Breaking News

Breaking News

ಈದ್ಗಾ ಮೈದಾನ ವಿವಾದ ಬಿಗ್ ಟ್ವಿಸ್ಟ್

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನ ವಿವಾದ, ಈಗ ತಾರಕಕ್ಕೇರುತ್ತಿದೆ. ಈ ಸ್ಥಳ ಸಾರ್ವಜನಿಕರಿಗೆ ಸೇರಿದ್ದು, ಹಿಂದೂಗಳಿಗೂ ವಿವಿಧ ಆಚರಣೆಗೆ ಅವಕಾಶ ನೀಡುವಂತೆ ಹಿಂದೂ ಸಂಘಟನೆಗಳು ಕೋರಿಕೊಂಡ ನಂತ್ರ, ಮತ್ತಷ್ಟು ವಿವಾದ ಸ್ಪೋಟಗೊಂಡಿದೆ.ಈ ಬೆನ್ನಲ್ಲೇ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿ ಎಂದಿತ್ತು. ಇದೀಗ ಈದ್ಗಾ ಮೈದಾನ ಬಿಬಿಎಂಪಿ ಆಸ್ತಿಯಲ್ಲ, ವಕ್ಫ್ ಬೋರ್ಡ್ ದು ಎಂಬುದಾಗಿ ಹೇಳಿದೆ. ಈ ಕುರಿತಂತೆ ಮಾತನಾಡಿರುವಂತ ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಅಸದಿ ಅವರು, ಈದ್ಗಾ …

Read More »

ಜೂ. 11 ರವರೆಗೆ ಕರ್ನಾಟಕ, ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಉತ್ತಮ ಮಳೆ …

Read More »

ಕೊರೋನಾದಿಂದ ಗುಣಮುಖರಾದ ಡಾ. ಕೆ .ಸುಧಾಕರ್

ಬೆಂಗಳೂರು: “ನನ್ನ ಕೋವಿಡ್ RT-PCR ವರದಿ ನೆಗೆಟಿವ್ ಬಂದಿದ್ದು, ನಾನು ಇಂದಿನಿಂದ ಮೊದಲಿನಂತೆ ಸಕ್ರಿಯವಾಗಿ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೇನೆ. ನಿಮ್ಮ ಪ್ರೀತಿ, ಹಾರೈಕೆಗಳಿಗೆ ನಾನು ಚಿರಋಣಿ,” ಆರೋಗ್ಯ ಮತ್ತು ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಕಳೆದ ಐದು ದಿನಗಳ ಹಿಂದೆಯಷ್ಟೇ ಅವರಲ್ಲಿ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿತ್ತು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದ ಅವರು, ಇಂದು ನೆಗೆಟಿವ್ ವರದಿ ಬಂದಿರುವ ಬಗ್ಗೆಯೂ …

Read More »

ನಾನಿನ್ನು 10 ವರ್ಷ ರಾಜ್ಯದಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತೇನೆ : ಬಿಎಸ್ವೈ

ವಿಧಾನ ಪರಿಷತ್ ಚುನಾವಣೆ, ರಾಜ್ಯಸಭಾ ಚುನಾವಣೆ ಹೀಗೆ ಎಲ್ಲಾ ಸಂದರ್ಭದಲ್ಲೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಎಂಬ ಮಾತು ಕೇಳಿಬಂದಿತ್ತು. ಅದರಲ್ಲೂ ಬಿ.ವೈ.ವಿಜಯೇಂದ್ರ ಗೆ ವಿಧಾನ ಪರಿಷತ್ ಸ್ಥಾನ ನೀಡದೇ ಇದ್ದಾಗಲೂ ಬಿಎಸ್ವೈ ಕಡೆಗಣನೆ ಆಗ್ತಿದೆ ಎಂದೇ ಅರ್ಥೈಸಲಾಗ್ತಿತ್ತು. ಆದರೆ ಈಗ ಸಂದೇಹಗಳಿಗೆಲ್ಲ ಬಿಎಸ್ವೈ ಉತ್ತರ ನೀಡಿದ್ದು, ನನಗೆ ವಯಸ್ಸಾಗಿದೆ ಎಂಬ ಚಿಂತೆ ಪಕ್ಷದ ಕಾರ್ಯಕರ್ತರಿಗೆ ,ಮುಖಂಡರಿಗೆ ಬೇಡ ನಾನಿನ್ನು 10 ವರ್ಷ ರಾಜ್ಯದಾದ್ಯಂತ …

Read More »

ಛಲವಾದಿ ನಾರಾಯಣ ಸ್ವಾಮಿ ಅವರ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸಂಗ್ರಹಿಸಿದ್ದ ಚಡ್ಡಿಗಳನ್ನು ಹೊತ್ತು ತಮ್ಮ ಮನೆಯತ್ತ ಮೆರವಣಿಗೆಯಲ್ಲಿ ಸಾಗಿದ ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಅವರ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಯಾರ್ಯಾರದೋ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಗುಡುಗಿದ್ದಾರೆ. ಆರ್‌ಎಸ್‌ಎಸ್‌ ಅನ್ನು ‘ಆರ್ಯರ ಆರ್‌ಎಸ್‌ಎಸ್‌’ ಎಂದು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನಿಮ್ಮ ಸಂಘದ …

