Breaking News

Breaking News

ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಏ. 9 ರಂದು ಪರೀಕ್ಷೆ

ಧಾರವಾಡ : ವಿದ್ಯಾಕಾಶಿಯ ಜಿಲ್ಲೆಯ ಜವಾಹರ ನವೋದಯ ವಿದ್ಯಾಲಯದ 22-23 ನೇ ಸಾಲಿನ 9 ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು nvsadmissionclassnine . in / nvs / home w ಡೌನ್‌ಲೋಡ್ ಮಾಡಿಕೊಂಡು ಏಪ್ರಿಲ್ 9 ರಂದು ಬೆಳಿಗ್ಗೆ 9-30 ಗಂಟೆಗೆ ಧಾರವಾಡದ , ಕ್ಯಾರಕೊಪ್ಪ ರಸ್ತೆಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ ಪರೀಕ್ಷೆಗೆ ಹಾಜರಾಗಬಹುದು . ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9164559704 …

Read More »

ಗಾರ್ಡನ್ ಅಭಿವೃದ್ಧಿ ಗೆ ಶಾಸಕ ಜಗದೀಶ್ ಶೆಟ್ಟರ್ ಚಾಲನೆ

ಹುಬ್ಬಳ್ಳಿ : ಗಾರ್ಡನ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು . ನಗರದ ವಾರ್ಡ್ ನಂ .39 ಪಾಟೀಲ ಲೇಓಟ್ ನಲ್ಲಿ ನೆರೆವೇರಿಸಿದರು. ಈ ವೇಳೆಯಲ್ಲಿ ನಾಗೇಶ್ ಕಲಬುರಗಿ , ಈರಣ್ಣ ಸವಡಿ , ಸಿದ್ದು ಮುಗಳಿಶೆಟ್ಟರ್ , ಶ್ರೀಮತಿ ಸೀಮಾ ಮುಗಳಿಶೆಟ್ಟರ್ , ದೊಡ್ಡಯ್ಯ ಹಿರೇಮಠ ಉಪಸ್ಥಿತರಿದ್ದರು .

Read More »

ಸಾಮಾನ್ಯ ಸಭೆ ಕುರಿತು ಕಾಂಗ್ರೆಸ್ ಬಿಜೆಪಿ ಮಧ್ಯೆ ಮಾತಿನ ವಾಗ್ವಾದ

ನವಲಗುಂದ ಪುರಸಭೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಗೆ ಬಿಜೆಪಿ ಸದಸ್ಯರು ಅಡ್ಡಿಪಡಿಸಿ ,ಸಭೆಗೆ ಅಡ್ಡಿ ಪಡಿಸಿದ ಬಿಜೆಪಿ ಸದಸ್ಯರು ಆಡಳಿತ ಪಕ್ಷದ ಸದಸ್ಯರು ಯಾರು ಎಂದು ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು.ನಮ್ಮಬೆಂಬಲದಿಂದ ಚುನಾಯಿತರಾಗಿರುವ ಉಪಾಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಉಪಾಧ್ಯಕ್ಷರು ರಾಜೀನಾಮೆ ನೀಡಿ , ನಂತರ ಅಧಿಕೃತವಾಗಿ ಮತದಾನ ಮಾಡಿ ಅಧ್ಯಕ್ಷ , ಉಪಾಧ್ಯಕ್ಷ ಆಯ್ಕೆ ಮಾಡಿದ ನಂತರ …

Read More »

ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ಸೇವೆಗಳು ಲಭ್ಯ

ಬೆಂಗಳೂರು : ಸಮುದಾಯ ಆರೋಗ್ಯ ಹಾಗೂ ಅದರ ಮೇಲ್ದರ್ಜೆಯ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಸೇವೆಗಳ ಸಿಬ್ಬಂದಿಗಳಾದ ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಗ್ರೂಪ್ ಡಿ ನೌಕರರು ಕರ್ತವ್ಯದಲ್ಲಿ ಹಾಜರಿರತಕ್ಕದ್ದು, ಕರ್ತವ್ಯದ ಪಾಳಿ ಮುಗಿದ ನಂತರ ಮತ್ತೊಬ್ಬ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗುವವರೆಗೆ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಾಗೂ …

Read More »

ವಾಹನ ಸವಾರರಿಗೆ ಬಿಗ್ ಶಾಕ್

ದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್‌ ಗೆ 9.20 ರೂ. ಹೆಚ್ಚಳವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ …

Read More »

ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏ. 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Read More »

ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದ ಭಾಸ್ಕರ್‌ ರಾವ್‌

ಬೆಂಗಳೂರು ; ನಿವೃತ್ತ ಎಡಿಜಿಪಿ ಭಾಸ್ಕರ್‌ ರಾವ್‌ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿ ಸೇರಿದರು. “ಆಮ್‌ ಆದ್ಮಿ ಪಾರ್ಟಿಯಿಂದ ಮಾತ್ರ ಕರ್ನಾಟಕದ ಬದಲಾವಣೆ ಸಾಧ್ಯ” ಎಂದು ಭಾಸ್ಕರ್‌ ರಾವ್‌ ಹೇಳಿದರು. ದೆಹಲಿಯ ಎಎಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಸ್ಕರ್‌ ರಾವ್ ಅರವಿಂದ್ ಕೇಜ್ರಿವಾಲ್, ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.

