BigTv News
May 10, 2022
Breaking News
ಚಿಕ್ಕಮಗಳೂರು : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸಿ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕು ಎಂಬ ರಾಜಕೀಯ ಹಠ ನನ್ನಲ್ಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 90ರ ಜೀವನದ ಕೊನೆ ಹಂತದಲ್ಲಿ ರಾಜ್ಯದಲ್ಲಿಪ್ರಾದೇಶಿಕ ಪಕ್ಷ ಉಳಿಸಿ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕು ಎಂಬ ರಾಜಕೀಯ ಹಠ ನನ್ನಲ್ಲಿದೆ ಎಂದರು.
Read More »
BigTv News
May 10, 2022
Breaking News, ತುಮಕೂರು
ತುಮಕೂರು: ಕಾರ್ ಮತ್ತು ಟಿಂಪೋ ಟ್ರಾವೆಲ್ (ಟಿ.ಟಿ) ಮಧ್ಯೆ ನಡೆದ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕುಣಿಗಲ್ ತಾಲ್ಲೂಕಿನ ಬೇಗೂರು ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಬೆಂಗಳೂರು ಸಂಜಯನಗರ ನಿವಾಸಿಗಳಾದ ವಿಜಯ್, ರಾಘು, ಸಂತೊಷ ಎಂದು ಗುರುತಿಸಲಾಗಿದೆ. ಐದು ಜನ ಗಾಯಗೊಂಡಿದ್ದಾರೆ. ಎಲ್ಲರು ಬೆಂಗಳೂರಿನಿಂದ ಕಾರ್ ನಲ್ಲಿ ಹಾಸನದ ಕಡೆ ಹೋಗುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರ್, ರಸ್ತೆ ವಿಭಜಕಕ್ಕೆ …
Read More »
BigTv News
May 10, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಪ್ರಿಯಾಂಕ್ ಖರ್ಗೆ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿದೆ. ಹೀಗಿದ್ದರೂ ಅವರು ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಮಾಹಿತಿ ಕೊಡದೆ ಮಾಧ್ಯಮಗಳ ಬಂದು ಮುಂದೆ ಪ್ರಿಯಾಂಕ್ ಖರ್ಗೆ ಬೂಕಾಳಿ ಬಿಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಎಪಿಪಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಅದರ …
Read More »
BigTv News
May 10, 2022
Breaking News, ಬೆಂಗಳೂರು
ಬೆಂಗಳೂರು: ಮಾಜಿ ಸಚಿವ ನಾಗೇಶ್ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಾಗೇಶ್, ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ, ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ನನಗೆ ಬೇಸರವೂ ಇಲ್ಲ ಎಂದು ಹೇಳಿದ್ದಾರೆ.
Read More »
BigTv News
May 10, 2022
Breaking News, ಬೆಂಗಳೂರು, ಹುಬ್ಬಳ್ಳಿ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ, ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆಗಳಿವೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ನೆರೆಯ ರಾಜ್ಯಗಳಂತೆ ಭಾರೀ ಮಳೆಯಾಗದು ಎಂದು ಇಲಾಖೆ ತಿಳಿಸಿದೆ. ಒಂದು ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದು ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಚಂಡಮಾರುತದ ಪರಿಣಾಮ ದಿಂದ …
Read More »
BigTv News
May 9, 2022
Breaking News, ಧಾರವಾಡ
