BigTv News
August 25, 2022
Breaking News, ಧಾರವಾಡ
ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಧಾರವಾಡ …
Read More »
BigTv News
August 25, 2022
Breaking News
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ. ಜೀ5 ಸಂಸ್ಥೆ ವಿಕ್ರಾಂತ್ ರೋಣ ಸಿನಿಮಾದ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಖರೀದಿ ಮಾಡಿತ್ತು. ಇದೀಗ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನವಾಗಿ 100 ಕೋಟಿ ಕ್ಲಬ್ ಸೇರಿರುವ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಸೆಪ್ಟೆಂಬರ್ 2 ರಿಂದ ಜೀ5 ಆಪ್ ನಲ್ಲಿ ವಿಕ್ರಾಂತ್ ರೋಣ ಸಿನಿಮಾವನ್ನು ವೀಕ್ಷಿಸಬಹುದಾಗಿದೆ. ಈ ಬಗ್ಗೆ ಸ್ವತಃ ಜೀ5 ಪ್ರಕಟಣೆ ನೀಡಿದೆ.
Read More »
BigTv News
August 25, 2022
Breaking News, ದೆಹಲಿ
ನವದೆಹಲಿ: ಮಳೆಯ ಅಬ್ಬರದ ನಡಿವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 10,725 ಜನರಲ್ಲಿ ಹೊಸದಾಗಿ ಸೋಂಕು ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 527488ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 94,047 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ …
Read More »
BigTv News
August 25, 2022
Breaking News
ಅಕ್ರಮಗಣಿಗಾರಿಕೆ ಹಗರಣದಡಿಯಲ್ಲಿ ತನಿಖೆ ನಡೆಸುವ ವೇಳೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಸಹಾಯಕ ಎಂದು ಹೇಳಲಾದ ಪ್ರೇಮ್ ಪ್ರಕಾಶ್ ಅವರ ನಿವಾಸದಲ್ಲಿ 2 ಎಕೆ -47 ರೈಫಲ್‌ಗಳು ಪತ್ತೆಯಾದ ಬೆನ್ನಲ್ಲೇ ಪ್ರೇಮ್ ಪ್ರಕಾಶ್ ಅವರನ್ನು ಬಂಧಿಸಲಾಗಿದೆ. ಬುಧವಾರ ಪ್ರೇಮ್ ಪ್ರಕಾಶ್ ಅವರ ಮನೆಯಿಂದ ಎರಡು ಎಕೆ-47 ರೈಫಲ್‌ಗಳು ಮತ್ತು 60 ಕಾಟ್ರಿಡ್ಜ್‌ಗಳನ್ನು ಇಡಿ ವಶಪಡಿಸಿಕೊಂಡಿದೆ. 100 ಕೋಟಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪ್ರೇಮ್ ಪ್ರಕಾಶ್ ಅವರ ಜಾರ್ಖಂಡ್ …
Read More »
BigTv News
August 25, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ. ಅವರ ಆಪ್ತ ಸಹಾಯಕ ಈ ಕುರಿತಾಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಡಿದ ಟಿಪ್ಪು ಸುಲ್ತಾನ್ ಬಗ್ಗೆ ನೀನು ಮುಸ್ಲಿಂ ಗೂಂಡಾ ಎಂದು ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲು ನಮ್ಮ …
Read More »
BigTv News
August 25, 2022
Breaking News, ಬೆಳಗಾವಿ
ಬೆಳಗಾವಿ: ಕೆಪಿಟಿಸಿಎಲ್ (KPTCL) ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಬೆಳಗಾವಿ ಪೊಲೀಸರಿಂದ ಮತ್ತೆ ಮೂವರ ಬಂಧನ ಮಾಡಿದ್ದು, ವಿಚಾರಣೆ ಮಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕ, ಅಭ್ಯರ್ಥಿಗಳ ಇಬ್ಬರು ಸಂಬಂಧಿಕರನ್ನು ಬಂಧನ ಮಾಡಿಲಾಗಿದೆ. ಲೀಕ್ ಆದ ಪ್ರಶ್ನೆ ಪತ್ರಿಕೆ ನೋಡಿ ಅತಿಥಿ ಉಪನ್ಯಾಸಕ ಆದೇಶ ನಾಗನೂರಿ ಉತ್ತರ ಬರೆಯುತ್ತಿದ್ದರು ಎನ್ನಲಾಗುತ್ತಿದೆ. ಗದಗ ಮುನ್ಸಿಪಲ್ ಪಿಯು ಕಾಲೇಜಿನಿಂದ ಪ್ರಶ್ನೆಪತ್ರಿಕೆ ಲೀಕ್ ಆಗಿತ್ತು. ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ.ಗ್ರಾಮದ ತೋಟದ ಮನೆಯಲ್ಲಿ ಉತ್ತರ …
Read More »
BigTv News
August 25, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ನಾಡಹಬ್ಬ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೆಚ್ಚಿನ ಮೆರುಗು ನೀಡಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಸಿದ್ಧತೆ ನಡೆದಿದೆ. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ದಸರಾ ಮಹೋತ್ಸವವನ್ನು ಸರಳವಾಗಿ ನಡೆಸಲಾಗಿತ್ತು. ಆದರೆ, ದೀಪಾಲಂಕಾರ ಸೊರಗಿರಲಿಲ್ಲ. ಈ ಬಾರಿ ನಾಡಹಬ್ಬವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ. ಇದಕ್ಕೆ ತಕ್ಕಂತೆ ವಿದ್ಯುತ್ ದೀಪಾಲಂಕಾರದ ಪ್ರಮಾಣವನ್ನೂ ಹೆಚ್ಚಿಸಲಾಗುತ್ತಿದೆ. ನಗರದ ಹೃದಯ ಭಾಗ, ಅರಮನೆ ಸುತ್ತಮುತ್ತಲಿನ ರಸ್ತೆಗಳೊಂದಿಗೆ …
Read More »
BigTv News
August 25, 2022
Breaking News, ತುಮಕೂರು
ತುಮಕೂರು : ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟು ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ರಾಯಚೂರು ಮೂಲದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್, ಲಾರಿಗೆ ಡಿಕ್ಕಿಯೊಡೆದಿದೆ.ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕ್ರೂಸರ್ ನುಜ್ಜುಗುಜ್ಜಾಗಿದೆ.
Read More »
BigTv News
August 25, 2022
Breaking News, ತುಮಕೂರು
ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ …
Read More »
BigTv News
August 24, 2022
Breaking News, ಧಾರವಾಡ
ಧಾರವಾಡ : ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಕೂಡಲೇ ಪ್ರಾರಂಭಿಸಬೇಕು . ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನವಲಗುಂದ , ಅಣ್ಣಿಗೇರಿ , ಹುಬ್ಬಳ್ಳಿ ತಾಲೂಕ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಹೆಸರು ಕಾಳು ಖರೀದಿ ಕೇಂದ್ರ ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಕೂಡಲೇ ನೀಡಬೇಕೆಂದು ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಲಾಗಿತ್ತು , ಆದರೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ …
Read More »