BigTv News
September 23, 2022
Breaking News, ಬೆಂಗಳೂರು
ಬೆಂಗಳೂರು: PSI ನೇಮಕಾತಿ ಅಕ್ರಮದಲ್ಲಿ ರಾಜಕಾರಣಿಗಳಿದ್ದರೂ ತನಿಖೆ ಹಾದಿ ತಪ್ಪಬಾರದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅಕ್ರಮ ಮಾಡಿದವರು ಈಗಾಗಲೇ ಬಂಧನಕ್ಕೆ ಒಳಗಾಗಿದ್ದಾರೆ. ಎಡಿಜಿಪಿ ಮಟ್ಟದ ಅಧಿಕಾರಿಯೊಬ್ಬರು ಸೇರಿದಂತೆ ಕೆಲವಾರು ಪೊಲೀಸ್ ಅಧಿಕಾರಿಗಳು, ತಪ್ಪೆಸಗಿದ ಅಭ್ಯರ್ಥಿಗಳನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರು ಅನ್ಯಾಯಕ್ಕೆ ತುತ್ತಾಗುತ್ತಿದ್ದಾರೆ ಎಂದರು. ಈ ಹಗರಣದ ತನಿಖೆ ಗಂಭೀರ ಹಂತ …
Read More »
BigTv News
September 23, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಎರಡು ವರ್ಷಗಳ ಬಳಿಕ ಅದ್ಧೂರಿಯಾಗಿ ದಸರಾವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಇಲಾಖೆ ಮುಂದಾಗಿದೆ. ಸೆ.26ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಿ ದಸರಾ ಉದ್ಘಾಟಿಸಲಿದ್ದಾರೆ.ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸರ ಜೊತೆಗೆ ಹೊರ ಜಿಲ್ಲೆಗಳ ಒಟ್ಟು 3,079 ಪೊಲೀಸ್ ಅಧಿಕಾರಿಗಳು ಹಾಗೂ …
Read More »
BigTv News
September 23, 2022
Breaking News
ಹೊಸಪೇಟೆ (ವಿಜಯನಗರ): ಮಹಿಳೆಯೊಂದಿಗೆ ಮೊಬೈಲ್‌ನಲ್ಲಿ ಅಸಭ್ಯವಾಗಿ ಮಾತನಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಾರಪ್ಪ ಎಂಬುವರನ್ನು ಗುರುವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ಬೆನ್ನಲ್ಲೇ ಮಾರಪ್ಪ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಆದೇಶ ಹೊರಡಿಸಿದ್ದಾರೆ. ‘ದೂರುದಾರ ಮಹಿಳೆಯು ಹಣದ ವಿಚಾರವಾಗಿ ಚಿಕ್ಕಪ್ಪನ ಮಗಳ ಜೊತೆ ಜಗಳವಾಡಿದ್ದಾರೆ. ಈ ಕುರಿತು ಸೆ. 18ರಂದು ಠಾಣೆಗೆ ದೂರು ಕೊಡಲು …
Read More »
BigTv News
September 23, 2022
Breaking News, ಬೆಂಗಳೂರು
ಬೆಂಗಳೂರು: ‘ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬೈಲಾ ಉಲ್ಲಂಘಿಸಿ ಟ್ರಸ್ಟಿಗಳ ನೇಮಕ, ಪ್ರವೇಶ ಪ್ರಕ್ರಿಯೆ, ಶುಲ್ಕ ವಸೂಲಿ ಮತ್ತು ಜಮೀನಿನಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶಾಮೀಲಾಗಿರುವುದರಿಂದ ಅವರ ತಲೆದಂಡ ಆಗಲೇಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಗುರುವಾರ ನಿಯಮ 69ರ ಅಡಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಈ ವಿಷಯದ ಬಗ್ಗೆ ಒಂದೂವರೆ ಗಂಟೆಗಳ ಕಾಲ ಸುದೀರ್ಘ ವಿವರಣೆ ನೀಡಿದರಲ್ಲದೇ …
Read More »
BigTv News
September 23, 2022
Breaking News, ಜಿಲ್ಲೆ, ಮೈಸೂರು
