Breaking News

Breaking News

ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮನ : ಸೂಕ್ತ ಭದ್ರತೆ ಒದಗಿಸಿದ ಉಸ್ತುವಾರಿ ಸಚಿವ

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದಲ್ಲದೆ ಸೂಕ್ತ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ. ಸಭಾ ವೇದಿಕೆಯ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ …

Read More »

ಆಯಂಬುಲೆನ್ಸ್​​​ ಕೆಲ ವಾಹನಗಳಿಗೆ ಡಿಕ್ಕಿ : ಮಹಿಳೆ ಸಾವು

ನವದೆಹಲಿ/ಗಾಜಿಯಾಬಾದ್​: ನಿಯಂತ್ರಣ ಕಳೆದುಕೊಂಡ ಆಯಂಬುಲೆನ್ಸ್​​​ ಕೆಲ ವಾಹನಗಳಿಗೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಮಗು ಸೇರಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಗಾಜಿಯಾಬಾದ್​ನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಾಪ್​ ವಿಹಾರ್​ ಪ್ರದೇಶದಲ್ಲಿ ದುರ್ಘಟನೆ ನಡೆದಿದೆ. ಪೊಲೀಸರು ಈಗಾಗಲೇ ಆಯಂಬುಲೆನ್ಸ್​ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಯಂಬುಲೆನ್ಸ್​ ಅನ್ನು ಅತಿ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ.

Read More »

ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಭೇಟಿ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಲಂಡನ್‌: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬ್ರಿಟನ್‌ ನೂತನ ರಾಜ 3ನೇ ಚಾರ್ಲ್ಸ್‌ ಅವರನ್ನು ಭಾನುವಾರ ತಡ ರಾತ್ರಿ ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ಭೇಟಿ ಮಾಡಿದರು. ಮೂರು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿರುವ ಅವರು ಇಂದು ರಾಣಿ ಎಲಿಜಬೆತ್‌ 2 ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಂಕಿಂಗ್‌ಹ್ಯಾಮ್‌ ಅರಮನೆಯಲ್ಲಿ ರಾಜ 3ನೇ ಚಾರ್ಲ್ಸ್‌ ಅವರನ್ನು ಭೇಟಿ ಮಾಡಿ ಮಾತಕತೆ ನಡೆಸಿದರು ಎಂದು ಬ್ರಿಟನ್‌ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ಬ್ರಿಟನ್‌ ಸ್ಥಳೀಯ …

Read More »

ಯೂಟ್ಯೂಬ್​ನಲ್ಲಿ ಹೊಸ ಟ್ರೆಂಡ್​ ಸೃಷ್ಟಿಸಿರುವ ಕಬ್ಜ ಚಿತ್ರದ ಟೀಸರ್​​

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷಿತ ಚಿತ್ರ ಕಬ್ಜದ ಟೀಸರ್ ಈಗಾಗಲೇ ರಿಲೀಸ್ ಆಗಿದ್ದು, ಮೆಚ್ಚುಗೆ ಗಳಿಸುತ್ತಿದೆ. ಬಿಗ್​ ಬಜೆಟ್​​ನಲ್ಲಿ ನಿರ್ಮಾಣಗೊಳ್ಳುತ್ತಿರುವ ಕಬ್ಜ ಚಿತ್ರದ ಟೀಸರ್​​ ರಿಲೀಸ್​ ಆಗಿದ್ದು, ಭಾರಿ ಪ್ರಶಂಸೆ ವ್ಯಕ್ತವಾಗ್ತಿದೆ. ಉಪೇಂದ್ರ ಅಭಿಮಾನಿಗಳೂ ಸೇರಿದಂತೆ ಸಿನಿಪ್ರಿಯರು ವಿಭಿನ್ನ ಟೀಸರ್​​ಗೆ ಮನಸೋತಿದ್ದಾರೆ. ಸೆಪ್ಟೆಂಬರ್​​ 17ರಂದು ರಿಲೀಸ್​ ಆಗಿರುವ ಟೀಸರ್​ ಈಗಾಗಲೇ ಒಂದೂವರೆ ಕೋಟಿಗೂ ಹೆಚ್ಚು ವೀಕ್ಷಣೆ ಗಳಿಸಿದೆ. ಪರಭಾಷೆಯಲ್ಲೂ ಚಿತ್ರಕ್ಕೆ ಜನಪ್ರಿಯತೆ ಗಳಿಸುತ್ತಿದೆ. ಯೂಟ್ಯೂಬ್​ನಲ್ಲಿ ಹೊಸ ಟ್ರೆಂಡ್​ ಸೃಷ್ಟಿಸಿರುವ …

Read More »

ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸೌಂಡ್ಸ್‌ಗೆ ವ್ಯಕ್ತಿಗೆ ಹೃದಯಾಘಾತ

ತುಮಕೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಸೌಂಡ್ಸ್‌ಗೆ ಕುಣಿದು ಕುಪ್ಪಳಿಸುವಾಗ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹೆಬ್ಬಾಕ ಗ್ರಾಮದಲ್ಲಿ ನಡೆದಿದೆ. ವಿರೂಪಾಕ್ಷ (48) ಮೃತ ದುರ್ದೈವಿ. ಹೆಬ್ಬಾಕ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ನಿಮಜ್ಜನದ ಮೆರವಣಿಗೆ ವೇಳೆ ಶನಿವಾರ ಡಿಜೆ ಸೌಂಡ್ಸ್ ಹಾಕಲಾಗಿತ್ತು. ಸೌಂಡ್​ಗೆ ತಕ್ಕಂತೆ ಮೆರವಣಿಗೆಯಲ್ಲಿ ಜನ ಸಂಭ್ರಮ-ಸಡಗರದೊಂದಿಗೆ ಕುಣಿದು ಕುಪ್ಪಳಿಸುತ್ತಿದ್ದರು. ವಿರೂಪಾಕ್ಷ ಕೂಡ ಕುಣಿಯುತ್ತಿದ್ದರು. ಈ ವೇಳೆ ಕುಸಿದು ಬಿದ್ದ ವಿರೂಪಾಕ್ಷರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. …

Read More »

ತಮಿಳು ನಟಿ ದೀಪಾ ಆಕಾ ಆತ್ಮಹತ್ಯೆ

ಚೆನ್ನೈ; ತಮಿಳು ನಟಿ ದೀಪಾ ಆಕಾ (ಪಾಲಿನ್ ಜೆಸ್ಸಿಕಾ, 29 ವಯಸ್ಸು) ಭಾನುವಾರ ಚೆನ್ನೈನ ವೀರುಗಾಂಬಿಕಾಂ ನಗರದಲ್ಲಿ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ. ದೀಪಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದೀಪಾ ಅವರು ನಾಸಿರ್ ಮುಖ್ಯಪಾತ್ರದಲ್ಲಿದ್ದ ‘ವೈದಾ’ ಸಿನಿಮಾದಲ್ಲಿ ನಾಯಕಿಯಾಗಿದ್ದರು. ‘ಥುಪ್ಪಾರುವಿಲನ್’ ಸೇರಿದಂತೆ ಕೆಲ …

Read More »

ಬ್ರಿಟನ್‌ ರಾಣಿ ನಿಧನ : 500ಕ್ಕೂ ಹೆಚ್ಚು ಜಾಗತಿಕ ನಾಯಕರು ರಾಣಿಗೆ ಅಂತಿಮ ವಿದಾಯ

ಲಂಡನ್‌: ಸೆ.8ರಂದು ನಿಧನರಾದ ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ (96) ಅವರ ಅಂತ್ಯಸಂಸ್ಕಾರ ಇಂದು ನಡೆಯಲಿದ್ದು, ಬ್ರಿಟನ್‌ ರಾಜಧಾನಿ ಲಂಡನ್‌ನಲ್ಲಿ ಭಾರೀ ಸಿದ್ಧತೆ ನಡೆಸಲಾಗಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ 500ಕ್ಕೂ ಹೆಚ್ಚು ಜಾಗತಿಕ ನಾಯಕರು ರಾಣಿಗೆ ಅಂತಿಮ ವಿದಾಯ ನೀಡಲು ಲಂಡನ್‌ಗೆ ಆಗಮಿಸಿದ್ದಾರೆ. ರಾಣಿಯ ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ 10 ದಿನಗಳ ಶೋಕಾಚರಣೆ ಆಚರಿಸಲಾಗುತ್ತಿದ್ದು, ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಬ್ರಿಟನ್‌ ರಾಜ 3ನೇ ಚಾರ್ಲ್ಸ್ ಅವರ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಕಾರ್ಯಾಂಗ ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ, ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ …

Read More »

ಸಚಿವ ಸ್ಥಾನಕ್ಕೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಒತ್ತಾಯ

ಕೋಲಾರ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಜಾತ್ಯತೀತ ಜನತಾದಳ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಬ್ಬರು ರೋಗಿಗಳ ಸಾವಿನ ಬಗ್ಗೆ ಸರಕಾರವು ವಾಸ್ತವಾಂಶಗಳನ್ನು ಸ್ಪಷ್ಟಪಡಿಸಿಲ್ಲ. ನೈತಿಕತೆ ಇದ್ದಿದ್ದರೆ ಆರೋಗ್ಯ ಸಚಿವರು …

Read More »

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ ಸೇರಿ …

Read More »