BigTv News
September 5, 2022
Breaking News
ಸಾಗರ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್‌ಎನ್ ನಗರ ಹೊಸ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಸಾಗರ ಪೇಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ, ಗೋವರ್ಧನ್, ಎಎಸ್‌ಐ …
Read More »
BigTv News
September 5, 2022
Breaking News, ದೇಶ-ವಿದೇಶ
ಬ್ರಿಟನ್ : ಭಾರತೀಯ ಮೂಲದ ರಿಷಿ ಸುನಕ್ ಮತ್ತು ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಇವರಲ್ಲಿ ಯಾರು ಬ್ರಿಟನ್ ಪ್ರಧಾನಿ ಪಟ್ಟಕ್ಕೇರಲಿದ್ದಾರೆ ಎಂದು ಇಂದು ನಿರ್ಧಾರವಾಗಲಿದೆ. ಪ್ರಧಾನಿ ಪಟ್ಟಕ್ಕೆ ಅಂತಿಮವಾಗಿ ಕಣದಲ್ಲಿರುವ ಇವರು ಭಾನುವಾರ ತಮ್ಮದೇ ಆದ ಪ್ರತಿಜ್ಞೆಯನ್ನು ನೀಡಿದ್ದಾರೆ.ರಿಷಿ ಸುನಕ್ ಕಡಿಮೆ ಆದಾಯದ ಜನರನ್ನು ಗುರಿಯಾಗಿಸಿಕೊಂಡು ಪ್ರಚಾರ ಮಾಡಿದರೆ, ಇತ್ತ ಲಿಜ್ ಟ್ರಸ್ ನಾನು ಪ್ರಾಧಾನಿಯಾಗಿ ಆಯ್ಕೆಯಾದರೆ, ‘ತಕ್ಷಣವೇ ಕ್ರಮ ಕೈಗೊಂಡು ಕಾರ್ಯನಿರ್ವಹಿಸುತ್ತೇನೆ’ ಎಂದಿದ್ದಾರೆ. ಆದ್ರೆ, ಯಾವ ವಿಷಯದ …
Read More »
BigTv News
September 5, 2022
Breaking News
ತುಮಕೂರು: ಚತುರ್ಥಿ ಸಲುವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಇಂದು ಕೊಂಡೊಯ್ದು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ತುಮಕೂರಿನ ಭೀಮಸಂದ್ರ ನಿವಾಸಿ ಚೇತನ್ (15) ಸಾವಿಗೀಡಾದ ಯುವಕ.ಇಂದು ಸಂಜೆ ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಸಂದರ್ಭ ನೀರಿನಲ್ಲಿ ಮುಳುಗಿ ಈತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ …
Read More »
BigTv News
September 5, 2022
Breaking News
ಇಸ್ಲಾಮಾಬಾದ್ : ಪಾಕಿಸ್ತಾನದ ಭೀಕರ ಪ್ರವಾಹದ ಪರಿಣಾಮವಾಗಿ ದೇಶದಲ್ಲಿ ಸುಮಾರು 1,300 ಜನರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 29 ಜನರು ಸಾವನ್ನಪ್ಪಿದ್ದು, ಇನ್ನೂ ಕೂಡಾ ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದೇಶದ ದೊಡ್ಡ ಭಾಗಗಳೇ ಪ್ರವಾಹದಿಂದ ಮುಳುಗಡೆಯಾಗಿದೆ. ಮುಖ್ಯವಾಗಿ ಸಿಂಧ್ನಲ್ಲಿನ ಭೀಕರ ಪ್ರವಾಹಕ್ಕೆ ಕನಿಷ್ಠ 180 ಜನರು ಸಾವನ್ನಪ್ಪಿದ್ದಾರೆ. ಬಳಿಕ ಖೈಬರ್ ಪಖ್ತುಂಕ್ವಾದಲ್ಲಿ 138 ಹಾಗೂ ಬಲೂಚಿಸ್ತಾನದಲ್ಲಿ 125 ಜನರು ಸಾವನ್ನಪ್ಪಿದ್ದಾರೆ. ಸುಮಾರು …
Read More »
BigTv News
September 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ …
Read More »
BigTv News
September 5, 2022
Breaking News
