Shaikh BigTv
March 31, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್, ಸ್ಕೂಟರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಹಲಗಿ ಬಾರಿಸುವ ಮೂಲಕ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆಯನ್ನು ನಗರದ ಗೋಪನಕೊಪ್ಪ ವೃತ್ತದಲ್ಲಿಂದು ನಡೆಸಲಾಯಿತು. ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾನಗರ ಬ್ಲಾಕ್ …
Read More »
admin
March 31, 2022
Breaking News, ಕ್ರಿಕೆಟ್, ಕ್ರೀಡೆ
ಬುಧವಾರ ರಾತ್ರಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಸೀಸನ್ ೧೫ ರಲ್ಲಿ ಗೆಲುವಿನ ಖಾತೆ ತೆರೆದಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಫಾಪ್ ಡುಪ್ಲೇಸಿಸ್ ಪಡೆ , ಕೆಕೆಆರ್ ಬ್ಯಾಟ್ಸ್‌ಮನ್ ಗಳನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು.ಆರ್‌ಸಿಬಿ ಬೌಲರ್ ಗಳ ಬೌಲಿಂಗ್ ದಾಳಿಗೆ ತತ್ತರಿಸಿ ಕೆಕೆಆರ್ , 18.5 …
Read More »
admin
March 31, 2022
Breaking News, ಧಾರವಾಡ
ಧಾರವಾಡ : ತಮ್ಮಅತ್ಯದ್ಭುತ ಕೈಚಳಕದಿಂದ ಶಾಸಕ ಅರವಿಂದ ಬೆಲ್ಲದ ಅವರ ಭಾವ ಚಿತ್ರವೊಂದನ್ನು ಪ್ರತಿಭಾವಂತ ಕಲಾವಿದರಾದ ಆನಂದ ಹಿರೇಮಠ ಅವರು ಚಿತ್ರಿಸಿ ಶಾಸಕರಿಗೆ ಉಡುಗೊರೆಯಾಗಿ ನೀಡಿದ್ದಾರೆ . ಅವರ ಪ್ರೀತಿ – ಗೌರವ – ಅಭಿಮಾನಕ್ಕೆ ಋಣಿಯಾಗಿದ್ದು , ಅವರ ಕಲಾ ಪ್ರತಿಭೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಶಾಸಕರು ಹೇಳಿದರು .
Read More »
admin
March 31, 2022
Breaking News
ಕುಂದಗೋಳ : ಶ್ರೀ ರಾಮ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಹಜರತ್ ಅಲಿ ಜೋಡಮನಿ , ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರಾದ ಶ್ರೀಮತಿ ಶಕೀನಾಬಿ ನದಾಫ್ , ನಾಗನಗೌಡ ಸಾತಮಾರ , ಗ್ರಾ . ಪಂ.ಸದಸ್ಯರು ಹಾಗೂ ಊರಿನ ಯುವಕರು ಹಿರಿಯರು …
Read More »
admin
March 31, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಜಿಲ್ಲಾ ಸಶಸ್ತ್ರಮೀಸಲು ಪಡೆಯ ಕವಾಯತು ಮೈದಾನದಲ್ಲಿ ಏ. 2 ರಂದು ಬೆಳಿಗ್ಗೆ 8 ಗಂಟೆಗೆ ಪೊಲೀಸ್ ಧ್ವಜ ದಿನಾಚರಣೆ , ನಿವೃತ್ತರ ಸೇವಾ ಸುಸ್ಮರಣೆ ಹಾಗೂ ಗೌರವ ಸಮರ್ಪಣಾ ಸಮಾರಂಭವನ್ನು ಏರ್ಪಡಿಸಲಾಗಿದೆ . ನಿವೃತ್ತ ಆರಕ್ಷಕ ನಿರೀಕ್ಷಕ ಬಸವರಾಜ ಸಿ . ಕಲ್ಲಮ್ಮನವರ ಅತಿಥಿಗಳಾಗಿ ಆಗಮಿಸುವರು ಎಂದು ಪೊಲೀಸ್ ಅಧೀಕ್ಷಕ ಪಿ . ಕೃಷ್ಣಕಾಂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Read More »
admin
March 31, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 35 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಇದು ಸುಮಾರು ಎರಡು ವರ್ಷಗಳಲ್ಲೇ ಕನಿಷ್ಠ ಸಂಖ್ಯೆಯಾಗಿದೆ. ಇದಕ್ಕೂ ಕಡಿಮೆ ಅಂದರೆ ಕೇವಲ 24 ಹೊಸ ಕೋವಿಡ್-19 ಪ್ರಕರಣಗಳು ಕಳೆದ ವರ್ಷದ ಮೇ 14ರಂದು ದಾಖಲಾಗಿದ್ದವು. ಬುಧವಾರ ರಾಜ್ಯದಲ್ಲಿ ದಾಖಲಾದ 35 ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 25 ಪ್ರಕರಣಗಳು ವರದಿಯಾಗಿವೆ. ಬುಧವಾರ ರಾಜ್ಯದ 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಎಂಟು ಜಿಲ್ಲೆಗಳು ಸಂಪೂರ್ಣ ಕೋವಿಡ್ ಮುಕ್ತ ಜಿಲ್ಲೆಗಳಾಗಿದ್ದು, …
Read More »
admin
March 31, 2022
Breaking News
ಹೆಬ್ರಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗದಿಂದ ಉಡುಪಿಗೆ ಹೋಗುತ್ತಿದ್ದ ಹೆಬ್ರಿ ಸಮೀಪ ಕನ್ಯಾನ ಎಂಬಲ್ಲಿ ಸಂಭವಿಸಿದೆ. ನಿರ್ವಾಹಕ ಪುಟ್ಟಸ್ವಾಮಿ ಹಾಗೂ ಬಸ್‌ನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಬಸ್ ಚಾಲಕ ರಾಘವೇಂದ್ರ ಅವರು ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಬದಿಗೆ ಹೋಗಿದರು.ಪರಿಣಾಮ ಬಸ್‌ನ ಮುಂದಿನ ಭಾಗವು ಸಂಪೂರ್ಣ ಜಖಂಗೊಂಡಿದೆ.ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
March 31, 2022
Breaking News, ಬೆಂಗಳೂರು
ಬೆಂಗಳೂರು: ಇಂದು ಬೆಂಗಳೂರಿಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಇಂದಿನಿಂದ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕಾಗಿ ಹಲವು ಸಭೆಗಳನ್ನು ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read More »
admin
March 31, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಸಂಬಂಧ ಈಶ್ವರಪ್ಪ ಪ್ರಚೋಧನಾಕಾರಿ ಹೇಳಿಕೆ ಸಂಬಂದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಸಚಿವ ಈಶ್ವರಪ್ಪ ತನಿಖೆ ನಡೆಸುವಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಆದೇಶ ನೀಡಿದೆ. ಹರ್ಷ ಹತ್ಯೆ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ರಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ , ಅವರನ್ನು ದಮನ ಮಾಡುತ್ತೇವೆ …
Read More »
admin
March 31, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿ ಬಲಿದಾನ ಮಾಡಿರುವ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ‘ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದು ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿಶ್ವಾಸ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರು, …
Read More »