Breaking News

Breaking News

ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ : 2 ಸಾವು

ಧಾರವಾಡ :  ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಧಾರವಾಡ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿದ್ದವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು …

Read More »

ಮಾಜಿ ಸಿಎಂ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಇಂದು ರಾಣೆಬೆನ್ನೂರು ಬಂದ್

ಹಾವೇರಿ : ಕೊಡಗು ಜಿಲ್ಲೆ ಪ್ರವಾಸದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಇಂದು ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕುರುಬ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ನೆರೆಹಾನಿ ವೀಕ್ಷಣೆಗೆ ಕೊಡಗಿಗೆ ತೆರಳಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯವನ್ನು ಖಂಡಿಸಿ ಸೋಮವಾರ ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ ಎಂದು …

Read More »

ಅರಮನೆ ಮೈದಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಕ್ರೇಜಿಸ್ಟಾರ್ ಪುತ್ರ

ನಟ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಮಾಮಾನ ಹಿರಿಯ ಪುತ್ರ ವಿ. ಮನೋರಂಜನ್​ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಚನ್ನೈ ಮೂಲದ ವೈದ್ಯೆ ಸಂಗೀತ ಎಂಬುವರನ್ನು ಮನೋರಂಜನ್​ ವರಿಸಿದ್ದಾರೆ. ಅರಮನೆಯ ಮೈದಾನದಲ್ಲಿ ವಿವಾಹ ಮಹೋತ್ಸವ ಬಳ ಅದ್ಧೂರಿಯಾಗಿ ನೆರವೇರಿದೆ. ನಿನ್ನೆ ನಡೆದ ಆರತಕ್ಷತೆಯಲ್ಲಿ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಭಾಗವಹಿಸಿ, …

Read More »

ಬಿಜೆಪಿ ಅಧಿಕಾರಕ್ಕೆ ಬರಲು ವಾಜಪೇಯಿ, ಅಡ್ವಾಣಿ ಕಾರಣ : ನಿತಿನ್ ಗಡ್ಕರಿ

ನಾಗ್ಪುರ: ಬಿಜೆಪಿ ಅಧಿಕಾರಕ್ಕೆ ಬರಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಬಿಜೆಪಿ ನಾಯಕರಾದ ಎಲ್‌.ಕೆ. ಅಡ್ವಾಣಿ ಹಾಗೂ ದೀನದಯಾಳ್ ಉಪಾಧ್ಯಾಯ ಅವರ ಶ್ರಮವೇ ಕಾರಣ ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 11,000 ಶಿಕ್ಷಕರು ಮತ್ತು ಬುಡಕಟ್ಟು ಪ್ರದೇಶಗಳ ಶಾಲೆಗಳನ್ನೊಳಗೊಂಡ ‘ಲಕ್ಷ್ಮಣ ರಾವ್ ಮಕರ್ ಸ್ಮೃತಿ ಸಂಸ್ಥೆ’ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1980ರಲ್ಲಿ ಮುಂಬೈಯಲ್ಲಿ ನಡೆದ ಸಮಾವೇಶವೊಂದರಲ್ಲಿ ವಾಜಪೇಯಿ ಮಾಡಿದ್ದ ಭಾಷಣವನ್ನು ನೆನಪಿಸಿಕೊಂಡಿದ್ದಾರೆ. …

Read More »

