admin
April 20, 2022
Breaking News
ರಾಜ್ಯಾದ್ಯಂತ ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಿ , ವಾಸಸ್ಥಳಕ್ಕೆ ಹಿಂತಿರುಗಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗರ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ . ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ , ಸಂಸ್ಥೆಯ ನಗರ , ಹೊರವಲಯ , ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ವಾ.ಕ.ರ.ಸಾ. …
Read More »
admin
April 20, 2022
Breaking News
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕುಂದಗೋಳ , ಕಲಘಟಗಿ , ನವಲಗುಂದ ಮತ್ತು ಹುಬ್ಬಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಏಪ್ರೀಲ್ 26 , 27 , 28 ರಂದು ಸಂದರ್ಶನವನ್ನು ಏರ್ಪಡಿಸಲಾಗಿದೆ . ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಏ . 26 ರಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ , 27 ರಂದು ಹುಬ್ಬಳ್ಳಿಯ …
Read More »
admin
April 20, 2022
Breaking News, ಬೆಂಗಳೂರು
ಬೆಂಗಳೂರು : ಮಂಡ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದಿದ್ದಕ್ಕೆ ಸಿಟ್ಟಾಗಿದ್ದ ಸಿಟ್ಟಾದ ಕುಮಾರಸ್ವಾಮಿ, ಬೆಳಗ್ಗೆ ಸಿದ್ದರಾಮಯ್ಯ ಅಲ್ಲ ಸುಳ್ಳರಾಮಯ್ಯ ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ರು, ಇದೀಗ ಸಿದ್ದರಾಮಯ್ಯ ಸಹ ಸರಣಿ ಟ್ವೀಟ್ ಮಾಡಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ. ಜಾತ್ಯಾತೀತ ಪಕ್ಷ ಎನ್ನುತ್ತೀರಲ್ವಾ, ಹಾಗಾದರೆ ಚುನಾವಣಾ ಪೂರ್ವ ಹಾಗೂ ಚುನಾವಣಾ ಬಳಿಕ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿ, ನಾಡಿನ ಜನತೆ …
Read More »
admin
April 20, 2022
Breaking News
ಚಾಮರಾಜನಗರ : ಆಧಾರ ರಹಿತವಾಗಿ ನನ್ನ ಸರ್ಕಾರವನ್ನು ಅಂದು ಪ್ರಧಾನಿ ನರೇಂದ್ರ ಮೋದಿ 10% ಕಮಿಷನ್ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗ ಈ ಬಿಜೆಪಿ ಸರ್ಕಾರ 40% ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘವೇ ಪ್ರಧಾನಿಗೆ 8 ತಿಂಗಳ ಹಿಂದೆ ಪತ್ರ ಬರೆದಿದೆ, ನಾನು ತಿನ್ನಲ್ಲ, ತಿನ್ನಲೂ ಬಿಡಲ್ಲ ಎನ್ನುವ ನಿಮಗೆ ತಾಕತ್ ಇದ್ದರೇ 40% ಸರ್ಕಾರದ ವಿರುದ್ಧ ತನಿಖೆ ಮಾಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ನವರ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆಪಾದಿಸುತ್ತಿದ್ದಾರೆ. ಅವರದ್ದೇ ಸರ್ಕಾರವಿದ್ದು, ಕ್ರಮಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಲಾಭೂರಾಮ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ನಿರತರನ್ನು ಸಮಾಧಾನಗೊಳಿಸಲು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಯತ್ನಿಸಿದ್ದಾರೆ. ಈಗ ಅವರನ್ನೇ ಆರೋಪಿಯನ್ನಾಗಿಸಲಾಗುತ್ತಿದೆ. ತಪ್ಪು ಮಾಡಿದ್ದರೆ ಬಂಧಿಸಲಿ ಎಂದರು.
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಇಲ್ಲಿಯ ಅಶೋಕ ನಗರದ ಕನ್ನಡ ಭವನದಲ್ಲಿ ನಡೆದ ಆಟಿಟ್ಯೂಡ್ ವುಮೆನ್ಸ್ ಫೌಂಡೇಶನ್ ಹಾಗೂ ಆಟಿಟ್ಯೂಡ್ ಲೇಡಿಸ್ ಕ್ಲಬ್ , ವಿದ್ಯಾನಗರ ವತಿಯಿಂದ ಹಮ್ಮಿಕೊಂಡಿದ್ದ ಕಿಡ್ಸ್ ಮತ್ತು ವುಮೆನ್ ಹಬ್ ಅನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು . ಇದೆ ವೇಳೆಯಲ್ಲಿ ಮಾತನಾಡಿದ ಅವರು ,ಮಹಿಳೆಯರು ಪ್ರಸ್ತುತ ಎಲ್ಲ ರಂಗದಲ್ಲೂ ಪುರುಷರಿಗೆ ಸರಿಸಮಾನವಾಗಿ ಸ್ಪರ್ಧೆ ನೀಡುತ್ತಿರುವುದು ಶ್ಲಾಘನೀಯ ಬಡ ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಹಾಗೂ ಬಡ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ …
Read More »
admin
April 20, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ನಗರದ ವಾರ್ಡ್ ನಂ 59 ವಸಂತನಗರ ಗಾರ್ಡನ್ ನಲ್ಲಿ ಹೇಸ್ಕಾಮ್ ಅಳವಡಿಸುವ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಾವಕಾರ , ವಿರೂಪಾಕ್ಷಿ ರಾಯನಗೌಡ್ರ , ಶ್ವೇತಾ ರಾಯನಗೌಡ್ರ , ಸುನೀಲ ಗುಮಾಸ್ತೆ , ಮತ್ತು ಇತರರು ಉಪಸ್ಥಿತರಿದ್ದರು .
Read More »
admin
April 20, 2022
Breaking News, ಹಾವೇರಿ
ಹಾವೇರಿ: ಬಿಜೆಪಿಯಲ್ಲಿರುವ ಅನೇಕ ಸ್ನೇಹಿತರು ನನ್ನನ್ನು ಕರೆಯುತ್ತಿದ್ದಾರೆ. ಈ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಹಾಗೇನಾದರೂ ಇದ್ದರೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಮುಂಬರುವ ಚುನಾವಣೆಯಲ್ಲಿ ನಾನು ಬಿಜೆಪಿ ಸೇರುವ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಬಾರ್ನಲ್ಲಿ ಕುಳಿತುಕೊಂಡರೆ ಅಥವಾ ಏನಾದರೂ ಕಾನೂನು ಬಾಹಿರ ಕೆಲಸ …
Read More »
admin
April 20, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು.ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
Read More »
admin
April 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಲಭೆ ಪ್ರಕರಣ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಬಂಧಿತ ಎಲ್ಲ ಗಲಭೆಕೊರರು ಕಲಬುರಗಿಗೆ ಶಿಪ್ಟ್ ಮಾಡಲಾಗಿದೆ. ಒಟ್ಟು 103 ಆರೋಪಿಗಳನ್ನ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ಆರೋಪಿಗಳನ್ನ ಪೊಲೀಸರು ಸ್ಥಳಾಂತರಿಸಿದರು. 4 ನೇ ಜೆಎಮ್‌ಎಪ್‌ಸಿ ನ್ಯಾಯಾಲಯ ಅನ್ವಯ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಮತ್ತೆ 14 ಆರೋಪಿಗಳನ್ನ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.
Read More »