BigTv News
August 24, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಪ್ರೀತಿಯ ನಾಟಕವಾಡಿ ಅಪ್ರಾಪ್ತಿಯನ್ನು ಲಾಡಜ್ಜ ಕರೆದೊಯ್ದು ಅತ್ಯಾಚಾರ ನಡೆಸಿರುವ ಕುರಿತು ಕಾರವಾರದ ಶ್ರೀನಿಧಿ ಅಲಿಯಾಸ್ ಓಂಕಾರ ಕೊಟ್ಟೇಕರ ಎಂಬಾತನ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . 17 ವರ್ಷದ ಅಪ್ರಾಪ್ತಿಯ ಜೊತೆ ಶ್ರೀನಿಧಿ ಪ್ರೀತಿಯ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ . ಪುಸಲಾಯಿಸಿ ಆಕೆ ಜತೆಗೆ ಅಲಿಂಗನದ ಫೋಟೋ ತೆಗೆದುಕೊಂಡಿದ್ದ .ಈ ಫೋಟೋ ತೋರಿಸಿ ಆಕೆಗೆ ಬೆದರಿಸಿ 2021 ರ ನವೆಂಬರ್‌ನಿಂದ 2022 ರ …
Read More »
BigTv News
August 24, 2022
Breaking News, ಧಾರವಾಡ
ಧಾರವಾಡ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ರಸ್ತೆ ಮುಖಾಂತರ ಹೋಗುವ ಸಂದರ್ಭದಲ್ಲಿ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸರು ಕರ್ತವ್ಯಕ್ಕೆ ತಡವಾಗಿ ಬಂದಿದ್ದಕ್ಕೆ ಆ ಇಬ್ಬರೂ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ . ಧಾರವಾಡ ಮಹಿಳಾ ಪೊಲೀಸ್ ಠಾಣೆಯ ಹವಾಲ್ದಾರ ಸುರೇಶ ಹುಡೇದ ಹಾಗೂ ಅಣ್ಣಿಗೇರಿ ಪೊಲೀಸ್ ಠಾಣೆಯ ರಾಜೀವ್ ಶಿರುಂದ ಎಂಬುವವರೇ ಅಮಾನತ್ತುಗೊಂಡ ಪೊಲೀಸರು . ತಮಗೆ ನಿಯೋಜಿಸಿದ್ದ …
Read More »
BigTv News
August 24, 2022
Breaking News, ಧಾರವಾಡ
ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ . ಈ ವಿವಾದ ಇನ್ನೂ ಹಸಿರಿರುವಾಗಲೇ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಗಿದೆ . 101 ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದರಲ್ಲದೇ ಈ ಮೆರವಣಿಗೆಗೆ ಶಾಸಕ ಅಮೃತ ದೇಸಾಯಿ ಅವರೇ ಚಾಲನೆ ನೀಡಿದರು . ಚಕ್ಕಡಿಯಲ್ಲಿ ಸಾವರ್ಕರ್ ಭಾವಚಿತ್ರವನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ …
Read More »
BigTv News
August 24, 2022
Breaking News, ಹಾವೇರಿ
ಹಾವೇರಿ: ರಟ್ಟೀಹಳ್ಳಿ ಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ₹50 ಸಾವಿರ ಸಹಾಯಧನವನ್ನು ಮೃತರ ಕುಟುಂಬಸ್ಥರಿಗೆ ನೀಡಿದರು. ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು. ಪೌರಕಾರ್ಮಿಕ ನಾಗರಾಜ್ ಯಡಚಿ ಕೆಲಸ ಮಾಡುವ ಸಂಧರ್ಭದಲ್ಲಿ ವಿಷಜಂತುವೊಂದು …
Read More »
BigTv News
August 24, 2022
Breaking News
ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಮೊದಲನೇ ಅಲೆ ಬಂದ ಸಂದರ್ಭದಲ್ಲಿ ಜುಲೈ 2020ರಲ್ಲಿ ಅಮಿತಾಬ್ ಬಚ್ಚನ್ , ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ, ಮೊಮ್ಮಗಳು ಆರಾಧ್ಯ ಬಚ್ಚನ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಅಮಿತಾಬ್ ಬಚ್ಚನ್ …
Read More »
