Breaking News

Breaking News

ಕೌಟುಂಬಿಕ ಕಲಹಕ್ಕೆ ಭೀಕರ ರಕ್ತಪಾತ; ಪತ್ನಿ, ನಾದಿನಿಯನ್ನು ಕಟುಕನಂತೆ ಕೊಂದ ಪತಿ!

ಚಿಂತಾಮಣಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಪತ್ನಿ ಹಾಗೂ ನಾದಿನಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಶಮಾ (25) ಮತ್ತು ಆಕೆಯ ತಂಗಿ ರೇಷ್ಮಾ (18) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ಎಜಾಜ್ (30) ಬಳಿಕ ಕೋಲಾರದ ಗಲ್‌ಪೇಟೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ದಂಪತಿಗಳ ನಡುವೆ ಕಳೆದ ಮೂರು ತಿಂಗಳಿನಿಂದ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ನಡೆದ …

Read More »

ಕ್ರಿಕೆಟ್ ಬೆಟ್ಟಿಂಗ್ ಸಾಲದ ಬಾಧೆ: ತಂದೆಗೆ ವಿಡಿಯೋ ಕಳುಹಿಸಿ ನಾಲೆಗೆ ಹಾರಿ ಯುವಕ ಆತ್ಮಹತ್ಯೆ!

ಮಂಡ್ಯ: ಕ್ರಿಕೆಟ್ ಬೆಟ್ಟಿಂಗ್ ವ್ಯಸನದಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲೂಕಿನ ಕಿರಣ್ ಮೃತ ಯುವಕನಾಗಿದ್ದು, ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿಯ ವಿಸಿ ನಾಲೆಗೆ ಹಾರಿ ಜೀವ ಕಳೆದುಕೊಂಡಿದ್ದಾನೆ. ಐಪಿಎಲ್ ಸೇರಿದಂತೆ ವಿವಿಧ ಕ್ರಿಕೆಟ್ ಪಂದ್ಯಗಳ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಕಿರಣ್, ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾಗಿದೆ. ಸಾಲಗಾರರ ಒತ್ತಡದಿಂದ ಮಾನಸಿಕವಾಗಿ …

Read More »

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯಲ್ಲೇ ಭೇದಿಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಜುಲೈ 5ರಂದು ದೇವರ ದರ್ಶನದ ಬಳಿಕ ಭಕ್ತೆ ನಿಮಿಶಾ ಅವರ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳುವಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದರು. ಬಂಧಿತರನ್ನು …

Read More »

ಗಾಂಜಾಗೆ ಒಂದು ದಮ್ಮು… ಬದುಕಿಗೆ ಶಾಶ್ವತ ಕತ್ತಲು..!

ಗಾಂಜಾ-ಡ್ರಗ್ಸ್‌ಗೆ ಹೇಳಿ ಇಲ್ಲ… ಆರೋಗ್ಯಕರ ಸಮಾಜಕ್ಕೆ ಹೇಳಿ “ಹೌದು”..! ಗಾಂಜಾ-ಡ್ರಗ್ಸ್ ಮುಕ್ತ ಸಮಾಜವೇ ನಮ್ಮ ಸಂಕಲ್ಪ..ಒಂದು ದಮ್ಮಿಗೆ ಎಂದು ಆರಂಭವಾಗುವ ವ್ಯಸನ… ಕೊನೆಗೆ ಒಂದು ಕುಟುಂಬದ ನಗುವನ್ನೇ ಕಸಿದುಕೊಳ್ಳುತ್ತದೆ.. ಗಾಂಜಾ ಮತ್ತು ಡ್ರಗ್ಸ್ ಕ್ಷಣಿಕ ಮತ್ತನ್ನು ನೀಡಬಹುದು. ಆದರೆ ಅದು ಕಸಿದುಕೊಳ್ಳುವುದು ನಿಮ್ಮ ಆರೋಗ್ಯ, ಕನಸುಗಳು, ಸಂಬಂಧಗಳು, ಶಿಕ್ಷಣ, ಉದ್ಯೋಗ, ಭವಿಷ್ಯ ಮತ್ತು ಬದುಕನ್ನೇ… ಒಬ್ಬ ಯುವಕ ವ್ಯಸನಿಯಾದರೆ ಒಂದು ಕುಟುಂಬ ಕಣ್ಣೀರು ಸುರಿಸುತ್ತದೆ… ಒಂದು ತಲೆಮಾರು ವ್ಯಸನಿಯಾದರೆ ಇಡೀ …

Read More »

ವಿಜಯಪುರ: ಅರೆಬೆತ್ತಲೆಗೊಳಿಸಿ ಇಬ್ಬರು ಯುವಕರನ್ನ ಹಗ್ಗದಿಂದ ಕಟ್ಟಿ ಹಾಕಿ ಹಿಂಸೆ!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುತ್ತರಗಿ ತಾಂಡದಲ್ಲಿ ಇಬ್ಬರು ಯುವಕರನ್ನು ಅರೆಬೆತ್ತಲೆಗೊಳಿಸಿ ಕೈಕಾಲು ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಂಕರಲಿಂಗ ನಾಯ್ಕ್ ವಿರುದ್ಧ ಈ ಕೃತ್ಯದ ಆರೋಪ ಕೇಳಿಬಂದಿದ್ದು, ಹಣದ ವಿಚಾರಕ್ಕೆ ಇಬ್ಬರು ಯುವಕರಿಗೆ ಚಿತ್ರಹಿಂಸೆ ನೀಡಲಾಗಿದೆ ಎನ್ನಲಾಗಿದೆ. ಇದೇ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪವೂ ಕೇಳಿಬಂದಿದೆ. ಕೈಯಲ್ಲಿ ಪಿಸ್ತೂಲ್ ಹಿಡಿದು …

