Breaking News

Breaking News

ಪ್ರಧಾನಿಗೆ ವಿಭಿನ್ನ ಪತ್ರ ಬರೆದ ಹುಬ್ಬಳ್ಳಿ ಅಭಿಮಾನಿ

ಹುಬ್ಬಳ್ಳಿ : ಹೀಗೆ ತನ್ನ ರಕ್ತದಲ್ಲಿ ಪತ್ರ ಬರೆಯುತ್ತಿರುವ ಈ ವ್ಯಕ್ತಿ ವಾಣಿಜ್ಯನಗರಿ ಹುಬ್ಬಳ್ಳಿಯವರು. ಭಗತಸಿಂಗ್ ಯುವಕ ಮಂಡಳದ ಅಧ್ಯಕ್ಷರಾದ ಶ್ರೀಧರ ಸಾಂಗ್ಲಿಕರ್ ಎಂಬುವವರೇ ತಮ್ಮ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಹೌದು.. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹೊಸೂರಿನ ಗಾಳಿ ದುರ್ಗಮ್ಮ ದೇವಿಯ ದೇವಸ್ಥಾನದ ಹತ್ತಿರದಲ್ಲಿ ದೊಡ್ಡ ಪ್ರಮಾಣ ಸ್ವಾತಂತ್ರ್ಯ ಹೋರಾಟಗಾರ ಭಗತಸಿಂಗ್ ಅವರ ಪುತ್ಥಳಿಯನ್ನು ನಿರ್ಮಾಣ ಮಾಡಬೇಕು ಎಂಬುವಂತ ಮಹದಾಸೆಯಿಂದ ಇಂತಹದೊಂದು ಅಭೂತಪೂರ್ವ …

Read More »

ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿ : ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದರು. ಇಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‌ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಪಡಿಸಲಾಗುವುದು …

Read More »

ಗ್ರಾಮಕ್ಕೆ ಆಗಮಿಸಿದ ಸೈನಿಕನಿಗೆ ಅದ್ದೂರಿ ಸ್ವಾಗತ

ಹುಬ್ಬಳ್ಳಿ : ದೇಶ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ರವಿವಾರದಂದು ಆಗಮಿಸಿದ ಸೈನಿಕ ದ್ಯಾಮಣ್ಣ ಇಟ್ಟಣ್ಣವರನ್ನು ಬ್ಯಾಹಟ್ಟಿ ಗ್ರಾಮದ ಜನತೆ ಅದ್ದೂರಿ ಸ್ವಾಗತ ಮಾಡಿಕೊಂಡರು. ಗ್ರಾಮದ ಹೊರವಲಯದಲ್ಲಿರುವ ದೇವಸ್ಥಾನದ ಮುಂಭಾಗದಲ್ಲಿ ಆತನನ್ನು ಬೈಕ್ ರ್ಯಾಲಿ ಮತ್ತು ಕಾಲ್ನಡಿಗೆಯಿಂದ ಜನರು ಸೇರಿದ್ದರು. ನಿರ್ವತ್ತ ಸೈನಿಕನದನು ಅದ್ದೂರಿಯಾಗಿ ಟ್ರ್ಯಾಕ್ಟರ್ ನ ಮೂಲಕ ಮೆರವಣಿಗೆ ಊರೆಲ್ಲ ಮಾಡಿದರು ಟ್ಯಾಕ್ಟರ್ ನ್ನು ಅಲಂಕರಿಸಲಾಗಿತ್ತು ಇನ್ನು ಗ್ರಾಮದ ಮಹಿಳೆಯರು ಆರುತಿ ಮಾಡುವ ಮುಖಾಂತರ ವೀರ ಯೋಧನನ್ನು ಬರಮಾಡಿಕೊಂಡರು …

Read More »

