Breaking News

Breaking News

ಇಷ್ಟದ ಗುಡನ್ನು ಬಿಟ್ಟು ಬೇರೆ ಕಡೆ ಸಿಫ್ಟ್ ಆದ ಕ್ರೇಜಿಸ್ಟಾರ್

ಕನ್ನಡ ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿದ, ಸಿನಿಮಾನೇ ಉಸಿರು ಎಂದು ನಂಬಿರುವ, ಕನಸಿನಲ್ಲೂ ಸಿನಿಮಾದ ಬಗ್ಗೆಯೇ ಯೋಚಿಸುವ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಇದೀಗ ತಮ್ಮ ನೆಚ್ಚಿನ ಮನೆಯನ್ನು ಖಾಲಿ ಮಾಡಿದ್ದಾರೆ. ಹೌದು! ರಾಜಾಜಿನಗರದಲ್ಲಿರೋ ಮನೆಯನ್ನು ಬಿಟ್ಟು ಹೊಸಕೆರೆ ಹಳ್ಳಿಯಲ್ಲಿರೋ ಮತ್ತೊಂದು ಮನೆಗೆ ರವಿಚಂದ್ರನ್ ಕುಟುಂಬ ತೆರಳಿದ್ದಾರೆ. ಮನೆ ಖಾಲಿ ಮಾಡಲು ಕಾರಣ ಏನೆಂದು ತಿಳಿದಿಲ್ಲ. ಆದರೆ ಮನೆ ಖಾಲಿ ಮಾಡಿದ್ದು, ರಿನೋವೇಷನ್ ಮಾಡಿಸೋದಕ್ಕೆಂದು ಆಪ್ತ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೆ ರವಿಚಂದ್ರನ್ ಮೊದಲ …

Read More »

ಜಪಾನ್ ಮಾಜಿ ಪ್ರಧಾನಿ ಅಂತ್ಯ ಸಂಸ್ಕಾರ : ಇಂದು ಟೋಕಿಯೊಗೆ ತಲುಪಿದ ಮೋದಿ

ಟೋಕಿಯೊ (ಜಪಾನ್): ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊಗೆ ಆಗಮಿಸಿದ್ದಾರೆ. ಓಸಾಕಾದ ಪೂರ್ವದಲ್ಲಿ ಜುಲೈ 8 ರಂದು ನಾರಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಅಬೆ ಅವರು ಬೀದಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಅವರ ಮೇಲೆ …

Read More »

ರಾಜ್ಯದ ರೈತರಿಗೆ ಗುಡ್ ನ್ಯೂಸ್

ಮೈಸೂರು : ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. …

Read More »

ಇಂದು ರಾಷ್ಟ್ರಪತಿಗೆ ಪೌರಸಮ್ಮಾನ : ವಿಧಾನಸೌಧದ ಸಿಬ್ಬಂದಿಗೆ ರಜೆ

ಬೆಂಗಳೂರು : ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿರುವ ಪೌರಸನ್ಮಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರಪತಿಯವರಿಗೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳಿಗೆ ದಿನಾಂಕ 27-09-2022 ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

Read More »

ಜಿ.ಪಂ,ತಾ.ಪಂ ಚುನಾವಣೆ ನಿರೀಕ್ಷೆಯಲ್ಲಿವಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ 12 ವಾರ ಗಡುವು ನೀಡಲಾಗಿದೆ. ರಾಜ್ಯದಲ್ಲಿನ 31 ಜಿಪಂ ಮತ್ತು 239 ತಾಪಂ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಸರ್ಕಾರದಿಂದ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ ತಿದ್ದುಪಡಿ ಕಾಯ್ದೆ …

Read More »

ಮುರುಘಾ ಶರಣರು ಪೀಠತ್ಯಾಗ ಮಾಡದ ಕಾರಣ ಸೆ.29ಕ್ಕೆ ಸಭೆ

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠತ್ಯಾಗ ಮಾಡದ ಕಾರಣಕ್ಕೆ ವೀರಶೈವ ಲಿಂಗಾಯತ ಸಮಾಜದ ಸಭೆಯನ್ನು ಸೆ.29ಕ್ಕೆ ಕರೆಯಲಾಗಿದೆ. ಚಿತ್ರದುರ್ಗ ಹೊರವಲಯದ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಮಾಜಿ ಸಚಿವ ಎಚ್. ಏಕಾಂತಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಭೆ ಹಮ್ಮಿಕೊಳ್ಳಲಾಗಿದೆ. ‘ಮುರುಘರಾಜೇಂದ್ರ ಮಠವು ಐತಿಹಾಸಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ …

Read More »

ಪೌರಸನ್ಮಾನ ದೇಶದ ಸಮಸ್ತ ಮಹಿಳೆಯರಿಗೆ ಸಂದ ಗೌರವ : ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು

ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ,ಓರಿಸ್ಸಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳು ಕರ್ನಾಟಕ ಮಾತ್ರವಲ್ಲ,ಸಮಗ್ರ ಭಾರತದ ಸಾಂಸ್ಕೃತಿಕ,ಐತಿಹಾಸಿಕ ನಗರಗಳಾಗಿವೆ.ಉತ್ತರ …

Read More »

VIP , VVIP ಪಾಸ್ ಇದ್ದರು ಲೇಟ್ ಆಗಿ ಬಂದ್ರೆ ನೋ ಎಂಟ್ರಿ

ಹುಬ್ಬಳ್ಳಿ : ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಆಗಮಿಸುತ್ತಿದ್ದು , ಕೆಲ ಜನರಿಗೆ VIP ಪಾಸ್ ನೀಡಿದ್ದಾರೆ . ಆದ್ರೆ ಕಾರ್ಯಕ್ರಮಕ್ಕೆ ತಡವಾಗಿ ಬಂದ್ರೆ ಯಾವ ಪಾಸ್ ಇದ್ರು ನೋ ಎಂಟ್ರಿ . ಎಷ್ಟೇ ವಾದ ಮಾಡಿದ್ರು ಪೊಲೀಸರು ಮರಳಿ ಕಳಿಸುತ್ತಿದ್ದಾರೆ . ಹೌದು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪಾಲಿಕೆ ವತಿಯಿಂದ ಪೌರ ಸನ್ಮಾನ ಹಮ್ಮಿಕೊಂಡಿದೆ . ಸನ್ಮಾನ ಕಾರ್ಯಕ್ರಮವನ್ನು ವೀಕ್ಷಿಸಲು VIP …

Read More »

ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ ನಿಧನ

ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಬರ್ಕೆ ನಿವಾಸಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ (75) ಇವರು ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ.ಮೃತರು ಕಲ್ಲಡ್ಕ ಹಂಚಿನ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತರಾಗಿ, ಬರ್ಕೆ ಕುಟುಂಬದ ಮುಖ್ಯಸ್ಥರಾಗಿ, ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಬರ್ಕೆ ಮನೆ ಬಳಿ …

Read More »

ದಕ್ಷಿಣ ಕನ್ನಡದಲ್ಲಿ ದೀಪಗಳಿಂದ ಅಲಕಂರಿಸಿದ ನವರಾತ್ರಿ ಸಂಭ್ರಮ

ಮಂಗಳೂರು/ ಉಡುಪಿ/ಕಾಸರಗೋಡು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.ವಿವಿಧ ದೇಗುಲಗಳು ವಿದ್ಯುತ್‌ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ. ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ …

Read More »