admin
March 20, 2022
Breaking News, ಬೆಂಗಳೂರು
ಬೆಂಗಳೂರು: ‘ಅಸನಿ’ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ ‘ಅಸನಿ’ ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.
Read More »
admin
March 20, 2022
Breaking News, ಜಿಲ್ಲೆ, ಹಾಸನ
ಹಾಸನ: ಅರಸೀಕೆರೆ ರಸ್ತೆಯ ದೊಡ್ಡಪುರದ ರೇವತಿ ಕೊಲೆ ಪ್ರಕರಣದಲ್ಲಿ ಆರೋಪಿ ಲತೇಶ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಾರ್ಚ್ 16ರಂದು ಸಂಜೆ ಮನೆ ಬಳಿ ಒಬ್ಬರೇ ಇದ್ದ ರೇವತಿಯನ್ನು ಲತೇಶ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ.ಅದಾದ ಬಳಿಕ ಸ್ಥಳಕ್ಕಾಗಮಿಸಿದ ಶ್ವಾನದಳ ನೇರವಾಗಿ ಲತೇಶನ ಮನೆ ಬಳಿಗೆ ಹೋಗಿ ನಿಂತಿತ್ತು.ಇದರ ಆಧಾರದ ಮೇಲೆ ಆತನನ್ನು ವಶಕ್ಕೆ ಪಡೆದಿದ್ದ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆರೋಕಿಯಪ್ಪ ಹಾಗೂ ತಂಡ, ತೀವ್ರ ವಿಚಾರಣೆಗೆ …
Read More »
admin
March 20, 2022
Breaking News, ಬೆಂಗಳೂರು
ಬೆಂಗಳೂರು: ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಮತ್ತೆ ಅಗ್ರ ಸ್ಥಾನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅಭಿನಂದಿಸಿದ್ದಾರೆ. ದೇಶದ ಸರ್ವತೋಮುಖ ಅಭಿವೃದ್ಧಿ ಮಾತ್ರವಲ್ಲದೆ ಭಾರತವು ವಿಶ್ವಗುರುವಾಗಿ ನಿಲ್ಲಲು ಪ್ರಧಾನಿ ಮೋದಿ ಅವರು ಮಾಡುತ್ತಿರುವ ಕೆಲಸವನ್ನು ಇದು ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದ್ದಾರೆ.
Read More »
admin
March 20, 2022
Breaking News, ಕರ್ನಾಟಕ
ಚನ್ನಪಟ್ಟಣ: ಬಿಜೆಪಿ, ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನತೆಯೇ ತಕ್ಕ ಪಾಠಕಲಿಸಬೇಕು. ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮತಸೆಳೆಯಲು ಮುಂದಾಗಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ತಾಲೂಕಿನ ಕದರಮಂಗಲ ಗ್ರಾಮದ ಕಂಬದ ನರಸಿಂಹಸ್ವಾಮಿ ಬೆಟ್ಟದಲ್ಲಿ ನಡೆದ ಜಾತ್ರಾಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸುದ್ದಿಗಾರರ ಜೊತೆ ಮಾತನಾಡಿ, ಭಗವದ್ಗೀತೆಯನ್ನು ಪಾಠಮಾಡಿದರೆ ಮಕ್ಕಳ ಹೊಟ್ಟೆತುಂಬುತ್ತದೆಯೇ, ಸರ್ಕಾರ ಇಂತಹ ವಿಚಾರಗಳನ್ನು ದೊಡ್ಡದು ಮಾಡುವುದನ್ನು ಬಿಟ್ಟಿ, ತಮ್ಮ ಮುಂದಿರುವ ಟನ್‌ಗಟ್ಟಲೆ …
Read More »
admin
March 20, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ವಿಚಾರವಾಗಿ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ ಮುಸ್ಲಿಂ ಮುಖಂಡರೊಬ್ಬರ ವಿರುದ್ಧ ಇಲ್ಲಿನ ವಿಧಾನಸೌಧ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ‘ವಕೀಲರಾದ ಸುಧಾ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು, ತಮಿಳುನಾಡು ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಧುರೈನಲ್ಲಿ ನಡೆದಿರುವ ಸಮಾವೇಶದ ಭಾಷಣದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. …
