BigTv News
August 23, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೆ ಬಂದಿದ್ದರು. ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ದಕ್ಷಿಣ ಕನ್ನಡ ಜಿಲ್ಲಾ …
Read More »
BigTv News
August 23, 2022
Breaking News, ಬೆಂಗಳೂರು
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ …
Read More »
BigTv News
August 23, 2022
Breaking News, ಕೊಡಗು
ಕೊಡುಗು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 18ಕ್ಕೆ ಏರಿದೆ.
Read More »
BigTv News
August 23, 2022
Breaking News, ಕೊಡಗು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದೇ 24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ …
Read More »
BigTv News
August 23, 2022
Breaking News, ಬೆಂಗಳೂರು
ಬೆಂಗಳೂರು: ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡ್ ಶ್ರೇಣಿಯ ಭದ್ರತೆ ನೀಡಿದೆ. ಕೊಡಗಿನಲ್ಲಿ ಮೊಟ್ಟೆ ಎಸೆತ ಪ್ರಕರಣದ ಬಗ್ಗೆ ವ್ಯಾಪಾಕ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಇದೀಗ ಜೆಡ್ ಭದ್ರತೆ ನೀಡಲು ರಾಜ್ಯ ಸರಕಾರ ಆದೇಶಿಸಿದೆ.ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು, ಸಿಬ್ಬಂದಿ ಸೇರಿ 21 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಮೂರು ಪಾಳಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಬೇಕು. ಎಲ್ಲೇ …
Read More »
BigTv News
August 23, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ 2 ಸಾವಿರ ರೂ. ನೀಡುತ್ತಿದೆ. ನೌಕರರನ್ನು …
Read More »
BigTv News
August 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವುದಕ್ಕೆ ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಎಲ್ಲ ಇಲಾಖೆಗೆ ಹೇಗೆಲ್ಲಾ ಮನವಿ ಮಾಡಿಕೊಂಡಿದೆ ಎಂಬುದನ್ನು ಪಾಲಿಕೆ ಆವರಣದಲ್ಲಿ ಗಣೇಶ ಮೂರ್ತಿಯನ್ನು ಹಾಕಿಕೊಂಡು ಅನುಕು ಪ್ರದರ್ಶನ ಮಾಡಿದರು. ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ, ಹವಾ ನಿಯಂತ್ರಣ ಇಲಾಖೆ, ಮಹಾನಗರ ಪಾಲಿಕೆ, ಹೆಸ್ಕಾಂ, ರಾಜಕೀಯ ಹೀಗೆ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಉತ್ಸವ ಮಾಡಲು ಅವಕಾಶ ಮಾಡಿ ಕೊಡಲು ಹೆಗೆಲ್ಲಾ ಮನವಿ ಸಲ್ಲಿಸಿದ್ದಾರೆ. ಆ …
Read More »
BigTv News
August 22, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೆಶೋತ್ಸವ ಆಚರಣೆಗೆ ಗಡುವು ವಿಚಾರ, ಹುಬ್ಬಳ್ಳಿಯಲ್ಲಿ ಹಿಂದೂ ಸಂಘಟನೆಗಳ ತೀವ್ರ ಸ್ವರೂಪದ ಹೋರಾಟ ಆರಂಭವಾಗಿದೆ. ಕೂಡಲೇ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಗಳು ಹೆಚ್ಚುತ್ತಿವೆ. ಇದೇ ವೇಳೆ ಮಾತನಾಡಿದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಗಣೇಶೋತ್ಸವ ಆಚರಣೆಗೆ ಸರ್ಕಾರ ಹಾಗೂ ಪಾಲಿಕೆ ಮೀನಾ ಮೇಷ ಎಣಿಸುತ್ತಿದೆ. ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ. ಈದ್ಗಾ ಮೈದಾನ ಸಾರ್ವಜನಿಕ ಸ್ವತ್ತು. ಅಲ್ಲಿ ಮುಸ್ಲಿಂ …
Read More »
BigTv News
August 22, 2022
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿವಿಧ ಪತ್ರಿಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
Read More »
BigTv News
August 22, 2022
Breaking News, ದೆಹಲಿ
ನವದೆಹಲಿ: ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಜಿ 23 ಸಹವರ್ತಿ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಪಕ್ಷದ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಶರ್ಮಾ, ಪಕ್ಷದ ಯಾವುದೇ ಸಭೆಗಳಿಗೆ ತಮ್ಮನ್ನು ಆಹ್ವಾನಿಸದ ಕಾರಣ ಅವರ ಆತ್ಮಗೌರವಕ್ಕೆ ಧಕ್ಕೆಯಾಗಿರುವುದರಿಂದ …
Read More »