BigTv News
July 4, 2026
Breaking News
ತುಮಕೂರು: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಗೂಳೂರು ಗ್ರಾಮ ಆಡಳಿತಾಧಿಕಾರಿ (VAO) ಭಾವನ (26) ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೂಳೂರು ಬಳಿ ಅಪರಿಚಿತ ವಾಹನವೊಂದು ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ತೀವ್ರ ಗಾಯಗೊಂಡ ಭಾವನ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
Read More »
Shaikh BigTv
July 4, 2026
Breaking News, ಕರ್ನಾಟಕ, ರಾಜಕೀಯ ಸುದ್ದಿ
ಸಚಿವ ಸಂಪುಟ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಮಂತ್ರಿಗಿರಿ ಲಕ್..? 20 ಸ್ಥಾನಗಳಿಗೆ 50+ ಆಕಾಂಕ್ಷಿಗಳು: ಕಾಂಗ್ರೆಸ್‌ನಲ್ಲಿ ಮಂತ್ರಿ ಕುರ್ಚಿಗೆ ಭಾರೀ ಫೈಟ್! D. K. Shivakumar ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಭಾರೀ ಗರಿಗೆದರಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಹೀಗಾಗಿ “ಸಂಪುಟ 2.0” ವಿಸ್ತರಣೆಗೆ ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ…. …
Read More »
BigTv News
July 3, 2026
Breaking News
ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಜೀತ್ ಸಿಂಗ್ ಟಾಂಕ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು ₹6 ಲಕ್ಷ ಮೌಲ್ಯದ 2 ಕೆ.ಜಿ. 900 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಜೂನ್ 14ರಂದು ಮನೆಯ ಹಿಂಬಾಗಿಲನ್ನು ಕಬ್ಬಿಣದ ಆಯುಧದಿಂದ ಮುರಿದು, ಮಲಗುವ ಕೊಠಡಿಯಲ್ಲಿ ಇಟ್ಟಿದ್ದ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿತ್ತು. …
Read More »
BigTv News
July 3, 2026
Breaking News
ಆನೇಕಲ್: ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಆಂಧ್ರಪ್ರದೇಶ ಮೂಲದ 25 ವರ್ಷದ ಡಿಪ್ಲೊಮಾ ವಿದ್ಯಾರ್ಥಿ ವಂಶೀ ಕೃಷ್ಣ ಅವರನ್ನು ದುಷ್ಕರ್ಮಿಗಳು ಬೈಕ್ ಸಮೇತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯೋಗದ ಭರವಸೆಯೊಂದಿಗೆ ಸ್ನೇಹಿತನ ಕರೆಗೆ ಬೆಂಗಳೂರಿಗೆ ಬಂದಿದ್ದ ವಂಶೀ ಕೃಷ್ಣ, ಸ್ನೇಹಿತನ ಮೊಬೈಲ್ ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಮತ್ತೊಬ್ಬ ಸ್ನೇಹಿತನಿಗೆ ಕೊನೆಯ ಬಾರಿ ಕರೆ ಮಾಡಿದ್ದರು. …
Read More »
BigTv News
July 3, 2026
Breaking News
ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಚಲಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ. ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ವೇಳೆ ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು, ಚಾಲಕ ಮತ್ತು ನಿರ್ವಾಹಕರಿದ್ದು, ಚಾಲಕ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದರಿಂದ ಎಲ್ಲರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ …
