Breaking News

Breaking News

ಲಾರಿಗಳ ಮಧ್ಯೆ ಡಿಕ್ಕಿ : ಇಬ್ಬರು ಸಾವು

ಧಾರವಾಡ : ವಿಆರ್ , ಎಲ್ ಲಾರಿ ಹಾಗೂ ಅಶೋಕ ಲೈಲ್ಯಾಂಡ್ ಲಾರಿಯ ನಡುವೆ ಇಂದು ಬೆಳಗಿನ ಜಾವ ನಡೆದಿರುವ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದು , ಮತ್ತೋರ್ವನ ಸ್ಥಿತಿ ಚಿಂತಾಜನಕವಾದ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ಸಂಭವಿಸಿದೆ . ಧಾರವಾಡದಿಂದ ಸವದತ್ತಿಗೆ ಹೋಗುತ್ತಿದ್ದಲಾರಿಗೆ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದ ಪರಿಣಾಮ , ಇಬ್ಬರು ಚಾಲಕರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ ಎರಡು ಲಾರಿಗಳ ಮುಂದಿನ ಭಾಗ ಸಂಪೂರ್ಣ …

Read More »

ವರುಣನ ಆರ್ಭಟ : ಮೂವರು ಬಲಿ

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರೀ ವರ್ಷಧಾರೆಯಾಗಿದ್ದು, ಮಳೆಯ ಆರ್ಭಟಕ್ಕೆ ಮೂವರು ಮೃತಪಟ್ಟಿದ್ದಾರೆ. ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಕೊಡಗು, ಬೆಳಗಾವಿ, ವಿಜಯಪುರ ಸೇರಿದಂತೆ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

Read More »

‌ಕೈ ಕೊಟ್ಟ ಬೆಳೆ : ರೈತ ಆತ್ಮಹತ್ಯೆ

‌‌‌ರಬಕವಿ ಬನಹಟ್ಟಿ: ತಾಲ್ಲೂಕಿನ ಯರಗಟ್ಟಿ ಗ್ರಾಮದ ರೈತ ಮಹಾದೇವ ಮಾದರ (35) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌‌ಮಹಾದೇವ ₹ 2 ಲಕ್ಷ ಸಾಲ ಮಾಡಿದ್ದು, ಸರಿಯಾದ ರೀತಿಯಲ್ಲಿ ಬೆಳೆ ಬಾರದೆ ಇರುವುದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.‌ಘಟನಾ ಸ್ಥಳಕ್ಕೆ ಸ್ಥಳೀಯ ಸಿಪಿಐ ಜೆ.ಕರುಣೇಶಗೌಡ, ಪಿಎಸ್ಐ ಸುರೇಶ ಮಂಟೂರ, ಹೆಚ್ಚುವರಿ ಪಿಎಸ್‍ಐ ಪುರದಂರ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗೊಂಡಿದೆ.

Read More »

PSI ಹಗರಣ : ಬಿಜೆಪಿ ನಾಯಕಿ ಬಂಧನ

ಕಲಬುರಗಿ: 545 ಪಿಎಸ್ ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಾಗಿದೆ. ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಆಕೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್ ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾ ಮಹಾರಾಷ್ಟ್ರ ಬಿಟ್ಟು ಬೇರೆಲ್ಲು ತೆರಳಿರಲಿಲ್ಲ. ಸದ್ಯ ಸಿಐಡಿ ತಂಡ ಎಲ್ಲಾ ಕಡೆ ಹುಡುಕಾಟ …

Read More »

ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾಗಿ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಆಯ್ಕೆ

ಬಾಗಲಕೋಟೆ: ಬಾದಾಮಿ ತಾಲೂಕಿನ ಶಿವಯೋಗಮಂದಿರ ಸಂಸ್ಥೆಯ ಅಧ್ಯಕ್ಷರಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಆಯ್ಕೆ ಆಗಿದ್ದಾರೆ. 5 ತಿಂಗಳ ಹಿಂದೆ ಸಂಗನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದರು. ಹೀಗಾಗಿ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಠಾಧೀಶರು, ಟ್ರಸ್ಟಿಗಳ ಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ.

Read More »

ರಾಯಚೂರಿನಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ ಕಿಚ್ಚ ಸುದ್ದೀಪ್

ರಾಯಚೂರ : ಜಿಲ್ಲೆಗೆ ನಟ ಕಿಚ್ಚ ಸುದೀಪ್ ಆಗಮಿಸಿ ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ್ದಾರೆ.. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ನಟ, ನನ್ನ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಅಭಿಮಾನಿಗಳ ಪ್ರೀತಿಗೆ ನಾನು ಎಂದಿಗೂ ಶರಣು..ತುಂಬಾ ಜನರು ಸಾಧನೆ ಮಾಡಿದವರು ಇದ್ದಾರೆ. ಅವರಿಗೆ ಗೌರವ ಸಲ್ಲಬೇಕು.. ನಾನು ಇನ್ನೂ ಅಷ್ಟು ದೊಡ್ಡವನಲ್ಲ, ಸಾಧನೆ ಮಾಡಬೇಕಾದದ್ದು ನನಗೆ ತುಂಬಾ ಇದೆ..ಮುಂದಿನ ದಿನಗಳಲ್ಲಿ ಅಂತಹ ದಿನ ಬಂದಾಗ ನನ್ನ ಮೂರ್ತಿ …

Read More »