ಮುಂಬೈ: ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತನಿಖೆಗೆ ಆದೇಶಿಸಿದ್ದಾರೆ. ಭಾನುವಾರ ಅಹಮದಾಬಾದ್‌ನಿಂದ ಮುಂಬೈಗೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಸಂಚುರಿಸುತ್ತಿದ್ದಾಗ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಅಪಘಾತ ಸಂಭವಿಸಿತ್ತು. ಸೈರಸ್ ಮಿಸ್ತ್ರಿ ನಿಧನಕ್ಕೆ ಸಂತಾಪ ಸೂಚಿಸಿರುವ ದೇವೇಂದ್ರ ಫಡಣವೀಸ್, ಡಿಜಿಪಿ ಜೊತೆ ಮಾತನಾಡಿ ವಿವರವಾದ ತನಿಖೆಗೆ ಆದೇಶಿಸಿದ್ದಾರೆ. ಪಾಲ್ಘರ್ ಜಿಲ್ಲೆಯಲ್ಲಿ …
Read More »
BigTv News
September 5, 2022
Breaking News
ಅಂಕೋಲಾ: ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹ ಸೂರ್ವೆಯಲ್ಲಿ ನಿಧನ ಹೊಂದಿದರು. ಕಳೆದ 2-3 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ವೆಂಟಿಲೇಟರ್ ಚಿಕಿತ್ಸೆ ನೀಡಿ ನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು. ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಜೈಲುವಾಸ ಅನುಭವಿಸಿರುವ ಅವರನ್ನು ಇತ್ತೀಚೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, …
Read More »
BigTv News
September 5, 2022
Breaking News
ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 5ರಿಂದ 8 ರ ವರೆಗೆ ಕರಾವಳಿಯಲ್ಲಿ “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ರವಿವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ …
Read More »
BigTv News
September 5, 2022
Breaking News, ಬೆಂಗಳೂರು
ಬೆಂಗಳೂರು: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ವಿವಿಧೆಡೆ ದಾಖಲೆಯ ಮಳೆಯಾಗಿದ್ದು, ಬೆಳ್ಳಂದೂರಿನ ಎಕೋಸ್ಪೇಸ್ ಬಳಿ ಮತ್ತೆ ನೀರು ತುಂಬಿಕೊಂಡಿದೆ. ನಗರದ ವಿವಿಧೆಡೆ ರಸ್ತೆ, ಅಂಡರ್ ಪಾಸ್ ಹಾಗೂ ಮೇಲ್ಸೇತುವೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ತಾವರೆಕೆರ ಚೋಳನಾಯನಹಳ್ಳಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಚೋಳನಾಯಕನಹಳ್ಳಿಯಲ್ಲಿ 15.5 ಮಿ.ಮೀ ಮಳೆ ದಾಖಲಾಗಿದೆ. ಸೊಂಡೆಕೊಪ್ಪ 79.5 ಮಿ.ಮೀ,ಹುಸ್ಕೂರು 70 ಮಿ.ಮೀ, ದಾಸಾನಪುರದಲ್ಲಿ 65.5 ಮಿ.ಮೀ …
Read More »
BigTv News
September 5, 2022
Breaking News
ನಾಗಮಂಗಲ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ 80 ರಿಂದ 90 ಸ್ಥಾನಗಳನ್ನು ಗೆಲ್ಲಲು ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ದೊಡ್ಡಚಿಕ್ಕನಹಳ್ಳಿಯಲ್ಲಿ ಭಾನುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದಿಲ್ಲ. ಕಾರ್ಯಕರ್ತರು, ಮುಖಂಡರು ಹಾಗೂ ಜನ ಸಾಮಾನ್ಯರ ಆಶೀರ್ವಾದವಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ವಿರೋಧಿಗಳಿಗೆ ಗೊತ್ತಾಗಲಿದೆ …
Read More »