BigTv News
August 24, 2022
Breaking News, ಬೆಂಗಳೂರು
ಬೆಂಗಳೂರು : ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯ ಕುತ್ತಿಗೆ ಸೀಳಿ ಪತಿಯೇ ಕೊಲೆ ಮಾಡಿರುವ ಘಟನೆ ಕೆಆರ್ ಪುರಂ ನ್ಯಾನ್ಸಿ ಪ್ಲೋರಾ(29) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಜಾನ್ ಸುಪ್ರಿತ್ನನ್ನು ಬಂಧಿಸಲಾಗಿದೆ. ಶಾಮಿಯಾನ ಹಾಕುವ ಉದ್ಯಮ ಮಾಡುತ್ತಿದ್ದ ಜಾನ್ ಸುಪ್ರಿತ್ ಕಳೆದ ಎಂಟು ವರ್ಷಗಳ ಹಿಂದೆ ನ್ಯಾನ್ಸಿ ಪ್ಲೋರಾಳನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅನೈತಿಕ ಸಂಬಂಧದ ಅನುಮಾನದಲ್ಲಿ ಮನೆಯಲ್ಲಿ ಆಗಾಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. …
Read More »
BigTv News
August 24, 2022
Breaking News, ದೆಹಲಿ
ನವದೆಹಲಿ : ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೋರಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, ರಾಮ ಸೇತುವನ್ನು ಪ್ರಾಚೀನ ಪರಂಪರೆಯ ಸ್ಮಾರಕವನ್ನಾಗಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಈ ನಿರ್ಧಾರದ ಬಗ್ಗೆ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಒಂದು ವೇಳೆ …
Read More »
BigTv News
August 24, 2022
Breaking News
ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. …
Read More »
BigTv News
August 24, 2022
Breaking News, ಬೆಂಗಳೂರು
ಬೆಂಗಳೂರು : ಕಾಲೇಜಿಗೆ ತನ್ನ ಮಗಳನ್ನು ಬಿಟ್ಟು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಮತ್ತೊಂದು ಜೀವ ಬಲಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೇರೋಹಳ್ಳಿ ಮುಖ್ಯ ರಸ್ತೆಯ ಗುಂಡಿಯಿಂದ ಸುಪ್ರೀತ್ (44) ಎಂಬ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಆಗಸ್ಟ್ 18ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಸುಪ್ರೀತ್ ನೆಲಕ್ಕೆ ಬಿದ್ದಿದ್ದಿದ್ದಾರೆ. ಇನ್ನು, ಆಗಸ್ಟ್ 18ರಂದು ಬಿದ್ದು …
Read More »
BigTv News
August 24, 2022
Breaking News, ಬಳ್ಳಾರಿ
ಬಳ್ಳಾರಿ: ಸಾಲದ ಬಾಧೆ ರೈತರನ್ನಷ್ಟೇ ಅಲ್ಲ, ಉದ್ಯಮಿಗಳನ್ನೂ ಕಾಡುತ್ತಿದೆ. ಅವರು ಕೂಡ ಸಾಲಕ್ಕೆ ಹೆದರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಅಂಥ ಸಾವಿನ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆ ಆಗಿದೆ. ಸಾಲದ ಕಂತು ಕಟ್ಟಲಾಗದೆ ಎರಡು ಲಾರಿ ಮಾಲೀಕರೊಬ್ಬರು ನೇಣಿಗೆ ಕೊರಳೊಡ್ಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂಕಮನಾಳ ಬಳಿ ಈ ಆತ್ಮಹತ್ಯೆ ನಡೆದಿದೆ. ತುಂಬರಗುದ್ದಿ ಗ್ರಾಮದ ಕರಿಯಪ್ಪ ಎಂಬವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು …
Read More »