BigTv News
September 17, 2022
Breaking News
ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಪೋರ್ಟ್ಸ್ ರಿಯಲ್ ಟೈಮ್ ಬಿಲಿಯನೇರ್ ಗಳ ಪಟ್ಟಿಯ ಪ್ರಕಾರ, ಅದಾನಿಯಾ ನಿವ್ವಳ ಮೌಲ್ಯ ಸೆಪ್ಟೆಂಬರ್ 16, 2022ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ. ಅಂದರೆ ಸುಮಾರು ಶೇ.4ರಷ್ಟು ಹೆಚ್ಚಾಗಿದೆ. ಅಮೆಜಾನ್ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಗೌತಮ್ ಅದಾನಿ 2ನೇ ಸ್ಥಾನ ಅಲಂಕರಿಸಿದ್ದಾರೆ. 273.5 ಶತಕೋಟಿ ಡಾಲರ್ ನಿವ್ವಳ ಮೌಲ್ಯದೊಂದಿಗೆ ಎಲೋನ್ ಮಸ್ಕ್ ವಿಶ್ವದ ಅತ್ಯಂತ ಶ್ರೀಮಂತ …
Read More »
BigTv News
September 17, 2022
Breaking News
ಈ ಬಾರಿಯ ವರುಣರಾಯನ ಅಬ್ಬರ ಊಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷದಂತೆ ನಿಗಧಿತ ಪ್ರಮಾಣದಲ್ಲಿ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿದಿದೆ. ಇನ್ನು ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಉತ್ತರ ಕರ್ನಾಟಕದ ಕಲಬುರಗಿ , ಬೀದರ್ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಜುಲೈ ತಿಂಗಳಿನಿಂದ ಕಲ್ಯಾಣ ಕರ್ನಾಟಕ ಭಾಗದ ನದಿಗಳು ತುಂಬಿ ಹರಿಯುತ್ತಿವೆ. ಇನ್ನು ಕಳೆದ ಮೂರು ವಾರಗಳಿಂದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದ್ರೆ ಮಹಾರಾಷ್ಟ್ರದ …
Read More »
BigTv News
September 17, 2022
Breaking News, ಬೆಂಗಳೂರು
ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಕ್ಕಳಿಗೆ ಉಚಿತ ಕರ್ನಾಟಕ ದರ್ಶನ ಪ್ರವಾಸ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಂಟನೇ ತರಗತಿ ಓದುತ್ತಿರುವ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಎಸ್‌ಸಿಪಿ ಮತ್ತು ಎಸ್.ಟಿ.ಪಿ.ಯೋಜನೆಯಡಿ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿದೆ. ಕೊರೋನಾ ಕಾರಣದಿಂದ ಕಳೆದು ಎರಡು ವರ್ಷಗಳಿಂದ ಈ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಈ ವರ್ಷದಿಂದ ಮತ್ತೆ ಆರಂಭಿಸಲಾಗುವುದು. ಪ್ರತಿ ತಾಲೂಕಿನಿಂದ ನಾಲ್ಕು ದಿನಗಳ ಪ್ರವಾಸಕ್ಕೆ ಒಂದು ಬಸ್ …
Read More »
BigTv News
September 17, 2022
Breaking News, ಬೆಂಗಳೂರು
ಬೆಂಗಳೂರು: ‘ರಾಹುಲ್‌ಗಾಂಧಿ ಅವರ ಪಾದಯಾತ್ರೆಗೆ ಒಂದು ದಿನ 5 ಸಾವಿರ ಜನರನ್ನು ಕಳುಹಿಸಲು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಕೇಳಿದರೆ ಆಗಲ್ಲ ಎನ್ನುತ್ತಾರೆ. ಐದು ವರ್ಷದಲ್ಲಿ ಒಂದು ದಿನವಾದರೂ ರಾಹುಲ್‌ಗಾಂಧಿ ಜತೆ ಕೆಲಸ ಮಾಡಲಾಗಲ್ಲ ಎಂದರೆ ಏನು ಮಾಡಬೇಕು. ಈ ವಿಚಾರದಲ್ಲಿ ಯಾವ ಶಾಸಕರಿಗೂ ವಿನಾಯಿತಿ ನೀಡುವುದಿಲ್ಲ’ ಎಂದು ದೇಶಪಾಂಡೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಭವನದಲ್ಲಿ ನಡೆದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ …
Read More »
BigTv News
September 17, 2022
Breaking News