Read More »

ಹಿರಿಯ ನಾಗರಿಕರ ಕುರಿತು ಆಡಳಿತಾ ಸುಧಾರಣೆ ಇಲಾಖೆ ಮಹತ್ವದ ನಿಯಮ ಹೊರಡಿಕೆ

ಬೆಂಗಳೂರು: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸದೇ ಇದ್ದರೆ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿ ಹಾಗೂ ಆಡಳಿತಾ ಸುಧಾರಣೆ ಇಲಾಖೆ ಎಚ್ಚರಿಕೆ ನೀಡಿದೆ. ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬಂದಾಗ ಆಸನದ ವ್ಯವಸ್ಥೆ ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು …

Read More »

ಕೊರೋನಾ ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ಏರಿಕೆ

ಬೆಂಗಳೂರು: ‘ರಾಜ್ಯದಲ್ಲಿ ಕೊರೋನಾ ಸೋಂಕಿನ ಮತ್ತೊಂದು ಅಲೆಯ ಯಾವುದೇ ಲಕ್ಷಣಗಳೂ ಕಂಡುಬಂದಿಲ್ಲ. ಸೋಂಕು ಕೂಡ ತಟಸ್ಥವಾಗಿದ್ದು, ಪರೀಕ್ಷೆ ಹೆಚ್ಚಳದಿಂದಾಗಿ ಹೊಸ ಪ್ರಕರಣಗಳು ತುಸು ಹೆಚ್ಚಾಗಿವೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಒಂದಿಷ್ಟುಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಆತಂಕಪಡಬೇಕಿಲ್ಲ. ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ವರ್ಕ್ಫ್ರಂ ಹೋಂ ನೀತಿಯಿಂದ ಹೊರಬಂದು ಐಟಿ ಕಂಪನಿಗಳು ಕಚೇರಿ ಕೆಲಸ ಆರಂಭಿಸಿವೆ. ಕಳೆದ ಒಂದು ವಾರದಿಂದ ಕೊರೋನಾ ಹೊಸ ಪ್ರಕರಣಗಳು ಒಂದಿಷ್ಟುಹೆಚ್ಚಳವಾಗಿರುವುದು ಹಾಗೂ ಇದರ ಬೆನ್ನಲ್ಲೇ ಆರೋಗ್ಯ …

Read More »

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ನವದೆಹಲಿ: ಭಾರತದ ಈಶಾನ್ಯ ಭಾಗದಲ್ಲಿ ನೈರುತ್ಯ ಮುಂಗಾರು ವೇಗ ಪಡೆದುಕೊಂಡಿದೆ. ಮುಂದಿನ ಐದು ದಿನಗಳಲ್ಲಿ ಈಶಾನ್ಯ ಭಾರತ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಿಂದ ಈಶಾನ್ಯ ಭಾರತದವರೆಗೆ ಕಡಿಮೆ ಉಷ್ಣವಲಯದ ಮಟ್ಟಗಳಲ್ಲಿ ಬಲವಾದ ನೈಋತ್ಯ ಮಾರುತಗಳ ಪ್ರಭಾವದ ಕಾರಣದಿಂದ, ಮುಂಬರುವ ಕೆಲವು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ …

Read More »

ಯಡಿಯೂರಪ್ಪ ಅಂದ್ರೆ ಬಿಜೆಪಿ, ಬಿಜೆಪಿ ಅಂದ್ರೆ ಯಡಿಯೂರಪ್ಪ : ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಒಳಜಗಳದಿಂದಾಗಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್​ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಎದುರು ಈ ಬಗ್ಗೆ ಪ್ರತಿಕ್ರಿಸಿದ ಹೆಬ್ಬಾಳ್ಕರ್, ‘ಸಿದ್ದರಾಮಯ್ಯ ಮತ್ತು ಶಿವಕುಮಾರ್ ವಿಚಾರ ಬಿಡಿ. ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನ ನಡೆಸಿಕೊಳ್ಳುವ ರೀತಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಹೇಬ್ರು …

Read More »

ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಸೇರ್ಪಡೆಯಾದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಖ್ಯಾತ ನಟ, ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್‌ ಆದ್ಮಿ ಪಾರ್ಟಿ ಅಧಿಕೃತವಾಗಿ ಮಂಗಳವಾರ ಸೇರ್ಪಡೆಯಾದರು. ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಚಂದ್ರುರವರನ್ನು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷಕ್ಕೆ ಬರಮಾಡಿಕೊಂಡರು. ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ ‘ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು …

Read More »