ಮೈಸೂರು : ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರತಾಲೂಕಿನಭೇರ್ಯಸಮೀಪದಸಂಬ್ರವಳ್ಳಿಗ್ರಾಮದಲ್ಲಿನಡೆದಿದೆ. 50 ವರ್ಷದ ಬೆಟ್ಟಪ್ಪ, 43 ವರ್ಷದರುಕ್ಮಿಣಿಮೃತರಾಗಿದ್ದಾರೆ. ಇವರು ಗ್ರಾಮದಜಮೀರ್ಸಾಹೇಜ್ತೋಟದಲ್ಲಿ 20 ವರ್ಷಗಳಿಂದ ಕೂಲಿ ಕೆಲಸಮಾಡಿಕೊಂಡಿದ್ದರು. ಕೆಲಸಮಾಡಿಕೊಂಡುತೋಟದಮನೆಯಲ್ಲೇವಾಸವಿದ್ದರು. ಇತ್ತೀಚೆಗೆಮಕ್ಕಳಮದುವೆಮಾಡಿದ್ದರು. ಜೊತೆಗೆ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
September 23, 2022
Breaking News, ಕಲಬುರಗಿ
ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಜೇವರ್ಗಿ ಠಾಣೆಯ ಕಾನ್ಸ್ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು …
Read More »
BigTv News
September 23, 2022
Breaking News, ಬೆಂಗಳೂರು
ಬೆಂಗಳೂರು : ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕ ಬಿಡುಗಡೆ ಮಾಡಿರುವ ಅವರು, ವೈದ್ಯರ ಸಲಹೆಯಂತೆ ಸದ್ಯಕ್ಕೆ ಕೆಲವು ದಿನಗಳ ಕಾಲ ಮನೆಯಿಂದಲೇ ನನ್ನ ಎಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಹೀಗಾಗಿ …
Read More »
BigTv News
September 23, 2022
Breaking News, ಬೆಂಗಳೂರು
ವಿಧಾನಸಭೆ : ಬಿಎಂಎಸ್ ಎಜುಕೇಷನಲ್ ಟ್ರಸ್ಟ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದ ಜೆಡಿಎಸ್ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿದ್ದು, ಶುಕ್ರವಾರ ಸದನದಲ್ಲಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. ಬಿಎಂಎಸ್ ಎಜುಕೇಷನಲ್ ಟ್ರಸ್ಟ್‌ನಲ್ಲಿ ಆಜೀವ ಟ್ರಸ್ಟಿ ನೇಮಕದಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದಕ್ಕೆ ಪ್ರೋತ್ಸಾಹ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ತಲೆದಂಡ ಆಗಬೇಕು …
Read More »
BigTv News
September 23, 2022
Breaking News, ಜಿಲ್ಲೆ, ಮೈಸೂರು
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಮೈಸೂರು ದಸರಾ ಉದ್ಘಾಟನೆಗೆ ಆಗಮಿಸುತ್ತಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 26ರ ಸೋಮವಾರ ಬೆಳಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೆಪ್ಟೆಂಬರ್ 26ರ …
Read More »
BigTv News
September 23, 2022
Breaking News, ಅಪರಾಧ, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಿನ್ನೆ ಗುರುವಾರ ಸಾಯಂಕಾಲ ನಡೆದಿದೆ. ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿನ ಬಿರಿಯಾನಿ ಹೌಸ್ ಮಾಲೀಕರ ಜೊತೆ ರಾಘವೇಂದ್ರ ಎಂಬ ಯುವಕನ ನಡುವೆ ಮಾತಿಗೆ ಮಾತು ಬೆಳೆದು ಅತಿರೇಕಕ್ಕೆ ಹೋದ ಪರಿಣಾಮ ಬಿರಿಯಾನಿ ಹೌಸ್ ಮಾಲೀಕರು ರಾಘವೇಂದ್ರನನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಆಗ ಪೊಲೀಸರು …
Read More »