ಹುಬ್ಬಳ್ಳಿಯಲ್ಲಿ ನಾನ್ ವೆಜ್ ಮಾರ್ಕೆಟ್​ನಲ್ಲಿ ಭರ್ಜರಿ ವ್ಯಾಪಾರ

ಹುಬ್ಬಳ್ಳಿ: ಇಂದು ಯುಗಾದಿ ಹೊಸತೊಡಕು ಹಿನ್ನೆಲೆ ಹುಬ್ಬಳ್ಳಿಯಲ್ಲಿ ನಾನ್ ವೆಜ್ ಮಾರ್ಕೆಟ್​ನಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹಳೇಹುಬ್ಬಳ್ಳಿ, ಗಣೇಶ ಪೇಟೆ, ಮ್ಯಾದಾರ ಓಣಿ, ಕಮರಿಪೇಟೆ ಮಟನ್ ಮಾರ್ಕೆಟ್​ನಲ್ಲಿ ಮಟನ್, ಚಿಕನ್ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ನಮ್ಮ ಬಳಿ ಯಾರೂ ಕೂಡ ಹಲಾಲ್, ಜಟ್ಕಾ ಕಟ್ ಬಗ್ಗೆ ಕೇಳಿಲ್ಲ. ಗ್ರಾಹಕರು ಕೇಳಿದರೆ ಅವರಿಗೆ ಬೇಕಾದಂತೆ ಮಾಂಸ ಕೊಡುತ್ತೇವೆ ಅಂತ ನಸರೂಲ್ಲಾ ಖಾನ ಮಟನ್ ಸ್ಟಾಲ್ ಮಾಲೀಕ ಮಾಹಿತಿ ನೀಡಿದರು. ಹಲಾಲ್, ಜಟ್ಕಾ …

Read More »

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಗಳಲ್ಲಿ 1,096 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್​ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ …

Read More »

ಯುಗಾದಿ ದಿನ ಘೋರ ದುರಂತ : 11 ಜನ ಸಾವು

ಚೆನ್ನೈ: ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದ ಘಟನೆ ತಮಿಳುನಾಡಿನ ತಿರುಪತ್ತೂರ್ ಬಳಿಯ ಜವಡುಮಲೈನಲ್ಲಿ ನಡೆದಿದೆ. ಪೊಲೀಸರ ವರದಿ ಪ್ರಕಾರ, ವ್ಯಾನ್‌ನಲ್ಲಿ ಗುಡ್ಡಗಾಡು ಪ್ರದೇಶದಲ್ಲಿದ್ದ ಪುಲಿಯೂರಿನಿಂದ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇವರೆಲ್ಲ ಸೆಂಬರೈ ಪ್ರದೇಶ ಆಂಜನೇಯಾರ್​ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ವ್ಯಾನ್ ಪುದುತ್ನಾಡು ಸಮೀಪ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ 100 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿದೆ. 11 ಮಂದಿ …

Read More »

ಯಂತ್ರಕ್ಕೆ ಸಿಲುಕಿ ಯುವತಿ‌ ಸಾವು

ಬೆಂಗಳೂರು: ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ಸಾವುನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಶಾಜಿಯಾ ಮೃತಪಟ್ಟಿದ್ದಾರೆ.ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಅವಘಡ ನಡೆದಿದೆ. ಮಾಲೀಕನ ಬೇಜವಾಬ್ದಾರಿಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಮಾಲೀಕ ಜೀಶಾಮ್ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಭಾಸ್ಕರ್‌ ರಾವ್ ನಿವೃತ್ತಿ : ಭಾವನಾತ್ಮಕವಾಗಿ ಟ್ವೀಟ್

ಬೆಂಗಳೂರು: ಎಡಿಜಿಪಿ ಭಾಸ್ಕರ್‌ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಐಪಿಎಸ್‌ನಲ್ಲಿ 32 ವರ್ಷಗಳ ಸೇವೆ ಮುಗಿಸಿದ ನಂತರ ಆಫೀಸ್‍ನಿಂದ ಮನೆಗೆ ನನ್ನ ಕೊನೆಯ ಪ್ರವಾಸ. ನನ್ನ ಸಾರ್ವಜನಿಕ ಜೀವನದಲ್ಲಿ ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕರ್ನಾಟಕದ ಜನತೆಗೆ, ನನ್ನ ಎಲ್ಲಾ ಸಹೋದ್ಯೋಗಿಗಳು, ಸ್ನೇಹಿತರು, ಹಿರಿಯರು ಮತ್ತು ಯುವಜನರಿಗೆ ಧನ್ಯವಾದಗಳು. ಪಕ್ಷಾತೀತವಾಗಿ ವಿವಿಧ …

Read More »

ಏ. 6 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಏಪ್ರಿಲ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Read More »