Breaking News

Breaking News

ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ : ಸಿದ್ದರಾಮಯ್ಯ

ಗುಂಡ್ಲುಪೇಟೆ: ನಗರದಲ್ಲಿ  ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.

Read More »

ಕಾಬೂಲ್‌ನಲ್ಲಿ ಬಾಂಬ್ ಸ್ಪೋಟ : ಕನಿಷ್ಠ 19 ಜನರು ಸಾವು

ಕಾಬೂಲ್‌:ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ  ಶಿಕ್ಷಣ ಕೇಂದ್ರವೊಂದರಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 29ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ . ಸ್ಥಳೀಯ ಕಾಲಮಾನ ಬೆಳಗ್ಗೆ 7:30ಕ್ಕೆ ಕಾಜ್ ಶಿಕ್ಷಣ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ, ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಎನ್‌ಜಿಒ ಆಫ್ಘನ್ ಪೀಸ್ ವಾಚ್ ತನ್ನ ಟ್ವಿಟರ್ ಪೋಸ್ಟ್‌ನಲ್ಲಿ, …

Read More »

ಅದ್ದೂರಿಯಾಗಿ ನೆರವೇರಿದ ರೈತ ದಸರಾ ಮೆರವಣಿಗೆ

ಚಾಮರಾಜನಗರ:  ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತ ದಸರಾ ಮೆರವಣಿಗೆಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಎತ್ತಿನ ಬಂಡಿಗಳು ನಾಗರಿಕರ ಗಮನಸೆಳೆದವು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರೈತ ದಸರಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಎತ್ತಿನ ಬಂಡಿಗಳ ಮೆರವಣಿಗೆಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. …

Read More »

ಮತ್ತೆ ಏರಿಕೆ ಕಂಡ ಕೊರೋನಾ ಪ್ರಕರಣ

ನವದೆಹಲಿ:  ದೇಶದಲ್ಲಿ ಈವರೆಗೆ 5,28,629 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 39,583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.73ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,19,095 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 34,21,962 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,52,16,710 ಡೋಸ್ ಲಸಿಕೆ ಹಾಕಲಾಗಿದೆ.

Read More »

ಭಾರತ್ ಜೋಡೋ ಪಾದಯಾತ್ರೆ : ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್

ಚಾಮರಾಜನಗರ: ರಾಜ್ಯದಲ್ಲಿ ಗುಂಡ್ಲುಪೇಟೆಯಿಂದ ಭಾರತ್ ಜೋಡೋ ಪಾದಯಾತ್ರೆ ಶುರುವಾಗಿದೆ. ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಹೌದು, ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ರಾಜ್ಯದ ಪ್ರಮುಖ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಎಂಬಿ ಪಾಟೀಲ್, ಪರಮೇಶ್ವರ ಮತ್ತು ಇನ್ನೂ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಪ್ರಮುಖ ರಸ್ತೆಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಇಂದಿನಿಂದ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಪಾದಯಾತ್ರೆ ಸಾಗುವ ಸ್ಥಳದಲ್ಲಿ …

Read More »

PSI ನೇಮಕಾತಿ ಹಗರಣ : ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: PSI ನೇಮಕಾತಿ ಹಗರಣ ಸಂಬಂಧ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಸಿಐಡಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು 1ನೇ‌ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಪಿಎಸ್‌ಐ ಪರೀಕ್ಷಾ ನೇಮಕಾತಿ ಜಾಲದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಇಂದು ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1,406 ಪುಟಗಳ‌ ಚಾರ್ಜ್​ಶೀಟ್ ಸಲ್ಲಿಸಿದರು. ಈ ಮುನ್ನ ಸಿಐಡಿ ಸಲ್ಲಿಸಿದ್ದ ಚಾರ್ಜ್​ಶೀಟ್​​ನಲ್ಲಿ ಪ್ರಮುಖ ಆರೋಪಿಯಾಗಿರುವ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ …

Read More »

