Breaking News

Breaking News

ಸೂತಕದ ಮನೆಗೆ ನೇರವಾದ ಶಾಸಕ ಜಿ ಟಿ ದೇವೇಗೌಡ

ಮೈಸೂರು: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಮಾವಿನಹಳ್ಳಿಯ ಗ್ರಾಮಸ್ಥರೊಬ್ಬರನ್ನು ಬಲಿ ಪಡೆದಿದೆ. ಜಯಪುರ ಗ್ರಾಮದ ಕಗ್ಗೆರೆ ಕೆರೆ ಶುಕ್ರವಾರ ಭರ್ತಿಯಾಗಿ ಕೋಡಿ ಹರಿದಿತ್ತು. ಇದರ ಸಮೀಪದಲ್ಲಿ ರಸ್ತೆ ದಾಟುವಾಗ ಮಾವಿನಹಳ್ಳಿಯ ಮಹೇಶ (45) ಎಂಬವರು ನೀರುಪಾಲಾಗಿದ್ದಾರೆ. ವಿಷಯ ತಿಳಿದು ಶಾಸಕ ಜಿ ಟಿ ದೇವೇಗೌಡರು ಮೃತ ಗ್ರಾಮಸ್ಥನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತನ ಪತ್ನಿಗೆ ವೈಯಕ್ತಿಕ 50 ಸಾವಿರ ರೂ.ಗಳ ನೆರವು ನೀಡಿ …

Read More »

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ವಹಿಸಬೇಕು : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇಂದು ಇಡೀ ಪರಿಸ್ಥಿತಿ ಸ್ಪಷ್ಟವಾಗಿದೆ. ನನ್ನ ವೈಯಕ್ತಿಕ ಅಭಿಪ್ರಾಯ ಎಂದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು …

Read More »

ಭೀಕರ ಅಪಘಾತ : ಒಬ್ಬ ಸಾವು

ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬ ಸಾವಿಗೀಡಾಗಿದ್ದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ. ತೆಂಗಿನಕಾಯಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಹಾಗೂ ಬೊಲೆರೋ ಸರಕು ಸಾಗಣಿಕೆ ವಾಹನಗಳ ಮಧ್ಯೆ ಡಿಕ್ಕಿಯಾಗಿ ಈ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲಕ ಚಾಲಕ ಸಾವಿಗೀಡಾಗಿದ್ದಾನೆ. ಬೊಲೆರೋ ಸರಕು ಸಾಗಣಿಕೆ ವಾಹನದ ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಾಮರಾಜನಗರ, ಹಾಸನ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More »

ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, 21ನೇ ಶತಮಾನ ಜ್ಞಾನದ ಶತಮಾನ. ನಿಮ್ಮ ಜ್ಞಾನವೇ ತಂತ್ರಾಂಶ ಜ್ಞಾನವಿದೆ. ಶಿಕ್ಷಣಕ್ಕೆ ಮಹತ್ವ ನೀಡಬೇಕು. ಸಮಾಜದ ಶೈಕ್ಷಣಿಕ …

Read More »

ಆತ್ಮಹತ್ಯೆಗೆ ಶರಣಾದ ರೈತ , ಸಾಲಭಾದೆಯೇ ಕಾರಣವಾಯ್ತಾ ?

ನವಲಗುಂದ : ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನವಲಗುಂದ ಪಟ್ಟಣದ ಹೊರಹೊಲಯದಲ್ಲಿನ ಜಮೀನಿನಲ್ಲಿ ನಡೆದಿದೆ . ಆತ್ಮಹತ್ಯೆಗೆ ಸಾಲಭಾದೆಯೇ ಕಾರಣ ಎನ್ನಲಾಗಿದೆ . ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯನ್ನು 48 ವರ್ಷದ ಬಸವರಾಜ ಉಣಕಲ್ ಎಂದು ಗುರುತಿಸಲಾಗಿದೆ . ಎರಡು ಎಕರೆ ಜಮೀನಿನಲ್ಲಿ ಬೆಳೆ ಬೆಳೆದಿದ್ದ ರೈತ , 3 ಲಕ್ಷ ಸಾಲ ಪಡೆದಿದ್ದ ಆದರೆ ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ಹಾನಿಯಾಗಿದ್ದು , ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ …

Read More »

