Breaking News

Breaking News

ಹಳೇ ದ್ವೇಷ : ಓರ್ವ ವ್ಯಕ್ತಿ ಸಾವು

ಮೈಸೂರು: ಹಳೇ ದ್ವೇಷದಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಇಲ್ಲಿನ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ ಕೊಲೆಯಾದಾತ. ನವೀನ್ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಲೆ ಆರೋಪಿಗಳಾದ ಚಂದ್ರು ಹಾಗೂ ಶೆಟ್ಟಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ವಿವರ: ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ …

Read More »

ಅಪಹರಣ ಪ್ರಕರಣ : ಸಚಿವ ಕಾರ್ತಿಕ್ ಕುಮಾರ್ ರಾಜೀನಾಮೆ

ಪಾಟ್ನ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ …

Read More »

ಡಿಕೆಶಿ ಮನೆಗೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ

ಬೆಂಗಳೂರು: ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ …

Read More »

ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಸಾವು

ವಿಜಯಪುರ:ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ  ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ. ಮೂರು ತಿಂಗಳ ಮಗು ಸೇರಿ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಮೃತಪಟ್ಟಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ …

Read More »

ಮುರುಘಾಮಠದ ಶ್ರೀಗಳಿಗೆ ಎದುರಾದ ಮತ್ತೊಂದು ಸಂಕಷ್ಟ

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ …

Read More »

ಯಾರೂ ತಕರಾರು ಮಾಡದೇ ಗಣೇಶ ಹಬ್ಬ ಆಚರಣೆ ಮಾಡಬೇಕು : ಶೆಟ್ಟರ್

ಹುಬ್ಬಳ್ಳಿ; ನಗರರ ರಾಣಿ ಚೆನ್ನಮ್ಮ ( ಈದ್ಗಾ ) ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೋರ್ಟ್ ಅನುಮತಿ ನೀಡಿದ್ದು ಯಾರೂ ತಕರಾರು ಮಾಡದೇ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ನಗರರ ರಾಣಿ ಚೆನ್ನಮ್ಮ ( ಈದ್ಗಾ ) ಮೈದಾನದಲ್ಲಿ ಗಣೇಶನ ದರ್ಶನದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದರು ರಾಜ್ಯದಲ್ಲಿ ಗಣೇಶ ಹಬ್ಬ ವಿಜೃಂಬನೆಯಿಂದ ನಡಿತಾ ಇದ್ದು ಸಙತಸ ತಂದಿದ್ದು ಕೋವಿಡ್ …

Read More »

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : 1000ಕ್ಕೂ ಅಧಿಕ ಜನರು ಸಾವು

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿಂದ 1000ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ರಕ್ಷಣಾ ಕಾರ್ಯ ನಡೆಸಲು ಹೆಲಿಕಾಫ್ಟರ್‌ ಇಳಿಯಲೂ ಜಾಗವಿಲ್ಲದಷ್ಟು ಪ್ರವಾಹದ ನೀರು ದೇಶವನ್ನು ಆವರಿಸಿಕೊಂಡಿದೆ. ಮೂರು ದಶಕಗಳಲ್ಲೇ ಕಂಡು ಕೇಳರಿಯದ ಭಾರೀ ಮಳೆಯಿಂದ ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು ೧ ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.30 ಲಕ್ಷಕ್ಕೂ ಅಧಿಕ ಜನರು ಸ್ಥಳಾಂತರಗೊಂಡಿದ್ದಾರೆ. ಪಾಕಿಸ್ತಾನದ ಬಹುತೇಕ ಜಿಲ್ಲೆಗಳು ದ್ವೀಪದಂತಾಗಿವೆ. ರಕ್ಷಣೆಗೆ ಹೊರಟ ಹೆಲಿಕಾಫ್ಟರ್‌ ಗಳು ಇಳಿಯಲು ಒಣ ಪ್ರದೇಶ ಇಲ್ಲದೇ ಪರದಾಡುತ್ತಿವೆ …

Read More »

ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 4,700 ಕೆ.ಜಿಗೂ ಅಧಿಕ ಗಾಂಜಾ ಜಪ್ತಿ

ಗುವಾಹಟಿ: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 4,700 ಕೆ.ಜಿಗೂ ಅಧಿಕ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬಂದ ಅತಿ ದೊಡ್ಡ ಮಾದಕವಸ್ತು ಸಾಗಣೆ ಪ್ರಕರಣಗಳಲ್ಲಿ ಇದು ಸಹ ಒಂದಾಗಿದೆ ಎಂದೂ ಅವರು ಹೇಳಿದ್ದಾರೆ. ಅಸ್ಸಾಂ ಪೊಲೀಸರು ಸೋಮವಾರ ಚುರೈಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಯಮಿತ ತಪಾಸಣೆಯ ನಡೆಸುತ್ತಿದ್ದ ಸಂದರ್ಭ ನಿಷಿದ್ಧ ವಸ್ತುಗಳನ್ನು ಟ್ರಕ್‌ನಲ್ಲಿ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ ಎಂದು …

Read More »

ಸಾಮಾಜಿಕ ಮಾಧ್ಯಮ ಪೋಸ್ಟ್‌ : 45 ವರ್ಷ ಜೈಲು ಪಾಲು

ಸೌದಿ ಮಹಿಳೆಯೊಬ್ಬರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ 45 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ಮಾನವ ಹಕ್ಕುಗಳ ಗುಂಪೊಂದು ಹೇಳಿಕೆ ನೀಡಿದೆ. ಅಲ್ಲದೆ, ಒಂದೇ ವಾರದಲ್ಲಿ ಈ ರೀತಿಯ ಎರಡು ಪ್ರಕರಣಗಳು ನಡೆದಿರುವ ಬಗ್ಗೆಯೂ ವರದಿಯಾಗಿದೆ. ನೌರಾ ಅಲ್-ಕಹ್ತಾನಿ ಅವರು ಸಾಮಾಜಿಕ ಮಾಧ್ಯಮದ ಮೂಲಕ “(ದೇಶದ) ಸಾಮಾಜಿಕ ರಚನೆಯನ್ನು ಹರಿಯಲು ಅಂತರ್ಜಾಲವನ್ನು ಬಳಸಿದ್ದಾರೆ” ಮತ್ತು “ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಾರೆ” ಎಂದು ತಪ್ಪಿತಸ್ಥರೆಂದು ಸಾಬೀತಾದ …

Read More »

ಜಿ.ಪಂ. ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. ನಿಧನ

ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಭಾರತೀಯ ಸೇನೆಯಲ್ಲಿ ಮೇಜರ್ ಆಗಿದ್ದ ಡಾ. ಹರ್ಷ, ಸೇನೆಯಲ್ಲಿ ಸೇವೆ ಮುಗಿಸಿ …

Read More »