BigTv News
June 30, 2026
Breaking News
ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಫೋಟದ ಬಳಿಕ ದಟ್ಟ ಹೊಗೆ ಆವರಿಸಿಕೊಂಡು ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಕಿಯಿಂದ ಆಪರೇಷನ್ ಥಿಯೇಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ …
Read More »
BigTv News
June 30, 2026
Breaking News
ಬೆಳಗಾವಿ: ಜಮೀನು ಮಾರಾಟದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನೇ ಸ್ವಂತ ತಮ್ಮನನ್ನು ಕಲ್ಲಿನಿಂದ ಜಜ್ಜಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಜು ರುದ್ರಪ್ಪಗೋಳ (45) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪದಡಿ ಅಣ್ಣ ಸಂಜು ರುದ್ರಪ್ಪಗೋಳ (49) ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ಎಕರೆ ಜಮೀನು ಮಾರಾಟದ ವಿಚಾರವೇ ಕೊಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ಸಂಬಂಧ ತನಿಖೆ …
Read More »
BigTv News
June 30, 2026
Breaking News
ಕುಂಬಳೆ: ನಾರಾಯಣ ಮಂಗಲ ಎಂಬಲ್ಲಿ ಮೊಬೈಲ್ ಕವರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಅಡಗಿಸಿಟ್ಟು ಓಡಾಡುತ್ತಿದ್ದ ಕೊಯಿಪಾಡಿ ನಿವಾಸಿ ಕೆ.ಬಿನೇಶ್ (29) ಎಂಬವನನ್ನು ರವಿವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ತಡ ರಾತ್ರಿ ಸುಮಾರು 1 ಗಂಟೆಗೆ ಕೊಯಿಪ್ಪಾಡಿ ನಾರಾಯಣಮಂಗಲಂ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೋಟಾರ್ ಸೈಕಲ್‌ನಲ್ಲಿ ಕುಳಿತಿದ್ದ ಬಿನೀಶ್ ಕೆ. ಬಳಿ ಕುಂಬಳೆ ಪೊಲೀಸರು ಬಂದಾಗ ಪೊಲೀಸರನ್ನು ಕಂಡು ಬೈಕ್ ನಲ್ಲಿ ಪರಾರಿಯಾಗಲು ಪ್ರಯತ್ನಿಸಿದಾಗ ತಡೆದು ಪರಿಶೀಲನೆ ನಡೆಸಿದಾಗ ಆತನ …
Read More »
BigTv News
June 30, 2026
Breaking News
ಚಾಮರಾಜನಗರ/ಮಂಗಳೂರು/ಹಾವೇರಿ: ರಾಜ್ಯದ ಚಾಮರಾಜನಗರ, ಮಂಗಳೂರು ಹಾಗೂ ಹಾವೇರಿ ನ್ಯಾಯಾಲಯಗಳಿಗೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆದರಿಕೆ ಸಂದೇಶದ ಬಳಿಕ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿ ನ್ಯಾಯಾಲಯಗಳ ಆವರಣದಲ್ಲಿ ತಪಾಸಣೆ ನಡೆಸಿದರು. ಚಾಮರಾಜನಗರ ನ್ಯಾಯಾಲಯಕ್ಕೆ ವಾರದ ಅಂತರದಲ್ಲಿ ಇದು ಮೂರನೇ ಬಾರಿ ಬೆದರಿಕೆ ಇ-ಮೇಲ್ ಬಂದಿದೆ. ಮಂಗಳೂರು ಹಾಗೂ ಹಾವೇರಿ ನ್ಯಾಯಾಲಯಗಳಲ್ಲೂ ಶೋಧ ನಡೆಸಿದ ಬಳಿಕ ಯಾವುದೇ ಸ್ಫೋಟಕ …
Read More »
BigTv News
June 30, 2026
Breaking News
ಬೆಳಗಾವಿ: ವಿವಾಹಿತ ಮಹಿಳೆಯೊಂದಿಗೆ ಯುವಕ ಪರಾರಿಯಾಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗುಂಪೊಂದು ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಯುವಕನ ಮನೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ. ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಪುಡಿಗೈದಿರುವ ಆರೋಪ ಕೇಳಿಬಂದಿದೆ. ದಾಳಿಕೋರರು ಮನೆಯ ಪಕ್ಕದಲ್ಲಿದ್ದ ಕುರಿಗಳನ್ನು ಕದ್ದು ತೆಗೆದುಕೊಂಡು ಹೋಗಿ ಪಾರ್ಟಿ ಮಾಡಿರುವುದಾಗಿ ಸಂತ್ರಸ್ತ ಕುಟುಂಬ ಆರೋಪಿಸಿದೆ. ಯುವಕ ಕಳೆದ ಎರಡು ವರ್ಷಗಳಿಂದ ಮನೆಗೆ ಬಂದಿರಲಿಲ್ಲ ಹಾಗೂ ಈ ಸಂಬಂಧದ ಬಗ್ಗೆ …
Read More »
BigTv News
June 30, 2026
Breaking News
