Breaking News

Breaking News

ಜಿ.ಪಂ. ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. ನಿಧನ

ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಭಾರತೀಯ ಸೇನೆಯಲ್ಲಿ ಮೇಜರ್ ಆಗಿದ್ದ ಡಾ. ಹರ್ಷ, ಸೇನೆಯಲ್ಲಿ ಸೇವೆ ಮುಗಿಸಿ …

Read More »

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಾ.ಶಿವಮೂರ್ತಿ ಬಂಧನಕ್ಕೆ ಆಗ್ರಹ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ ಈವರೆಗೆ ಪೊಲೀಸರು ಶ್ರೀಗಳನ್ನು ಬಂಧಿಸದೇ ಅವರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ. ತಕ್ಷಣ ಸ್ವಾಮೀಜಿಗಳನ್ನು ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿಎಎಸ್ ಎಸ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, …

Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ವರುಣಾ ದೊಡ್ಡ ಪ್ರಮಾಣದಲ್ಲಿ ಶಾಕ್‌ ನಿಡಿದ್ದು, ಹಬ್ಬದತ್ತ ಊರಿಗೆ ತೆರಳದೇ ಮನೆಲ್ಲೇ ಉಳಿಯುವ ಸನ್ನಿವೇಶ ನಿರ್ಮಾಣವಾಗಿದೆ. ಈ ನಡುವೆ ಆ.29, 30ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ; ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು; ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, …

Read More »

ಸೆ. 1ಕ್ಕೆ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಆಗಮನ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬರುವ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 1 ರಂದು ಯೋಗಿ ಬೆಂಗಳೂರಿಗೆ ಬರ್ತಿದ್ದಾರೆ. ಸೆಪ್ಟಂಬರ್ 1ರ ಬೆಳಗ್ಗೆ 11.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕ್ಯಾಂಪಸ್‌ಗೆ ಭೇಟಿ ಕೊಡಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ಯೋಗಿ ಪ್ರವಾಸ …

Read More »

ರಾಜ್ಯದ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರು : ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಯಾಗಿದೆ. ಪ್ರಸ್ತುತ ಮತ್ತೆ 820ಮಿ.ಮೀಟರ್ ಮಳೆಯಾಗಿದ್ದು, ರಾಮನಗರ, ಚಾಮರಾಜನಗರ, ಮಂಡ್ಯದಲ್ಲಿ 9 ಮಿ.ಮೀಟರ್ ಮಳೆಯಾಗಿದೆ. ಜೂನ್ ನಿಂದ ಈವರೆಗೆ 187 ಹಳ್ಳಿಗಳಿಗೆ ಮಳೆಯಿಂದಾಗಿ ಹಾನಿಯಾಗಿದೆ ಎಂದರು. ರಾಜ್ಯದಲ್ಲಿ ಈ ಬಾರಿ ಮಳೆಯಿಂದಾಗಿ 96 ಜನರು …

Read More »

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 845 ಮಂದಿಗೆ ಸೋಂಕು ದೃಢಪಟ್ಟಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 589, ಮೈಸೂರು 44, ಶಿವಮೊಗ್ಗ 34, ಕೊಡಗು 19, ಚಾಮರಾಜನಗರ 17, ಬಳ್ಳಾರಿ, ಹಾಸನ 14,ದಕ್ಷಿಣ ಕನ್ನಡ 13, ಧಾರವಾಡ 12, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ 10, ರಾಮನಗರ 9, ಬೆಳಗಾವಿ 8, ತುಮಕೂರು 7, ಕೋಲಾರ, ದಾವಣಗೆರೆ, ಉಡುಪಿ 6, ಮಂಡ್ಯ, ರಾಯಚೂರು 5, ಚಿಕ್ಕಮಗಳೂರು, ಬಾಗಲಕೋಟೆ …

Read More »

ಸಿದ್ದರಾಮಯ್ಯ ಅವರ ವಿರುದ್ಧ ಶ್ರೀರಾಮುಲು ತೀವ್ರ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಹೆಸರಿನಲ್ಲಿ ರಾಮ, ಉಂಡ ಮನೆಗೆ ಪಂಗನಾಮ. ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ.ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು …

Read More »

ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ವತಿಯಿಂದ ವಿವಿಧೆಡೆ ಪಂಥ ಸಂಚಲನ

ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಸಿಬ್ಬಂದಿ‌ ನಗರದ ವಿವಿಧೆಡೆ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಪಥಸಂಚಲನದಲ್ಲಿ ಪೋಲಿಸ್ ಹಲವು ತುಕಡಿಗಳು ಶಿಸ್ತು ಬದ್ದವಾಗಿ ನಡೆದು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಜಾಗೃತಿ ನಡಿಗೆ ನಡೆದರು. ಇದರೊಂದಿಗೆ ನಗರದ ನಾಗರಿಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಪ್ರಯತ್ನ ಮಾಡಿದರು. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಡೆದ ಪಥಸಂಚಲನ ಚನ್ನಮ್ಮ‌ ವೃತ್ತದಿಂದ ಆರಂಭವಾಗಿ, ಈದ್ಗಾ ಮೈದಾನ, …

Read More »

ತುಂಬಿ ಹರಿದ ಬೆಣ್ಣೆ ಹಳ್ಳ ಮಧ್ಯದಲ್ಲಿ ಸಿಲುಕಿಕೊಂಡ 25 ಕ್ಕೂ ಹೆಚ್ಚು ಜನರ ರಕ್ಷಣೆ

ಹುಬ್ಬಳ್ಳಿ : ಏಕಾಏಕಿಯಾಗಿ ತುಂಬಿ ಬಂದ ಬೆಣ್ಣೆ ಹಳ್ಳದ ಮಧ್ಯದಲ್ಲಿ ಸಿಲುಕಿಕೊಂಡ 25 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡುವಲ್ಲಿ ಅಗ್ನಿ ಶಾಮಕ‌ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಾಲೂಕಿನ ಇಂಗಳಹಳ್ಳಿ ಗ್ರಾಮದ ಸುತ್ತಮುತ್ತ ಅತೀ ಹೆಚ್ಚು ಮಳಯಾದ ಪರಿಣಾಮ ಬೆಣ್ಣೆ ಹಳ್ಳ ತುಂಬಿ ಬಂದಿದೆ. ಕೃಷಿ ಕೆಲಸಕ್ಕೆ ತೆರಳಿದ್ದ 25 ಕ್ಕೂ ಹೆಚ್ಚು ಜನ‌ ಸಿಲುಕಿಕೊಂಡಿದ್ದರು.‌ವಿಷಯ ತಿಳಿಯುತ್ತಿದಂತೆ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ಮತ್ತು ತಹಶೀಲ್ದಾರ ಪ್ರಕಾಶ ನಾಶಿ …

Read More »

ಹುಬ್ಬಳ್ಳಿಯಲ್ಲಿ ರಾವಣ ನೃತ್ಯರೂಪಕ ಮೂಲಕ ಪ್ರದರ್ಶನ

ಹುಬ್ಬಳ್ಳಿ: ನಾಂಟ್ಯ ಜಲಿ ನೃತ್ಯ ಕಲಾ ಕೇಂದ್ರ ಶಿರಸಿಯ ವತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಗುರು ಡಾ|| ಸಹನಾ ಭಟ್ ಅವರ ನಿರ್ದೇಶನದಲ್ಲಿ “ರಾವಣ” ನೃತ್ಯ ರೂಪಕ ಅತ್ಯಂತ ಮನೋಹರವಾಗಿ ಮೂಡಿ ಬಂತು. ರಾವಣನ ಬಾಲ್ಯ ಜೀವನ, ಯೌವ್ವನಾವಸ್ಥೆ ಶಸ್ತ್ರ ಮತ್ತು ಶಾಸ್ತ್ರಾಭ್ಯಾಸ, ಸೀತಾಪಹರಣ ಸನ್ನಿವೇಶ, ರಾಮನೊಡನೆ ಯುದ್ಧ ಇತ್ಯಾದಿ ದೃಶ್ಯಾವಳಿಗಳನ್ನು ಕಲಾ ಕೇಂದ್ರದ ಸುಮಾರು 50 ಕಲಾವಿದರ ತಂಡವು ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಿದ್ದು ಕಲಾಭಿಮಾನಿಗಳಿಗೆ ರಸದೌತಣ ನೀಡಿತು. …

Read More »