ಧಾರವಾಡ : ಕಾರೊಂದು ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಘಟನೆ ಹುಬ್ಬಳ್ಳಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು , ಎದುರಿಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ ಇದರಿಂದ ಕಾರಿನಲ್ಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
Read More »
admin
May 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ರಾಜ್ಯಾದ್ಯಂತ ಇಂದು ಶ್ರೀರಾಮ್ ಸೇನೆ ಕೈಗೊಂಡಿರುವ ಸುಪ್ರಭಾತ ಅಭಿಯಾನವನ್ನ ಸ್ವಾಗತಿಸುವೆ ಆದರೆ ಒಂದು ಧರ್ಮದ ವಿರುದ್ಧ ಸುಪ್ರಭಾತ ಹಚ್ಚುತ್ತಿರುವುದು ತಪ್ಪು ಎಂದು ಕಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ ಹೇಳಿದರು. ನಗರದಲ್ಲಿ ಇಂದು ಮಾತನಾಡಿದ ಅವರು ದೇವನೊಬ್ಬ ನಾಮ ಹಲವು, ಧರ್ಮ ದಿಂದ ವಿಶ್ವಕ್ಕೆ ಶಾಂತಿ ಸಿಗಲಿ . ಧರ್ಮ ಧರ್ಮಗಳ ನಡುವೆ ಒಡಕನ್ನು ಉಂಟುಮಾಡಬಾರದು ಎಂದರು. ನಾವು ಧರ್ಮ ಆಚರಣೆ ಮಾಡುವಾಗ ದೇವಸ್ಥಾನಗಳಲ್ಲಿ ಹನುಮಾನ್ ಚಾಲಿಸ ಓದುವುದು …
Read More »
admin
May 9, 2022
Breaking News
ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿ ಅಲ್ಲಾಪುರ,ಯರಿನಾರಾಯಣಪುರ,ಕಡಪಟ್ಟಿ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆ, ಭೂದಾಖಲೆಗಳ ಇಲಾಖೆ ಕೇಂದ್ರ ಸರಕಾರದ ಯೋಜನೆ ಅಡಿಯಲ್ಲಿ ಗ್ರಾಮೀಣ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳ ವಿತರಣೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಚಿದಾನಂದ ಕುಸುಗಲ್ ತಹಶೀಲ್ದಾರ್ ಅಶೋಕ ಶಿಗ್ಗಾವಿ,ತಾಪಂ ಅಧಿಕಾರಿ ಡಾ.ಮಹೇಶ ಕುರಿ, ಎಸ್ ವಿ ಕುಲಕರ್ಣಿ, ಪಿ.ಡಿ.ಓ ಎಸ್ …
Read More »
admin
May 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಅವಳಿ ನಗರದ ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯ ರಾಣಿಚನ್ನಮ್ಮನಗರ ಸೇತುವೆ ಹತ್ತಿರ 8 ಕೋಟಿ ರೂ . ವೆಚ್ಚದಲ್ಲಿ ನಿರ್ಮಾಣವಾದ 630 ಮೀಟರ್ ಉದ್ದದ ಮೊದಲ ಹಂತದ ಹಸಿರು ಸಂಚಾರಿ ಪಥವನ್ನು ಲೋಕಾರ್ಪಣೆಗೊಳಿಸಿ , 96 ಕೋಟಿ ರೂ . ವೆಚ್ಚದಲ್ಲಿ ಬಿಡನಾಳವರೆಗೆ ಎರಡನೇ ಹಂತದ ಹಸಿರು ಸಂಚಾರಿ ಪಥ ನಿರ್ಮಾಣ ಕಾಮಗಾರಿಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು …
Read More »
admin
May 9, 2022
Breaking News
ಸೋಮಪುರ ಗ್ರಾಮದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಧಾರವಾಡ ಹಾಗೂ ಸಮಾಜ ಕಲ್ಯಾಣ ಇಲಾಖೆ ಯೋಜನೆ ಅಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಹಾಗೂ ಶಾಲಾ ಕೊಠಡಿಗಳ ಉದ್ಘಾಟನೆ . ಮತ್ತು ಸೋಮಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ 2021-22 ನೇ ಸಾಲಿನ ಶೀರ್ಷಿಕೆ 3054 ರಾಜ್ಯ ಹೆದ್ದಾರಿ ನಿರ್ವಹಣೆ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ಸೂಪಾ ಅಣ್ಣಿಗೇರಿ ರಾಜ್ಯ ಹೆದ್ದಾರಿ 28 ರ ಕಿಮೀ 73 ರಿಂದ 84 . 72 …
Read More »