ಮೈಸೂರು ದಸರಾ : ದೀಪಗಳಿಂದ ಅಲಂಕಾರಗೊಂಡ ಸಾಂಸ್ಕೃತಿಕ ನಗರಿ

ಮೈಸೂರು: ಈ ಬಾರಿಯ ದಸರಾ ಮಹೋತ್ಸ ಹಿನ್ನೆಲೆ ಮೈಸೂರು ನಗರದ ಪ್ರಮುಖ ವೃತ್ತ, ರಸ್ತೆ ಸೇರಿದಂತೆ ಒಟ್ಟು 110 ಕಿಲೋ ಮೀಟರ್‌ ದೀಪಾಲಂಕಾರಕ್ಕೆ ಸಿದ್ಧತೆ ಆರಂಭಿಸಲಾಗಿದೆ. ಪ್ರತಿವರ್ಷ ದಸರಾದಲ್ಲಿ ಪ್ರಮುಖ ಆಕರ್ಷಣೆಯೆಂದರೆ ಅದು ದೀಪಾಲಂಕಾರ. ಸಾವಿರಾರು ಪ್ರವಾಸಿರು, ಸ್ಥಳೀಯರು ಈ ದೃಶ್ಯದ ವೈಭವವನ್ನು ಕಣ್ತುಂಬಿಕೊಳ್ಳುತ್ತಾರೆ. ಮೈಸೂರಿನ ಹೃದಯ ಭಾಗದ ಪಾರಂಪರಿಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣ, ವೃತ್ತಗಳು, ಮುಖ್ಯ ಜಂಕ್ಷನ್‌ಗಳನ್ನು ಒಳಗೊಂಡಂತೆ ವಿವಿಧೆಡೆ ದೀಪಾಲಂಕಾರ ಮಾಡಲಾಗುತ್ತದೆ. ದಸರಾ ಸಮಯದಲ್ಲಿ ಸಂಜೆ 7 …

Read More »

ಪರೀಕ್ಷೆಯಲ್ಲಿ ಅಕ್ರಮ : ಆರೋಪಿಗಳು ಬಂಧನ

ಬೆಳಗಾವಿ : ಕೆಪಿಟಿಸಿಎಲ್‌ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಭಾರೀ ಅಕ್ರಮ ನಡೆದಿರುವ ಶಂಕೆ ಮೂಡಿದೆ.ಬೆಳಗಾವಿಯಲ್ಲಿ ಸ್ಮಾರ್ಟ್‌ವಾಚ್‌ ಬಳಸಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯನ್ನು ಬಂಧಿಸಿದ ಬೆನ್ನಲ್ಲೇ, ಇದೀಗ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಅಪ್ಪ-ಮಗನನ್ನು ಬಂಧಿಸಿದ್ದಾರೆ. ಗದಗ ನಗರದ ಮುನ್ಸಿಪಲ್‌ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಆತನ ಪುತ್ರ ಬಂಧಿತ ಆರೋಪಿಗಳು. ಆ.7ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆ …

Read More »

ತೆಲಂಗಾಣದ ಟಿ.ಆರ್‌. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ : ಅಮಿತ್‌ ಶಾ

ಹೈದರಾಬಾದ್‌: ತೆಲಂಗಾಣದ ಟಿ.ಆರ್‌. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಲ್ಲಿ ಹೇಳಿದರು. ಹೈದರಾಬಾದ್‌ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್‌ ಶಾ, ಸಿಕಂದರಾಬಾದ್‌ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮುನುಗೋಡು ಉಪಚುನಾವಣೆಯ ಗೆಲುವು ತೆಲಂಗಾಣದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಆರಂಭದ ಹೆಜ್ಜೆಯಾಗಲಿದೆ. ಟಿಆರ್‌ಎಸ್‌ ಸರ್ಕಾರ ಉರುಳಿಸುವ ಪ್ರಕ್ರಿಯೆ ಆರಂಭವಾಗಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ …

Read More »

ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ …

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ : ಸಿಎಂ

ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು ಮುಂದಿನ …

Read More »

ರಾಷ್ಟ್ರಧ್ವಜಕ್ಕೆ ಅಪಮಾನ: ಶಿಕ್ಷಕ ಹಾಗೂ ಶಾಲಾ ಸಮಿತಿ ಅಧ್ಯಕ್ಷನ ವಿರುದ್ಧ ದೂರು ದಾಖಲು

ಕಲಘಟಗಿ: ರಾಷ್ಟ್ರಧ್ವಜ ಉಲ್ಟಾ ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ,ಧ್ವಜ ಕಟ್ಟಿದ ದೈಹಿಕ ಶಿಕ್ಷಕ ಹಾಗೂ ಧ್ವಜಾರೋಹಣ ಮಾಡಿದವರ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.. ಇದೇ ಆಗಷ್ಟ್15 ರಂದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಅಂಬೇಡ್ಕರ್ ಪ್ರೌಢ ಶಾಲೆಯಲ್ಲಿ, ದೈಹಿಕ ಶಿಕ್ಷಕ ಪ್ರಕಾಶ ಕುಂಬಾರ ಹಾಗೂ ಶಾಲಾ ಸಮಿತಿ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ಉಲ್ಟಾ ಧ್ವಜ ಹಾರಿಸಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯೋತ್ಸವದ ದಿನದಂದು ಉಲ್ಟಾ ಧ್ವಜಾರೋಹಣ …

Read More »