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ : ಗೋಕುಲ ಠಾಣೆ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ : ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಗೋಕುಲ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ . ನಗರದ ಡಾಲರ್ಸ್ ಕಾಲೋನಿಯಲ್ಲಿ ಅಕ್ರಮವಾಗಿ 2 ಕೆ.ಜಿ 93 ಗ್ರಾಂ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಹುಬ್ಬಳ್ಳಿ ಮೂಲದ ಶಾನವಾಜ ಬ್ಯಾಹಟ್ಟಿ ಹಾಗೂ ಆಯಾನಲಿ ಬಿಜಾಪುರ ಎಂಬವರನ್ನು ಗೋಕುಲ್ ಠಾಣೆಯ ಇನ್ಸೆಕ್ಟರ್ ಜೆ.ಎಂ ಖಾಲಿಮಿರ್ಚಿ ನೇತೃತ್ವದ ತಂಡ ಬಂಧಿಸಿದೆ . ಆರೋಪಿಗಳ ಮೇಲೆ …

Read More »

ಹುಬ್ಬಳ್ಳಿಯಲ್ಲಿ ಸರ್ಕಾರಕ್ಕೆ ಸವಾಲು ಹಾಕಿದ ಮಾಜಿ ಡಿಸಿಎಂ

ಹುಬ್ಬಳ್ಳಿ : ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರು ಕಾಂಗ್ರೆಸ್ ನಿಂದ ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸುವ ಸರಕಾರವು ಆ ಬಗ್ಗೆ ತನಿಖೆ ನಡೆಸಲಿ.‌ ಆಗ ಯಾರು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗುತ್ತದೆ. ಹೇಗಿದ್ದರೂ ರಾಜ್ಯದಲ್ಲಿ ಬಿಜೆಪಿಯದ್ದೇ ಸರಕಾರವಿದೆ ಎಂದು ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ ಹೇಳಿದರು.ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರು ಮಾಡುತ್ತಿರುವ ಕಮಿಷನ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂಬುವುದಾದರೆ ಆ ಬಗ್ಗೆ ಸರಕಾರ ತನಿಖೆ ಮಾಡಲಿ. …

Read More »

ಗಣೇಶೋತ್ಸವ ಮೆರವಣಿಗೆಯಲ್ಲಿ ಯಾರೂ ಡಿಜೆ ಬಳಸುವಂತಿಲ್ಲ : ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದಶಿ

ಶಿವಮೊಗ್ಗ: ಈ ಬಾರಿಯ ಗಣೇಶೋತ್ಸವ ಮೆರವಣಿಗೆಯಲ್ಲಿಯಾರೂ ಡಿಜೆ ಬಳಸುವಂತಿಲ್ಲ. ಪ್ರತಿ ವರ್ಷವೂ ಡಿಜೆ ಅನ್ನು ಬ್ಯಾನ್ ಮಾಡುತ್ತಿದ್ದೆವು. ಹಾಗೆಯೇ ಈ ವರ್ಷವೂ ಡಿಜೆ ಬ್ಯಾನ್ ಮಾಡುತ್ತಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದೆವು. ಡಿಸಿ ಅವರು ಯಾರು ಮೆರವಣಿಗೆ ವೇಳೆ ಡಿಜೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ಈ ಆದೇಶ ಪಾಲಿಸಬೇಕು …

Read More »

ನಾವೂ ರಾಯಚೂರನ್ನು ಸಂಪೂರ್ಣ ಅಭಿವೃದ್ಧಿ ಮಾಡುತ್ತೇವೆ, ಒಂದಿಂಚು ಜಾಗ ಕೊಡಲ್ಲ : ಬೊಮ್ಮಾಯಿ

ಬೆಂಗಳೂರು: ರಾಯಚೂರನ್ನ ತೆಲಂಗಾಣಕ್ಕೆ ಸೇರಿಸೋ ಬಗ್ಗೆ ಅಲ್ಲಿನ ಜನ ಮಾತನಾಡ್ತಿದ್ದಾರೆ ಅಂತ ತೆಲಂಗಾಣ ಸಿಎಂ ಹೇಳಿಕೆ ಕೊಟ್ಟಿದ್ರಲ್ಲ ಅದಕ್ಕೆ ಈಗ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ನೀಡಿರೋ ಹೇಳಿಕೆ ರಾಜಕೀಯ ಪ್ರೇರಿತ. ತೆಲಂಗಾಣದ ಸಮಸ್ಯೆ ಡೈವರ್ಟ್ ಮಾಡೋಕೆ ಈ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಹಿಂದುಳಿದಿದೆ ಅಂತ ಹೋರಾಟ ಮಾಡಿ, ಪ್ರತ್ಯೇಕ ರಾಜ್ಯ ತೆಗೊಂಡ್ರು. ಆದ್ರೆ ಅದು ಇನ್ನೂ ಹಿಂದುಳಿದಿದೆ. ನಾವೂ ರಾಯಚೂರನ್ನು ಸಂಪೂರ್ಣ …

Read More »