ನಟಿ ಆಶಾ ಪರೇಖ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಬಾಲಿವುಡ್‌ ಹಿರಿಯ ನಟಿ ಆಶಾ ಪರೇಖ್‌ ಗೆ ರಾಷ್ಟ್ರಪತಿ ದ್ರೌಪದಿ ಮರ್ಮು ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಆಶಾ ಪರೇಖ್‌ ಅವರಿಗೆ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಆಶಾ ಪರೇಖ್‌ ಅವರ ೮೦ನೇ ಜನ್ಮದಿನದ ಒಂದು ದಿನ ಮುನ್ನ ಈ ಪ್ರಶಸ್ತಿ ಬಂದಿರುವುದು ವಿಶೇಷ. ಇದಕ್ಕೂ ಮುನ್ನ ನಟರಾದ ಅಜಯ್‌ …

Read More »

ಭಾರತ್ ಜೋಡೋ ಪಾದಯಾತ್ರೆ, ಬಿಗಿ ಪೊಲೀಸ್ ಬಂದೋಬಸ್ತ್ ಗೆ ಗೃಹ ಸಚಿವ ಆರಗ ಸೂಚನೆ

ಬೆಂಗಳೂರು : ಇಂದಿನಿಂದ ಕರ್ನಾಟಕದಲ್ಲಿ ‘ಭಾರತ್ ಜೋಡೋ ಪಾದಯಾತ್ರೆ’ ಆರಂಭವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಈಗಾಗಲೇ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದ್ದು, ಪಾದಯಾತ್ರೆ ಸಾಗುವ ಸ್ಥಳದಲ್ಲಿ ಬಂದೋಬಸ್ತ್ ಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕೆಂದು, ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರಿಗೆ ಸೂಚನೆ ನೀಡಿದ್ದಾರೆ . ಸಿದ್ದರಾಮಯ್ಯಹೇಳಿಕೆಯೇದೊಡ್ಡದುರ್ದೈವ ಆರ್​ಎಸ್​ಎಸ್​ ನಿಷೇಧಿಸಬೇಕು …

Read More »

ಪೋಕ್ಸೋ ಪ್ರಕರಣ : ಚೆಕ್ ಗೆ ಸಹಿ ಹಾಕುವಂತೆ ಮುರಾಘಾಶ್ರೀಗೆ ಅನುಮತಿ‌

ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಮುರುಘ ಶ್ರೀಗಳು. ಶ್ರೀಗಳು ಜೈಲು ಪಾಲಾದ ದಿನದಿಂದ ಮಠದ ಸಿಬ್ಬಂದಿಗೆ ಸಂಬಳದ ಸಮಸ್ಯೆಯಾಗಿದೆ. ಅಷ್ಟೆ ಅಲ್ಲ ಮಠದ ಒಂದಿಷ್ಟು ಹಣಕಾಸಿನ ಕೆಲಸಗಳಿಗೂ ತೊಂದರೆಯಾಗಿದೆ. ಮಠದ ಸಿಬ್ಬಂದಿಗೆ ಸಂಬಳ ನೀಡಬೇಕು. ಹೀಗಾಗಿ ಜೈಲಿನಿಂದಲೇ ಚೆಕ್ ಗೆ ಸಹಿ ಹಾಕಲು ಅವಕಾಶ ಕೊಡಿ ಎಂದು ಕೋರ್ಟ್ ಗೆ ಮನವಿ ಮಾಡಿದ್ದರು. ಈ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಮೂರು ದಿನಗಳ ಕಾಲ …

Read More »

ವರದಕ್ಷಿಣೆ ಕಿರಕುಳಕ್ಕೆ ಮಹಿಳೆ ನೇಣಿಗೆ ಶರಣು..

ಹುಬ್ಬಳ್ಳಿ: ಮೊನ್ನೆ ತಾನೆ ಪುಷ್ಪ ಪಟದಾರೆ ಅನ್ನೋ ಮಹಿಳೆ ಗಂಡನ ಕೊಲೆ ಆದ ಹಿನ್ನೆಲೆ ಜೀವನದಲ್ಲಿ ಬೇಸತ್ತು ನವನಗರದ ಸಂಬಂಧಿಕರ ಮನೆಯಲ್ಲಿ ನೇಣಿಗೆ ಶರಣಾಗಿದ್ದರು. ಈ ಘಟನೆ ಮಾಸುವ ಮುನ್ನ ಇನ್ನೊಬ್ಬ 27 ವರ್ಷದ ಅಶ್ವಿನಿ ವಾಲಿ ಅನ್ನೋ ಗೃಹಣಿ ತನ್ನ ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಗಂಡನ ಕಿರುಕುಳ ಹಾಗೂ ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಈ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಈ …

Read More »