತಿಯ ಪ್ರದರ್ಶನವನ್ನು ಅಕ್ಟೋಬರ್ 02,03ರಂದು ಹುಬ್ಬಳ್ಳಿಯ ಡೆನಿಸನ್ಸ್ ಹೊಟೇಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ,ಧಾರವಾಡ, ಬೆಳಗಾವಿ ಕ್ಲಸ್ಟರ್ ನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಎರಡು ದಿನಗಳ ಟೆಕ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, 1000ಕ್ಕೂ ಅಧಿಕ ಪ್ರತಿನಿಧಿಗಳು, 2000ಕ್ಕೂ ಅಧಿಕ ವಾಕಥಾನ್ ಸ್ಪರ್ಧಿಗಳು, 50ಕ್ಕೂ ಅಧಿಕ ಸ್ಟಾರ್ಟ್ …
Read More »
BigTv News
October 1, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಟನ್ ಮಾರುಕಟ್ಟೆಯಲ್ಲಿರುವ ಗೋಡೌನ್ ಒಳಗಡೆ ಹಾಕಲಾಗಿದ್ದ ನೂರಕ್ಕೂ ಹೆಚ್ಚು ಕುರಿಗಳು ಸತ್ತು ಹೋದ ಘಟನೆ ಹಳೇ ಹುಬ್ಬಳ್ಳಿಯ ಮೇಧಾರ ಓಣಿಯ ಕುಂಬಾರ ಸಾಲ ಹತ್ತಿರದ ಮಟನ್ ಮಾರುಕಟ್ಟೆಯಲ್ಲಿ ನಡೆದಿದೆ. ನಿನ್ನೆಯಷ್ಟೇ ವರುಣನ ಅಬ್ಬರಕ್ಕೆ ಕುರಿಗಳನ್ನು ಮಾರುಕಟ್ಟೆಯ ಗೋಡೌನ್ ಒಳಗೆ ಹಾಕಲಾಗಿದ್ದು, ನೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಹಾಗೂ ಕುರಿಗಳ ಮಾಲೀಕರು ದೌಡಾಯಿಸಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ …
Read More »