Read More »
admin
March 20, 2022
Breaking News, World
ವಾಷಿಂಗ್ಟನ್ : ಚೀನಾ, ದಕ್ಷೀಣ ಕೊರಿಯಾ, ಪೂರ್ವ ಏಷ್ಯಾ, ಯುರೋಪ್, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಒಮಿಕ್ರಾನ್ ಬಿಎ2 ರೂಪಾಂತರಿ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ವಿಶ್ವದಾದ್ಯಂತ ತಿಂಗಳಲ್ಲಿ 4 ಲಕ್ಷ ಜಿನೋಮ್ ಪರೀಕ್ಷೆ ಕೈಗೊಂಡಿದ್ದು, ಇದರಲ್ಲಿ ಶೇ. 99 ರಷ್ಟು ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಶೇ. 99 ರಷ್ಟು ಒಮಿಕ್ರಾನ್ ಪ್ರಕರಣಗಳಲ್ಲಿ ಬಿಎ2 ಪಾಲು ಶೇ. 75 ರಷ್ಟಿದೆ. ಅಮೆರಿದಲ್ಲಿ ಬಿಎ2 ವೈರಸ್ ಆರಂಭವಾಗಿದ್ದು, ಮತ್ತೆ …
Read More »
admin
March 20, 2022
Breaking News, ಯಾದಗಿರಿ
ಯಾದಗಿರಿ: ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಸುರಪುರ ತಾಲ್ಲೂಕಿನ ದೇವತ್ಕಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ ಅನುಕೂಲವಾಗಲಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವರಲ್ಲಿ ನೈತಿಕತೆ ಬೆಳೆಸುವ ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಉಂಟು ಮಾಡಬಾರದು’ …
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು : ಮಾರ್ಚ್ 28 ರಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ.ಸೋನಿಯಾ ಗಾಂಧಿ,ರಾಹುಲ್ ಗಾಂಧಿ, ನಮ್ಮ ವರಿಷ್ಠರು ನನಗೆ ಅವಕಾಶ ಕೊಟ್ಟು,ನೇಮಿಸಿದ್ದಾರೆ.ಖರ್ಗೆ ಸೇರಿ ಎಲ್ಲರೂ ಬೆಂಬಲ ಸೂಚಿಸಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪ್ರಚಾರ ಸಮಿತಿಯನ್ನ ನಾವು ಬಲಪಡಿಸಬೇಕಿದೆ. ರಾಜ್ಯ,ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಬೇಕಿದೆ. 5 ವರ್ಷ ಜಲಸಂಪನ್ಮೂಲ ಸಚಿವನಾಗಿದ್ದೆ. ಗೃಹ ಸಚಿವನಾಗಿಯೂ ನಾನು ಕೆಲಸ ಮಾಡಿದ್ದೇನೆ. ಎಲ್ಲರನ್ನ …
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಲಿದ್ದು, ಮಾರ್ಚ್ 21ರಂದು ಅಸನಿ ಎಂಬ ಈ ವರ್ಷದ ಮೊದಲ ಚಂಡಮಾರುತ ಬೀಸಲಿದೆ. ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಸನಿ ಚಂಡಮಾರುತ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ …
Read More »
admin
March 19, 2022
Breaking News, ಉಡುಪಿ
ಉಡುಪಿ: ದೇಶದಲ್ಲಿ ಎಲ್ಲರೂ ಸ್ವತಂತ್ರರು, ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ.ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ದೇವಸ್ಥಾನ, ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರು ವ್ಯಾಪಾರ ನಡೆಸಲು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಶನಿವಾರ ‘ಭೂ ಸುಧಾರಣಾ ಕಾಯ್ದೆ ಸುವರ್ಣ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಮುಸ್ಲಿಮರ …
Read More »