ತಮಿಳುನಾಡು : ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಗುತ್ತದೆ. ಸ್ಥಳೀಯ …
Read More »
BigTv News
September 16, 2022
Breaking News, ಧಾರವಾಡ
ಧಾರವಾಡ : ಹುಬ್ಬಳ್ಳಿ , ಧಾರವಾಡ ಅವಳಿನಗರದ ಮಧ್ಯೆ ಸಂಚರಿಸುವ ಬಿಆರ್‌ಟಿಎಸ್ ಸಂಸ್ಥೆಯ ಚಿಗರಿ ಬಸ್ಸಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ನಡೆದಿದೆ . ಪ್ರಯಾಣಿಕರನ್ನು ಕರೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ . ಇದನ್ನು ಕಂಡ ಚಾಲಕ , ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ . ಕೂಡಲೇ ಅಗ್ನಿಶಾಮಕ ದಳದವರಿಗೆ ಸುದ್ದಿ ಮುಟ್ಟಿದ್ದರಿಂದ ಸ್ಥಳಕ್ಕೆ ಬಂದ …
Read More »
BigTv News
September 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡಿಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಹಸ್ತರಾಗಿ ಬರುತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪ್ರಸ್ತುತ ಯಾವುದೇ ಸಂವಿಧಾನಾತ್ಮಕ ಹುದ್ದೆಯಲ್ಲಿಲ್ಲ. ಭಾರತದ ಕಾನೂನು ವ್ಯವಸ್ಥೆ ಅಡಿಯಲ್ಲಿ ತನಿಖೆ ನಡೆಯಲಿ. ನಮಗೆ ಕಾನೂನಿನ ಮೇಲೆ ವಿಶ್ವಾಸ ಇದೆ. ಆದರೆ ಯಡಿಯೂರಪ್ಪ ಬಗ್ಗೆ ಶಾಸಕ ಬಸವರಾಜ ಯತ್ನಾಳ ಏನೂ ಹೇಳಿಕೆ ಕೊಟ್ಟಿದ್ದಾರೆ ಎಂಬ ಸ್ಪಷ್ಟ …
Read More »
BigTv News
September 16, 2022
Breaking News, ಹುಬ್ಬಳ್ಳಿ
.ಹುಬ್ಬಳ್ಳಿ : ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಮಿಸ್ ಇಂಟರ್ ಕ್ವಾಂಟಿನೆಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಊರ್ವಶಿ ಸೌಂದರ್ಯ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಧಾರವಾಡದ ವರ್ಶಿನಿ ರಾಮಡಗಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ ಎಂದು ವರ್ಷಿಣಿ ತಾಯಿ ಮಂಜುಳಾ ರಾಮಡಗಿ ಹೇಳಿದರು. ವರ್ಶಿನಿ ರಾಮಡಗಿ ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಶಿನಿ ಮಿಸ್ ಊರ್ವಶಿಯಾಗಿ ವಿನ್ನರಾಗಿದ್ದು, ಒಟ್ಟು 25 ರಾಜ್ಯಗಳಿಂದ 18 ರಿಂದ 25 ವರ್ಷದೊಳಗಿನ 25 ಮಾಡೆಲ್ಗಳು …
Read More »
BigTv News
September 16, 2022
Breaking News
ಮಂಡ್ಯ : ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಇಂದು ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.ಅಕ್ಟೋಬರ್ 13 ರಿಂದ 16 ರ ವರೆಗೂ ಕೆಆರ್ …
Read More »
BigTv News
September 16, 2022
Breaking News, ಬೆಂಗಳೂರು
ಬೆಂಗಳೂರು : ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನನ್ನು ಮಂಜೂರು ಮಾಡಿ ಶೀಘ್ರವಾಗಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ವೈಯಾಲಿಕಾವಲ್ ನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯ ಭವನಕ್ಕೆ ಎರಡು ಕಂತುಗಳಲ್ಲಿ 5 ಕೋಟಿ ರೂ ಒದಗಿಸಿ, 4 ನಾರಾಯಣ ಗುರುಗಳ ವಸತಿ ಶಾಲೆಗೆ 30 ರಿಂದ 40 …
Read More »