ಹುಬ್ಬಳ್ಳಿ ಗಲಭೆ : ಬಂಧಿತರಿಗೆ ಜಮೀರ್ ಖಾನ್ ಸಹಾಯ ಹಸ್ತ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಗಳ ಬಡ ಕುಟುಂಬದ ತಾಯಂದಿರಿಗೆ, ಹೆಣ್ಣುಮಕ್ಕಳಿಗೆ ಹಾಗೂ ಪುಟ್ಟ ಮಕ್ಕಳಿಗೆ ಪವಿತ್ರ ರಂಜಾನ್​​ ಹಬ್ಬ ಆಚರಣೆ ಸಹಾಯ ಹಸ್ತ ನೀಡಲು ಶಾಸಕ ಜಮೀರ್ ಖಾನ್ ಮುಂದಾಗಿದ್ದಾರೆ. ಇಂದು ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಸ್ಟೇಷನ್ ಹತ್ತಿರದ ಮಸ್ತಾನ್ ಶಾ ಶಾದಿಮಹಲ್‌ನಲ್ಲಿ ಸಹಾಯ ಹಸ್ತ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷಕ್ಕೊಮ್ಮೆ ಬರುವ ಪವಿತ್ರ ರಂಜಾನ್​ ಹಬ್ಬದ ಸಮಯದಲ್ಲಿ ಹಬ್ಬ ಆಚರಣೆ ಮಾಡಿ ಪವಿತ್ರ …

Read More »

ಅಜಯ್‌ ದೇವಗನ್‌, ಸುದೀಪ ಟ್ವೀಟ್‌ ಸಮರ ರಾಜಕಾರಣದಲ್ಲಿ ತಿರುವು

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಹೌದೇ ಅಲ್ಲವೇ ಎಂಬ ಬಗ್ಗೆ ಕನ್ನಡದ ನಟ ಸುದೀಪ್ ಮತ್ತು ಹಿಂದಿ ನಟ ಅಜಯ್‌ ದೇವಗನ್‌ ಮಧ್ಯೆ ನಡೆದ ಟ್ವೀಟ್‌ ಸಮರ ಈಗ ರಾಜಕೀಕರಣಗೊಂಡಿದೆ. ಈ ವಿಚಾರವಾಗಿ ಬಿಜೆಪಿಯಲ್ಲೂ ಭಿನ್ನ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಕನ್ನಡವೇ ಸಾರ್ವಭೌಮ ಭಾಷೆ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು’ ಎನ್ನುವ ಮುಖೇನ ಸುದೀಪ್‌ ಅವರನ್ನು ಬೆಂಬಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ …

Read More »

ಜೆಡಿಎಸ್ ಜಲಧಾರೆ ಅಭಿಯಾನ; ಮಹಿಳೆಯರಿಂದ ಕುಂಭಮೇಳ

ಹುಬ್ಬಳ್ಳಿ: ಇಡೀ ರಾಜ್ಯಾದ್ಯಂತ ಜೆಡಿಎಸ್ ಪಕ್ಷದಿಂದ ಜಲಧಾರೆ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಈ ಅಂಗವಾಗಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಧಾರವಾಡ ಜಿಲ್ಲಾ ಮಹಿಳಾ ಅಧ್ಯಕ್ಷೆ ಶೋಭಾ ಪಾಲವೈ ಅವರ ನೇತ್ರತ್ವದಲ್ಲಿ ನೂರಾರು ಮಹಿಳೆಯರು ಕುಂಭಮೇಳ ಮೂಲಕ ಜಲಧಾರೆಗೆ ಚಾಲನೆ ನೀಡಿದರು. ನಗರದ ಹಳೇ ಹುಬ್ಬಳ್ಳಿಯಿಂದ ನೂರಾರು ಮಹಿಳೆಯರು ಸೇರಿಕೊಂಡು ರಸ್ತೆಯ ಮೂಲಕ ದುರ್ಗದಬೈಲ್ ದಿಂದ ಮೂರುಸಾವಿರ ಮಠದ ವರೆಗೆ ಪಾದಯಾತ್ರೆ …

Read More »

ಹಿಂದಿ ಹೇರಿಕೆಯ ತಂತ್ರ ಸರಿಯಲ್ಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ: ಸಿನಿಮಾಗೆ ಯಾವುದೇ ಭಾಷೆ ಇಲ್ಲ. ಭಾಷೆ ಇಲ್ಲದ ಭಾವನಾತ್ಮಕ ಚಿತ್ರಣವೇ ಈ ಸಿನಿಮಾ. ಇಲ್ಲಿ ಯಾವುದೇ ರೀತಿಯಲ್ಲಿ ವಿವಾದಾತ್ಮಕ ವಿಷಯಗಳನ್ನು ಹುಟ್ಟು ಹಾಕುವುದು ಸರಿಯಲ್ಲ. ಪ್ರತಿಯೊಂದು ಪ್ರಾಂತ್ಯದಲ್ಲಿಯೂ ಭಾಷೆಗಳು ತಮ್ಮದೇ ಆದ ಮಹತ್ವವನ್ನು ಪಡೆದುಕೊಂಡಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಜಲಧಾರೆ ಅಭಿಯಾನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ವೇಳೆಯಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಭಾಷೆಯನ್ನು ಮತ್ತೊಂದು ಬಾಷೆಯ ಮೇಲೆ ಹೇರಿಕೆ ಮಾಡುವುದು ಸರಿಯಲ್ಲ ಎಂದರು. …

Read More »