Breaking News

Breaking News

ಐದನೇ ದಿನಕ್ಕೆ ಕಾಲಿಟ್ಟಿ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ

ತಿರುವನಂತಪುರಂ (ಕೇರಳ): ಪಕ್ಷದ ಸಂಸದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಯಾತ್ರೆಯು ಇಂದು ಕೇರಳಕ್ಕೆ ಪ್ರವೇಶಿಸಿದೆ. ಕಾಂಗ್ರೆಸ್ ನಾಯಕರು ಕೇರಳ ಮತ್ತು ತಮಿಳುನಾಡು ಗಡಿಯ ಸಮೀಪದಲ್ಲಿರುವ ಸಣ್ಣ ಪಟ್ಟಣವಾದ ಪರಸ್ಸಾಲವನ್ನು ತಲುಪಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,500 ಕಿಮೀ ಪಾದಯಾತ್ರೆ 150 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಮತ್ತು 12 ರಾಜ್ಯಗಳನ್ನು ಒಳಗೊಂಡಿದೆ. ಕೇರಳದಿಂದ, ಯಾತ್ರೆಯು ಮುಂದಿನ 18 ದಿನಗಳ ಕಾಲ ರಾಜ್ಯದ ಮೂಲಕ ಸಂಚರಿಸಲಿದ್ದು, …

Read More »

ಗಣಪತಿ ಮೆರವಣಿಗೆಯಲ್ಲಿ ಯುವಕನ ಬರ್ಬರವಾಗಿ ಹತ್ಯೆ

ಬೆಳಗಾವಿ: ಗಣಪತಿ ಮೆರವಣಿಗೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ(20) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅರ್ಜುನಗೌಡ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರಗೋಡ ಪೊಲೀಸ್ ಠಾಣೆ …

Read More »

ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಚಾಲನೆ

ಬೆಂಗಳೂರು: ರಾಷ್ಟ್ರದ ಪ್ರಥಮ ಪ್ರಜೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಪ್ರಕಟಿಸಿದ್ದಾರೆ. ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಈ ಮಹತ್ವ ಘೋಷಣೆ ಮಾಡಿದ್ದಾರೆ.ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದಸರಾ ಉತ್ಸವನ್ನು …

Read More »

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಕೆಲಸ

ಬೆಂಗಳೂರು: ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಘೋಷಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಈ ಮಹತ್ವ ಘೋಷಣೆ ಮಾಡಿದ್ದಾರೆ.ತಮ್ಮ ಭಾಷಣವನ್ನು ಮುಗಿಸಿ ವೇದಿಕೆಯ ಮೇಲೆ ಕುತಿದ್ದ ಸಿಎಂ ಬಳಿಕ ಪುನಃ ಬಂದು ಈ ಘೋಷಣೆಯನ್ನು ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. …

Read More »

ಹಾಡಹಗಲೇ ಬಂಗಾರದ ಅಂಗಡಿಗೆ ಕನ್ನ;ಬೆಚ್ಚಿ ಬಿದ್ದ ಕುಸುಗಲ್ ಜನತೆ!

ಹುಬ್ಬಳ್ಳಿ- ಹಾಡಹಗಲೇ ಬಂಗಾರದ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಖದೀಮರು ಕಳ್ಳತನಕ್ಕೆ ಯತ್ನಿಸಿದ ದೃಶ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದ ಪಂಚಾಯತಿ ಹತ್ತಿರ ನಡೆದಿದೆ. ಹೌದು,,, ಇತ್ತೀಚಿನ ದಿನಗಳಲ್ಲಿ ಕುಸಗಲ್ ಗ್ರಾಮದಲ್ಲಿ ಕಳ್ಳತನ ಹಾವಳಿ ಹೆಚ್ಚಾಗಿದೆ. ಕುಸಗಲ್ ಗ್ರಾಮದಲ್ಲಿ ಗುರುನಾಥ ಕಮ್ಮಾರ ಎಂಬುವವರಿಗೆ ಸೇರಿದ ಈ ಬಂಗಾರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಲ್ಲೆಗೆ ಕೈ ಹಾಕಿ ಕಳ್ಳತನಕ್ಕೆ ಯತ್ನ ಮಾಡಿರುವ ಸಿಸಿ ಕ್ಯಾಮರಾದಲ್ಲಿ …

Read More »

2023 ರ ಚುನಾವಣೆ ಯಲ್ಲಿ ಭಾಜಪದ ಕಮಲ ಅರಳುವ ಸಂದೇಶ ಸ್ಪಷ್ಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜನಸ್ಪಂದನ ಕರ್ನಾಟಕದ ಹಳ್ಳಿ ಹಳ್ಳಿಗೂ, ಮೂಲೆ ಮೂಲೆಗೂ, ಕರ್ನಾಟಕದ ಪ್ರತಿ ತಾಲ್ಲೂಕು, ಕ್ಷೇತ್ರಕ್ಕೆ ಪ್ರಯಾಣಿಸಲಿದೆ.2023 ರ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ ದ ಕಮಲ ಅರಳುವ ಸಂದೇಶ ಸ್ಪಷ್ಟವಾಗಿ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು. ಅವರು ಇಂದು ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ಆಯೋಜಿಸಿದ್ದ “ ಜನಸ್ಪಂದನ” ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಆನಾವರಣ ಹಾಗೂ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಿಟ್ಟ ನಿಲುವಿನಿಂದ …