ಬೆಂಗಳೂರು: ನಗರದ ವಿವಿಧೆಡೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರು 17 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ, ₹25.23 ಕೋಟಿ ಮೌಲ್ಯದ ಎಂಡಿಎಂಎ, ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ ಮೂವರು ನೈಜೀರಿಯಾ ಪ್ರಜೆಗಳು ಸೇರಿದ್ದು, ಅವರಿಂದಲೇ ₹23 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗಿದೆ. ಡ್ರಗ್ಸ್‌ಗಳನ್ನು ವಿದ್ಯಾರ್ಥಿಗಳು ಹಾಗೂ ಟೆಕಿಗಳಿಗೆ ಮಾರಾಟ ಮಾಡುತ್ತಿದ್ದರು. ಪ್ರಮುಖ ಡ್ರಗ್ ಪೂರೈಕೆದಾರರ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ …
Read More »
BigTv News
June 29, 2026
Breaking News
ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಗ್ರಾಮದ ಸುಶೀಲಮ್ಮ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಮೈಮೇಲಿದ್ದ ಚಿನ್ನಾಭರಣ ದೋಚಿದ ಆರೋಪದ ಮೇಲೆ ಅದೇ ಗ್ರಾಮದ ಗಿರಿಜಾ (36) ಮತ್ತು ಮಹೇಶ್ (42) ಅವರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸುಶೀಲಮ್ಮ ನೀಡಿದ್ದ ₹20 ಸಾವಿರ ಸಾಲದ ವಿಚಾರವೇ ಕೊಲೆಗೆ ಕಾರಣ ಎನ್ನಲಾಗಿದೆ. ಜೂನ್ 15ರಂದು ಮನೆಯಿಂದ ಹೊರಟಿದ್ದ ಸುಶೀಲಮ್ಮ ನಾಪತ್ತೆಯಾಗಿದ್ದು, ಬಳಿಕ ಜೂನ್ 21ರಂದು ರೈಲ್ವೆ ಹಳಿಯ ಬಳಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ …
Read More »
BigTv News
June 29, 2026
Breaking News
ಬೆಂಗಳೂರು ಅಮೃತಹಳ್ಳಿ ಠಾಣೆಯ ಪಿಎಸ್‌ಐ ಪ್ರವೀಣ್ ವಿರುದ್ಧ ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ನೆಪದಲ್ಲಿ ಬಾಲಕರನ್ನು ಖಾಸಗಿ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಆರೋಪವಿದೆ. ವಿಚಾರಣೆ ವೇಳೆ ಅಸಭ್ಯ ಹಾಗೂ ಅಮಾನವೀಯ ಕೃತ್ಯ ಎಸಗಿರುವುದಲ್ಲದೆ, ಅದರ ವಿಡಿಯೋವನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ …
Read More »
BigTv News
June 29, 2026
Breaking News
ಮೈಸೂರಿನಲ್ಲಿ ವ್ಯಕ್ತಿಯೊಬ್ಬರ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಮೃತ ನಿತ್ಯಾನಂದ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡು ಅನುಮಾನಗೊಂಡ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ ಬಳಿಕ ಸತ್ಯ ಬಹಿರಂಗವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ನಿ ಸುಶೀಲ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಮಕ್ಕಳಿಲ್ಲದಿರುವುದು, ಕೌಟುಂಬಿಕ ಕಲಹ ಹಾಗೂ ಹಣಕಾಸು-ಆಸ್ತಿ ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತು. ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಹಗ್ಗದಿಂದ ಕುತ್ತಿಗೆ ಬಿಗಿದು …
Read More »
BigTv News
June 29, 2026
Breaking News
ರಟ್ಟಿಹಳ್ಳಿ: ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಆಟೋರಿಕ್ಷಾ ಮೇಲೆ ದಾಳಿ ನಡೆಸಿದ ಪೊಲೀಸರು 56 ಕೆ.ಜಿ. ಗೋಮಾಂಸ ಹಾಗೂ 20 ಕೆ.ಜಿ. ಗೋವಿನ ಗೊಬ್ಬನ್ನು ವಶಪಡಿಸಿಕೊಂಡ ಘಟನೆ ಇಲ್ಲಿಯ ಭಗತ್ಸಿಂಗ್ ವೃತ್ತದಲ್ಲಿ ನಡೆದಿದೆ.ಹರಿಹರ ತಾಲೂಕಿನ ಭರಮಪುರಿ ಗಾಂಧಿನಗರದ ನಿವಾಸಿ ಎಸ್. ಮಹ್ಮದ್ಖೈಪ್ ಶಬ್ಬೀರ್ (24) ಹಾಗೂ ಮಾಸೂರ ಗ್ರಾಮದ ಇರ್ಫಾನ್ ಬಾಬುಲಾಲ್ಸಾಬ ಮೇಡ್ಲೇರಿ ಎಂಬುವರು ಆಟೋರಿಕ್ಷಾದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ …
Read More »