admin
April 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ವೀರಶೈವ ಸಮಾಜ ಸಂಘಟನಾ ಸಮಿತಿ, ಬ್ರಾಹ್ಮಣ ಸೇವಾ ಸಂಘ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ನವನಗರ, ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ, ಶ್ರೀ ಆದಿ ಗುರು ಶಂಕರಾಚಾರ್ಯರ ಮತ್ತು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಭಾವಚಿತ್ರಗಳ ಭವ್ಯ ಮೆರವಣಿಗೆ ಮೇ. ೨ ರಂದು ಸಂಜೆ ೪ ಗಂಟೆಗೆ ಜರುಗಲಿದೆ ಎಂದು ಸಂಚಾಲಕ ನರೇಂದ್ರ ಕುಲಕರ್ಣಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …
Read More »
admin
April 30, 2022
Breaking News, ಬೆಂಗಳೂರು
ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.
Read More »
Shaikh BigTv
April 30, 2022
Breaking News, ಅಪರಾಧ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ ಹತ್ತಿರ ಸ್ಕ್ರ್ಯಾಪ್ ಕಳ್ಳತನ ಮಾಡುವಾಗ ಸಾರ್ವಜನಿಕರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಎರಡು ದಿನಗಳ ಹಿಂದೆ ನೆಡೆದಿತ್ತು. ಎರಡು ದಿನಗಳ ಹಿಂದೆ ಅಂದ್ರೆ 28-4-2022 ರಂದು ಸ್ಕ್ರ್ಯಾಪ್ ಕಳ್ಳತನ ಮಾಡುವಾಗ ಒಬ್ಬ ಆರೋಪಿ ಸಿಕ್ಕಿಬಿದ್ದಿದ್ದು,ಸಾರ್ವಜನಿಕರೇ ಕಳ್ಳರನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದು,ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ತಬ್ರೀಜ್ ಖಾನ ಮತ್ತು ಇನ್ನುಳಿದ ಮೂವರು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.ಇಬ್ಬರು ವಿರುದ್ಧ …
Read More »
admin
April 30, 2022
Breaking News
ಕಲಘಟಗಿ : ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆಯ ಅವ್ಯವಸ್ಥೆಯಿಂದ ಗ್ರಾಮಸ್ಥರು ಹೈರಾಣಾಗಿದ್ದಾರೆ. ಸುಮಾರು ತಿಂಗಳಿಂದ ಈ ರಸ್ತೆಯ ಸಮಸ್ಯೆ ಇದ್ದರೂ ಸಹ ಜನ ಪ್ರತಿಗಳು ಯಾವುದೇ ತರಹದ ಸುಗಮ ರಸ್ತೆ ಮಾಡುವಲ್ಲಿ ವಿಫಲವಾಗಿದ್ದಾರೆ . ಕೂಡಲೇ ರಸ್ತೆ ನಿರ್ಮಾಣ ಮಾಡಬೇಕಾದರೆ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ .
Read More »
admin
April 30, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : 2020 ರಲ್ಲಿ ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೋಲಿಸರು ಯಶಸ್ವಿಯಾಗಿದ್ದಾರೆ . ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಕ್ರಾಸ್ ಹತ್ತಿರ ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಇರ್ಫಾನ್ ಬೇಪಾರಿ ಮತ್ತು ಆಸಿಫ್ ಬೇಪಾರಿ ಎಂಬುವವರ ಬಂಧನ ಮಾಡಲಾಗಿದೆ . ಇನ್ನೂ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ವಾಹನವನ್ನು ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ . ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸೆಕ್ಟರ್ ಆರ್ . ಬಿ ಗೋಕಾಕ್ …
Read More »
admin
April 30, 2022
Breaking News, ಧಾರವಾಡ
