Breaking News

Breaking News

ನಾಳೆ ಹುಬ್ಬಳ್ಳಿಯಲ್ಲಿ ರಾಷ್ಟ್ರಪತಿಗೆ ಪೌರಸನ್ಮಾನ

ಹುಬ್ಬಳ್ಳಿ: ನಗರದಲ್ಲಿ ಸೋಮವಾರ (ಸೆ 26) ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರಿಗೆ ಪೌರಸನ್ಮಾನ ಮಾಡಲಾಗುತ್ತದೆ. ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆ ಕಾರ್ಯಕ್ರಮದಲ್ಲಿ ನಗರದ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ವೇದಿಕೆಯ ಮೇಲೆ ಸ್ಥಾನ ನೀಡದಿರುವ ಬಗ್ಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ಷೇಪ ಕೇಳಿಬಂದಿದೆ. ವೇದಿಕೆ ಮೇಲಿನ ಗಣ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್​ ಅವರ ಹೆಸರನ್ನು ಕೈಬಿಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿರಬಹುದು ಎಂದು ಕೆಲವರು ಆಕ್ಷೇಪ …

Read More »

ಖ್ಯಾತ ನಟ ರಮೇಶ್ ಅರವಿಂದ್ ಅವರ ಮುಡಿಗೆ ಮತ್ತೊಂದು ಗರಿ

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಇತ್ತೀಚೆಗಷ್ಟೇ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಶುಭಾಶಯಗಳ ಮಹಾಪೂರವೇ ಹರಿದು ಬಂದಿತ್ತು. ಅಲ್ಲದೆ ಚಿತ್ರರಂಗಕ್ಕೆ ಅವರು ನೀಡಿದ ಸೇವೆಯನ್ನು ಸ್ಮರಿಸಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗಿತ್ತು. ಇದೀಗ ಅವರ ಮುಡಿಗೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಡಾ. ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿಗೆ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 10 ರ ಕಾರಂತರ ಜನ್ಮ ದಿನದಂದು ಈ ಪ್ರಶಸ್ತಿಯನ್ನು ರಮೇಶ್ ಅರವಿಂದ್ ಅವರಿಗೆ …

Read More »

ಇಂದಿನಿಂದ 2 ದಿನ ಸಿಎಂ ಮೈಸೂರು ಪ್ರವಾಸ

ಮೈಸೂರು: ದಸರಾ ಉದ್ಘಾಟನೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮತ್ತು ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಇಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡಲಿದ್ದಾರೆ. ಬಳಿಕ 3.30ಕ್ಕೆ ಕರಾಮುವಿ ಘಟಿಕೋತ್ಸವ ಭವನದಲ್ಲಿ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಏರ್ಪಡಿಸಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕಕ್ಕೆ ಕೆ.ಆರ್.ಕ್ಷೇತ್ರದ ವಿದ್ಯಾರಣ್ಯಪುರಂನಲ್ಲಿರುವ ಶ್ರೀ …

Read More »

ಹವಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಶುರುವಾಗಿದೆ. ಕಬ್ಬನ್​ ಪಾರ್ಕ್​​, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಡಬಲ್ ರೋಡ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ಮಳೆಯಿಂದ ಬೈಕ್ ಸವಾರರು, ಪಾದಚಾರಿಗಳು ಪರದಾಡಿದ್ದಾರೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸಾಧ್ಯತೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿದ್ದು, …

Read More »

ಕುವೈತ್‌ನಲ್ಲಿ ಮಂಗಳೂರು ಮೂಲದ ಯುವಕ ಸಾವು

ಮಂಗಳೂರು: ಕುವೈತ್‌ನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಮೂಲದ ಬಜಾಲ್‌ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ. ಕುವೈತ್‌ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮನ್‌ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ, ತಾಯಿಯನ್ನು ಅಗಲಿದ್ದಾರೆ. 44 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಓರ್ವ ವಶಕ್ಕೆಕಾಸರಗೋಡು: ದುಬಾೖಯಿಂದ ಗೋ ಫಾಸ್ಟ್‌ ವಿಮಾನದಲ್ಲಿ ಕಣ್ಣೂರಿಗೆ ಆಗಮಿಸಿದ ಮೊಗ್ರಾಲ್‌ಪುತ್ತೂರಿನ ಮೊದೀನ್‌ …

Read More »

ಆಕ್ರಮವಾಗಿ ಹಸುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರೋಪಿ ಬಂಧನ

ಕುಣಿಗಲ್ : ಆಕ್ರಮವಾಗಿ ಹಸುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರುತ್ತಿದ್ದ ವೇಳೆ, ಅಖಿಲ ಭಾರತ ಹಿಂದು ಮಹಾ ಸಭಾ ಕಾರ್ಯಕರ್ತರ ಮೇಲೆ ಗುಂಪೊಂದು ದಾಳಿ ನಡೆಸಿ, ಕಾರಿನ ಗಾಜನ್ನು ಜಖಂಗೊಳಿಸಿದ ಘಟನೆ ಕುಣಿಗಲ್ ಪಟ್ಟಣದ ಮಲ್ಲಾಘಟ್ಟ ಪೆಟ್ರೋಲ್ ಬಂಕ್ ಬಳಿ ನಡೆದಿದೆ, ಈ ಸಂಬಂಧ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಅಖಿಲ ಭಾರತ ಹಿಂದು ಮಹಾ ಸಭಾ ರಾಜ್ಯಾಧ್ಯಕ್ಷ, ಬೆಂಗಳೂರು …

Read More »

ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ : ಸುಧಾಕರ್

ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್‌ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ದೂಷಿಸಿದ್ದಾರೆ. ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡುವ ಮೂಲಕ ಮತ್ತೊಮ್ಮೆ ಬೆತ್ತಲಾಗಿದ್ದಾರೆ. ಆದರೆ ಏನೇ ಮಾಡಿದರೂ …

Read More »

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ನ್ನು ನೇಮಕ ಮಾಡಿದ್ದು ಸಿಎಂ

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ.ಪೌಲ್‌ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು. ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ‍ಪಿಎಸ್‌ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್‌ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ …

Read More »

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್. ಎಂ. ಕೃಷ್ಣ ಮೊದಲು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಬಳಿಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಅಂತ ತಿಳಿದು ಬಂದಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More »

ಕ್ಷುಲ್ಲಕ ಕಾರಣಕ್ಕೆ ಹೋಟೆಲ್ ಒಂದರಲ್ಲಿ ಗಲಾಟೆ, ಬೀರ್ ಬಾಟಲನಿಂದ ಹಲ್ಲೆ…

ಹುಬ್ಬಳ್ಳಿಯ ಗೋಕುಲ್ ರೋಡಿನಲ್ಲಿ ಯುವ ಪೀಳಿಗೆಗಳಿಗೆ ಮೌಜು ಮಾಸ್ತಿ ಮಾಡೋಕೆ ಅಂತಾನೆ ಸ್ಥಾಪನೆ ಮಾಡಿರೋ ಹೋಟೆಲ್ ಐಸ್ ಕ್ಯೂಬ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಬೀರ್ ಬಾಟಲ್ ಹಾಗೂ ನೀರಿನ ಜಗ್ಗಿನಿಂದ ತಲೆಗೆ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯ ಹೆಸರು ಬಸವನಗೌಡ್ರು ಎಂದು ತಿಳಿದುಬಂದಿದೆ, ಸುಚಿರಾಯು ಆಸ್ಪತ್ರೆಗೆ ದಾಖಲಿಸಿ ಚಿಕಿಸ್ತೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Read More »