Read More »

ಅಮಾನವೀಯ ಘಟನೆ; ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ಚೀಲದಲ್ಲಿ ಕಟ್ಟಿ ಬಿಟ್ಟು ಹೋಗಿದ್ದ ನವಜಾತ ಹೆಣ್ಣು ಮಗುವನ್ನು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ರಕ್ಷಿಸಿದ್ದಾರೆ. ಭಾನುವಾರ ರಾತ್ರಿ ಮಗುವಿನ ಅಳುವಿನ ಶಬ್ದ ಕೇಳಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ತಂಡ ಮಗುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದೆ. ವೈದ್ಯರ ಪರೀಕ್ಷೆಯಲ್ಲಿ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಆರೈಕೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ …

Read More »

ಮೊಹರಂ ದಿನವೇ ನಡೆದಿತ್ತು KPCC ಮುಖಂಡನ ಹತ್ಯೆಗೆ ಪ್ಲ್ಯಾನ್: ಪ್ರಮುಖ ಆರೋಪಿ ಅರೆಸ್ಟ್! ಸ್ಪೋಟಕ ಮಾಹಿತಿ ಬಯಲು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಹತ್ಯೆ ಸಂಚು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಪ್ರಮುಖ ಆರೋಪಿ ಹರ್ಷನನ್ನು ಬಂಧಿಸಿದ್ದಾರೆ. ಆತನಿಂದ ಕಂಟ್ರಿಮೇಡ್ ಪಿಸ್ತೂಲ್, ಎಂಟು ಜೀವಂತ ಗುಂಡುಗಳು ಹಾಗೂ ಪೆಪ್ಪರ್ ಸ್ಪ್ರೇ ವಶಪಡಿಸಿಕೊಳ್ಳಲಾಗಿದೆ. ತನಿಖೆಯಲ್ಲಿ ಹರ್ಷ ಚಾಮರಾಜನಗರದ ಕಾಡಿನಲ್ಲಿ ಗನ್ ಬಳಕೆಯ ತರಬೇತಿ ಪಡೆದಿದ್ದ ಹಾಗೂ ಫೈರಿಂಗ್ ಪ್ರಾಕ್ಟೀಸ್ ನಡೆಸಿದ್ದ ಮಾಹಿತಿ ಬೆಳಕಿಗೆ ಬಂದಿದೆ. ಮೊಹರಂ ದಿನ ಅಬ್ಬಾಸ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ಪ್ರಕರಣದಲ್ಲಿ ಹರ್ಷ …

Read More »

ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿಗೆ ಮಚ್ಚಿನಿಂದ ಹಲ್ಲೆ ಮಾಡಿ ಯುವಕ ಪರಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ವಿದ್ಯಾರ್ಥಿನಿಗೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಸ್ಥಳೀಯ ನಿವಾಸಿ ಮೊಹಮ್ಮದ್ ಜವ್ವಾರ್ (28) ಹಲ್ಲೆ ನಡೆಸಿದ ಆರೋಪಿ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ಪರಾರಿಯಾಗಿದ್ದ. ಬಳಿಕ ಆತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಹಲ್ಲೆಯಿಂದ ವಿದ್ಯಾರ್ಥಿನಿಯ ತಲೆ ಮತ್ತು ಕೈಗೆ …

Read More »

ದಾವಣಗೆರೆಯಲ್ಲಿ ಪ್ರೀತಿಸಿ ಮದ್ವೆಯಾದ ಜೋಡಿಯ ಹತ್ಯೆಗೆ ಯತ್ನ : ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ!

ದಾವಣಗೆರೆ ಜಿಲ್ಲೆಯ ಬಸವಪಟ್ಟಣ ಪೊಲೀಸ್ ಠಾಣೆ ಆವರಣದಲ್ಲೇ ಪ್ರೀತಿಸಿ ಮದುವೆಯಾದ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ದಾಳಿಯಲ್ಲಿ ಕಂಚುಗಾರನಹಳ್ಳಿ ನಿವಾಸಿ 22 ವರ್ಷದ ಸಿದ್ದೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದೇಶ್ ಹಾಗೂ ದಾಗಿನಕಟ್ಟಿ ಗ್ರಾಮದ ಲೀಲಾವತಿ ಇತ್ತೀಚೆಗೆ ಪ್ರೀತಿಸಿ ಮದುವೆಯಾಗಿದ್ದರು. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿಗೆ ದೂರು ನೀಡಿದ್ದ ನವಜೋಡಿ, ಪೊಲೀಸರ ಸೂಚನೆಯಂತೆ ಬಸವಪಟ್ಟಣ ಠಾಣೆಗೆ ಬಂದಿದ್ದರು. ಈ ವೇಳೆ …

Read More »

ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ!

ಮಂಗಳೂರು: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ವ್ಯಾಪಾರಿ ಜವ್ವರ್ (28) ಎಂಬಾತ ವಿದ್ಯಾರ್ಥಿನಿಯ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ತೀವ್ರ ರಕ್ತಸ್ರಾವಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ …

Read More »