ಧಾರವಾಡ : ಆನ್‌ಲೈನ್‌ನಲ್ಲಿ ಉದ್ಯೋಗ ಹುಡುಕಲು ಹೋಗಿ ಧಾರವಾಡ ಯಾಲಕ್ಕೆ ಶೆಟ್ಟರ ಕಾಲೋನಿ ಮಯೂರ ಪಾರ್ಕ್ ನಿವಾಸಿ ಸುಹಾಸಿನಿ ಶಿಗ್ಗಾವಿ ಅವರಿಗೆ ಅಪರಿಚಿತ ವ್ಯಕ್ತಿ ೮೭,೭೯೧ ರೂ ವಂಚಿಸಿರುವ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ . ಸುಹಾಸಿನಿಯವರು ಉದ್ಯೋಗ ಹುಡಕಲು ಲಿಂಕ್ ಡಿನ್ ಆಯಪ್‌ನಲ್ಲಿ ತನ್ನ ಎಲ್ಲ ಸ್ವವಿವರ ದಾಖಲಿಸಿದ್ದಾರೆ.ನಂತರ ಅಪರಿಚಿತ ವ್ಯಕ್ತಿ ಸಂದೇಶ ಕಳುಹಿಸಿ ಮನಿ ಮೇಕಿಂಗ್ ಲಿಂಕ್ ಕಳುಹಿಸಿದ್ದಾನೆ. ಅದನ್ನು ನಂತರ ಅವರು ಓಪನ್ ಮಾಡಿದ್ದಾರೆ …
Read More »
admin
April 30, 2022
Breaking News, ಬೆಳಗಾವಿ
ಚಿಕ್ಕೋಡಿ/ ಬೆಳಗಾವಿ: ದಲಿತ ಹೋರಾಟಗಾರ ಹಾಗೂ ಬರಹಗಾರ ರವೀಂದ್ರ ಹಾರೋಹಳ್ಳಿ ಅವರನ್ನು ಜಿಲ್ಲೆಯ ಚಿಕ್ಕೋಡಿ ಠಾಣೆಯ ಪೊಲೀಸರು ಮೈಸೂರಿನ ಹಾರೋಹಳ್ಳಿಯಲ್ಲಿ ಶುಕ್ರವಾರ ಬಂಧಿಸಿದ್ದಾರೆ. ‘ಅವರನ್ನು, 2017ರ ಡಿಸೆಂಬರ್‌ನಲ್ಲಿ ವಾಟ್ಸ್‌ಆಯಪ್ ಮತ್ತು ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
Read More »
admin
April 30, 2022
Breaking News
ಬಳ್ಳಾರಿ: ನನ್ನ ಕೊನೆಯ ಉಸಿರು ಇರುವವರೆಗೂ ಮುಸ್ಲಿಂ ಸಮುದಾಯದಕ್ಕೆ ದ್ರೋಹ ಮಾಡಲ್ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಅವರು ನಗರದ ಕೌಲಬಜಾರ್ನ ಎಂ.ಆರ್. ಫಂಕ್ಷನ್ ಹಾಲ್‌ನಲ್ಲಿ ರಂಜಾನ್ ಪ್ರಯುಕ್ತ ಮಾಜಿ ಸಚಿವ ಜನಾರ್ದನರೆಡ್ಡಿ ಆಪ್ತ ಮೆಹಫೂಜ್ ಅಲಿಖಾನ್ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ನಾನೇನಾದರೂ ಮುಸ್ಲಿಂರಿಗೆ ದ್ರೋಹ ಬಗೆದರೆ ರಾಜಕೀಯ ನಿವೃತ್ತಿ ಹೊಂದುವೆ .ನಾನು ನಿಷ್ಠುರವಾದಿ, ಮನಸ್ಸಿನಲ್ಲಿ ಇರುವುದನ್ನು ಹೇಳಿ ಬಿಡುತ್ತೇನೆ, ಮತ್ತೆ ಅದನ್ನು ಮರೆತು …
Read More »
admin
April 30, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಪ್ರತಿ ಗ್ರಾಮಪಂಚಾಯಿತಿ ಗೊಂದು ಸ್ವಾಮಿ ವಿವೇಕಾನಂದ ಹೆಸರಿನ ಸಂಘಗಳನ್ನು ರೂಪಿಸಿ, ಯುವಕರ ಸ್ವಾವಲಂಬನೆ,ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲು ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆ ಯೋಜನೆ ರೂಪಿಸಲಿದೆ. ಈ ಕುರಿತು ಮಾಹಿತಿ ನೀಡಿರುವ ಕ್ರೀಡಾ ಸಚಿವ ನಾರಾಯಣಗೌಡ, ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೊಂದು ಯುವ ಸಂಘಗಳನ್ನು ಸ್ಥಾಪಿಸಿ, ಯುವಕರಿಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಿ,ಯುವಸಮುದಾಯಕ್ಕೆ ನಾಯಕತ್ವದ ಗುಣ, ನಿರುದ್ಯೋಗ ನಿವಾರಣೆಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
Read More »
admin
April 30, 2022
Breaking News, ತುಮಕೂರು
ತುಮಕೂರು: ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರು ಹೃದಯಾಘಾತದಿಂದ ಮಧ್ಯರಾತ್ರಿ 12 ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ಮೂಲದ ನಿವಾಸಿಯಾಗಿರುವ ಶಿವಕುಮಾರ್ ಕಳೆದ ಒಂದೂವರೆ ವರ್ಷದಿಂದ ತುಮಕೂರು ಜಿಲ್ಲೆಯ ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
Read More »