Read More »
BigTv News
July 3, 2026
Breaking News
ಬೆಂಗಳೂರು: ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಕಾವೇರಿ ಕ್ವಾರಿಯಲ್ಲಿ ಬೃಹತ್ ಕಲ್ಲುಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಾಯಿ ರಾಮ್ ಕ್ರಷರ್ ಮಾಲೀಕ ಪಾಂಡುರಂಗ, ಕ್ವಾರಿ ಇನ್‌ಚಾರ್ಜ್ ಲೋಕೇಶ್ ಹಾಗೂ ಸ್ಥಳೀಯ ಇನ್‌ಚಾರ್ಜ್ ರಾಜು ಎಂದು ಗುರುತಿಸಲಾಗಿದೆ. ಕಾರ್ಮಿಕ ಗೋಪಿಕೃಷ್ಣನ್ ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಪ್ರಕರಣ ದಾಖಲಾಗಿತ್ತು. ಘಟನೆಯಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದು, ಕಾವೇರಿ …
Read More »
BigTv News
July 3, 2026
Breaking News
ಮೈಸೂರು: ಕುವೆಂಪುನಗರದ ಹುಡ್ಕೋ ಬಡಾವಣೆಯಲ್ಲಿ ನಡೆದ ನಿತ್ಯಾನಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಸೇರಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಿತ್ಯಾನಂದ ಮದ್ಯಪಾನ ಮಾಡಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಸುಶೀಲ, ಸಂಬಂಧಿಕರೊಂದಿಗೆ ಸೇರಿ ಕೊಲೆ ಸಂಚು ರೂಪಿಸಿದ್ದು, ಜೂನ್ 29ರ ಮಧ್ಯರಾತ್ರಿ ಕತ್ತು ಹಿಸುಕಿ ಹತ್ಯೆ ಮಾಡಿದ್ದರು. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಲು ಯತ್ನಿಸಿದ್ದರು. ಅಂತ್ಯಸಂಸ್ಕಾರದ ವೇಳೆ ಮೃತನ ಕುತ್ತಿಗೆಯಲ್ಲಿದ್ದ ಗಾಯದ ಗುರುತುಗಳನ್ನು …
Read More »
BigTv News
July 3, 2026
Breaking News
ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ₹23.10 ಲಕ್ಷ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 16 ಮಂದಿ ಭಾಗಿಯಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಜೂನ್ 29ರಂದು ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಾಪಾರಿ ವಿಕಾಸ್ ಧನವಡೆ ಅವರ ಕಾರನ್ನು ಅಡ್ಡಗಟ್ಟಿದ ಆರೋಪಿಗಳು ತಲವಾರು ತೋರಿಸಿ ಬೆದರಿಸಿ, ಕುಟುಂಬದವರನ್ನು ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು 180 ಗ್ರಾಂ ಚಿನ್ನಾಭರಣ, ಕಾರು ಹಾಗೂ …
Read More »
BigTv News
July 3, 2026
Breaking News
ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ ತಂಡ …
Read More »
BigTv News
July 3, 2026
Breaking News
ಹಾವೇರಿ – ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮುಸಲ್ಮಾನ್ ಯುವಕರು ಹಿಂದೂ ವ್ಯಾಪಾರಿಯೊಬ್ಬರಿಗೆ ಅಮಾನುಷವಾಗಿ ಥಳಿಸಿದ್ದಾರೆ. ಅವರ ಎದೆಗೆ ಕಲ್ಲಿನಿಂದ ಜಜ್ಜಿ ಹಾಗೂ ಗುಪ್ತಾಂಗದ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೃತ ವ್ಯಾಪಾರಿಯ ಹೆಸರು ಶಿವಾಜಿರಾವ ಬಾಯರೋಜಿ (ವಯಸ್ಸು ೬೦ ವರ್ಷ) ಆಗಿದೆ. ರಸ್ತೆ ಬದಿಯಲ್ಲಿಶಿವಾಜಿರಾವ್ ಅವರ ಒಂದು ಸಣ್ಣ ಅಂಗಡಿ ಇತ್ತು. ಜುಲೈ ೧ ರ ರಾತ್ರಿ ಅವರ ಮಗ ಭರತ್ ಅಂಗಡಿ ನೋಡಿಕೊಳ್ಳುತ್ತಿದ್ದನು. ಈ ಸಮಯದಲ್ಲಿ …
Read More »