Read More »

ಮನೆಗೆ ಆಹಾರ ಪದಾರ್ಥಗಳನ್ನು ತಲುಪಿಸುವ ಕಂಪನಿಗಳ ವಿರುದ್ಧ ದೂರು

ನವದೆಹಲಿ: ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ ಮತ್ತು ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಸೋಮವಾರ ಆದೇಶಿಸಿದೆ. ರಾಷ್ಟ್ರೀಯ ರೆಸ್ಟಾರೆಂಟ್‌ ಸಂಘ (ಎನ್‌ಆರ್‌ಎಐ) ಸಲ್ಲಿಸಿದ ದೂರು ಆಧರಿಸಿ ಈ ಆದೇಶ ಹೊರಡಿಸಲಾಗಿದೆ. ಈ ಕಂಪನಿಗಳ ಮಾರುಕಟ್ಟೆ ಶಕ್ತಿಯನ್ನು ತೋರಿಸುತ್ತಿದೆ. ಸಮಾನ ನೆಲೆಯಲ್ಲಿ ಆಗಬೇಕಿರುವ ಸ್ಪರ್ಧೆಯ ಮೇಲೆ ಪರಿಣಾಮ ಉಂಟುಮಾಡುವಷ್ಟು ಇವು ಶಕ್ತಿಶಾಲಿ ಆಗಿರುವುದನ್ನೂ ತೋರಿಸುತ್ತಿದೆ’ ಎಂದು ಸಿಸಿಐ ಹೇಳಿದೆ.

Read More »

ಜಾತಿ , ಬೇಧ ಮರೆತು ಶ್ರೀಗಳ ದರ್ಶನ ಪಡೆದ ಮುಸ್ಲಿಂ ಮುಖಂಡರು

ಹುಬ್ಬಳ್ಳಿ; ಕೇಸರಿ ಶಾಲು, ಹಿಜಾಬ್ ವಿವಾದದಿಂದ ಜನರ ಸೌಹಾರ್ದತೆಗೆ ದಕ್ಕೆ ಉಂಟು ಮಾಡಿದ್ದ ಕೆಲವೊಂದು ಘಟನೆಗಳನ್ನು ಮೆಟ್ಟಿನಿಂತು ಹುಬ್ಬಳ್ಳಿಯು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಹಳೆ ಹುಬ್ಬಳ್ಳಿಯ ಹಿರೇಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಹಿಂದೂ ಮುಸ್ಲಿಂ ಎಂಬುವಂತ ಬೇಧವನ್ನು ಮರೆತು ಉತ್ಸವದಲ್ಲಿ ಪಾಲ್ಗೊಂಡಿರುವುದು ನಿಜಕ್ಕೂ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಇಸ್ಲಾಂ ಧರ್ಮದ ಪವಿತ್ರ ರಂಜಾನ್ ತಿಂಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡ …

Read More »

ಪವಾರ್ ನ ಬೆಟ್ಟಂಗ್ ಪವಾಡ..ರಾಜಾರೋಷವಾಗಿ ನೆಡೆಯುತ್ತಿದೆ ಬೆಟ್ಟಿಂಗ್ ದಂಧೆ- ಕಂಡು ಕಾಣದಂತಿರುವ ಅಧಿಕಾರಿಗಳು…

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಸದ್ದಿಲ್ಲದೆ ನೆಡೆಯುತ್ತಿದ್ದು,ಇದಕ್ಕೆ ಕಡಿವಾಡ ಹಾಕಬೇಕಾದ ಪೋಲಿಸರು ಕೂಡಾ ಬುಕ್ಕಿಗಳು ನೀಡುವ ಏಂಜಲು ಕಾಸಿಗೆ ಕೈಯೊಡ್ಡುತ್ತಿದ್ದಾರೆ. ಹಳೇ ಹುಬ್ಬಳ್ಳಿಯ ವ್ಯಾಪ್ತಿಯ ಸುತ್ತಮುತ್ತಲಿನ ಸ್ಥಳಗಳಲ್ಲಿ ಈ ಬೆಟ್ಟಿಂಗ್ ದಂಧೆ ಜೋರಾಗಿದೆ. ಐಪಿಎಲ್ ಕ್ರಿಕೆಟ್ ಆಟ ಪ್ರಾರಂಭವಾದ ಕೂಡಲೇಬುಕ್ಕಿಗಳು ರಾಜಾರೋಷವಾಗಿ ಬೆಟ್ಟಿಂಗ್ ದಂಧೆ ಶುರು ಮಾಡಿದ್ದಾರೆ. ಪೋಲಿಸರ ಭಯವಿಲ್ಲದೆ ನಿರಾತಂಕವಾಗಿ ಬೆಟ್ಟಿಂಗ್ ನೆಡೆಸುತ್ತಿರುವ ಬುಕ್ಕಿಗಳು ಪೋಲಿಸರಿಗೆ ಮಾಮೂಲಿ ನೀಡಿ ತಮ್ಮ ದಂಧೆ ನೆಡೆಸುತ್ತಿದ್ದಾರೆ. …

Read More »