Read More »

ಸೌಹಾರ್ಧತೆಗೆ ಮತ್ತೊಮ್ಮೆ ಸಾಕ್ಷಿಯಾದ ಧಾರವಾಡ : ಮಸೀದಿ ಎದುರು ಗಣೇಶನಿಗೆ ಮಾಲಾರ್ಪಣೆ

ಧಾರವಾಡ : ಹಿಂದೂ , ಮುಸ್ಲಿಂ ಭಾಯಿ ಭಾಯಿ ಎಂಬುದಕ್ಕೆ ಧಾರವಾಡ ಮತ್ತೊಮ್ಮೆ ಸಾಕ್ಷಿಯಾಗಿದೆ . ಧಾರವಾಡದಲ್ಲಿ ಮುಸ್ಲಿಂ ಯುವಕರು ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ಧತೆಗೆ ಮತ್ತೊಮ್ಮೆ ಸಾಕ್ಷಿಯಾಗಿದ್ದಾರೆ . ಹೌದು ! ನಾಳೆ ಹುಣ್ಣಿಮೆ ಇರುವುದರಿಂದ 11 ನೇ ದಿನದ ಗಣೇಶನನ್ನು ವಿಸರ್ಜನೆ ಮಾಡಲು ಕೊಂಡೊಯ್ಯಲಾಗುತ್ತಿತ್ತು . ಮೆರವಣಿಗೆ ಮೂಲಕ ತರಲಾಗುತ್ತಿದ್ದ ಗಣೇಶನ ಮೂರ್ತಿ ಧಾರವಾಡದ ಮದನಿ ಮಸೀದಿ ಎದುರಿಗೆ ಬರುತ್ತಿದ್ದಂತೆ ಮುಸ್ಲಿಂ ಯುವಕರು ಗಣೇಶನ ಮೂರ್ತಿಗೆ …

Read More »

ಬಿಜೆಪಿ ಸರ್ಕಾರಕ್ಕೆ ಜನ ಕಾಳಜಿ ಇಲ್ಲ, ಕೇವಲ ದುಡ್ಡು ಹೊಡೆಯೊದು : ಸಿದ್ದರಾಮಯ್ಯ

ಹುಬ್ಬಳ್ಳಿ : ಪ್ರವಾಹದಿಂದ ಹಾನಿಯುಂಟಾದ ಪ್ರದೇಶಗಳಿಗೆ ಭೇಟಿ ನೀಡ್ತಿದ್ದೇನೆ.‌ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ ವಿಚಾರ. ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ‌ ಸಿಎಂ ಸಿದ್ಧರಾಮಯ್ಯ ಹೇಳಿದರು. ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಇದಕ್ಕೆಲ್ಲ ಈ ಭ್ರಷ್ಟಾಚಾರದ ಬಿಜೆಪಿ ಸರ್ಕಾರ ಕಾರಣ ಎಂದು …

Read More »

ಸಾರ್ವಜನಿಕ ಗಣೇಶೋತ್ಸವಕ್ಕೆ ಅದ್ದೂರಿ ವಿದಾಯ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸುಮಾರು ೧೨೭ ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಮೂಲಕ ಅದ್ದೂರಿಯಾಗಿ ವಿದಾಯ ಹೇಳುವ ಮೂಲಕ ಹುಬ್ಬಳ್ಳಿ ಜನತೆ ಸಾಕ್ಷಿಯಾಯಿತು. ನಗರದ ದಾಜೀಬಾನ್ ಪೇಟೆಯ ಹುಬ್ಬಳ್ಳಿ ಕಾ ರಾಜಾ, ಮರಾಠಿ ಗಲ್ಲಿ ಚಾ ಮಹಾರಾಜ್, ದುರ್ಗದಬೈಲ್, ವಿದ್ಯಾನಗರ, ಅಕ್ಕಿಹೊಂಡ, ಬಾಣಿಓಣಿ, ಕೊಪ್ಪಿಕರ ರೋಡ್, ಹೊಸೂರ, ಉಣಕಲ್ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆಯು ಸಾವಿರಾರು ಜನರ ಸಮ್ಮುಖದಲ್ಲಿ ನೋಡಗರು …

Read More »

ಎಂ ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಬೆಂಗಳೂರು: ಕೆಲ ದಿನಗಳ ಹಿಂದೆ ಮಾಜಿ ಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ , ಕಾಂಗ್ರೆಸ್ ಪಕ್ಷಕ್ಕೆ  ರಾಜೀನಾಮೆ ನೀಡಿ ಹೊರ ನಡೆದಿದ್ದರು. ಇದೀಗ ಅವರು ಸೆ.10 ರ ಇಂದು ಅಧಿಕೃತವಾಗಿ ಬಿಜೆಪಿ  ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 10-09-2022ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಅಂದಹಾಗೇ ದಿನಾಂಕ …

Read More »