admin
March 19, 2022
Breaking News, ತುಮಕೂರು
ತುಮಕೂರು: ಪಳವಳ್ಳಿ ಕಟ್ಟಿ ಬಳಿ ತಿರುವಿನಲ್ಲಿ ತೆರಳುವಾಗ ಬಸ್ ಪಲ್ಟಿಯಾಗಿ ಬಿದ್ದಿದ್ದು, 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ 8 ಜನರ ಪೈಕಿ ನಾಲ್ವರು ವಿದ್ಯಾರ್ಥಿಗಳು ನಡೆದಿರುವ ಘಟನೆ ಜಿಲ್ಲೆಯ ಪಾವಗಡದ ಪಳವಳ್ಳಿ ಕಟ್ಟಿಯಲ್ಲಿ ಸಂಭವಿಸಿದೆ. ಎಸ್ ವಿ ಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಇದಾಗಿದ್ದು, ಬಸ್ಸಿನ ಒಳಗೆ, ಮೆಟ್ಟಿಲುಗಳ ಮೇಲೆ ಮಾತ್ರವಲ್ಲ ಬಸ್ಸಿನ ಟಾಪ್ ಮೇಲೂ ಪ್ರಯಾಣಿಕರು ಹತ್ತಿ ಸಾಗಿದ್ದರು. ವೈ.ಎ.ಹೊಸಕೋಟೆ ಮೂಲದ ಕಲ್ಯಾಣ್ (18), …
Read More »
BigTv News
March 19, 2022
Breaking News, ದೆಹಲಿ
ದೆಹಲಿ : ನಟ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರ ದ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತು ಟ್ವೀಟ್ ಮಾಡಿದ್ದು, ಭಾರಿ ಸದ್ದು ಮಾಡುತ್ತೀದೆ.ಪ್ರಕಾಶ್ ರಾಜ್ ಅವರು ಮಾಡಿರುವ ಟ್ವೀಟ್ ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದನಕಾರಿಯಾಗಿ ಮಾಡುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್ ಆಸ್ಕಿಂಗ್ ಎಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್ ಜತೆಗೆ ಕಾಶ್ಮೀರ ಫೈಲ್ಸ್ …
Read More »
admin
March 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕಾಶ್ಮೀರ ಫೈಲ್ಸ್ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಬೇಕು. ಈ ಮೂಲಕ ದೇಶದ ಜನತೆಗೆ ಅವರವರ ಭಾಷೆಯಲ್ಲಿ ಇತಿಹಾಸ ತಿಳಿಯಲಿದೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಅದಕ್ಕೆ ನಾನೊಬ್ಬ ಮಂತ್ರಿಯಾಗಿ ಬದ್ದನಾಗಿದ್ದೇನೆ. ಈಗಾಗಲೇ ಸಿಎಂ ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದರು. ಕಾಂಗ್ರೆಸ್ …
Read More »
admin
March 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಶ್ಮಿರದಲ್ಲಿನ ಪಂಡಿತರ ಮೇಲೆ ಆದ ದೌರ್ಜನ್ಯ, ಮತ್ತು ಶೋಷಣೆಯ ನೈಜ ಆದಾರಿತ ದಿ ಕಾಶ್ಮಿರ ಪೈಲ್ಸ ಚಿತ್ರವು ಜನರಲ್ಲಿ ಕೋಮುಗಲಬೇಗೆ ಕಾರಣವಾಗುತ್ತಿದೆ ಕುಡಲೆ ಈ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ತಹಸಿಲ್ದಾರ ಮೂಕಾಂತರ ರಾಷ್ಟಪತಿಗೆ ಮನವಿ ಸಲ್ಲಿಸುತ್ತೆವೆ ಎಂದು ಹಿಂದೂ ಮುಸ್ಲಿಂ ಗೆಳೆಯರ ಬಳಗದ ಮುಖ್ಯಸ್ಥ ಆಸ್ಪಕ ಕುಟಾಕಾರ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೂ ಮುಸ್ಲಿಂ ಗೆಳೆಯರ ಬಳವನ್ನು ಜನರಲ್ಲಿ ಬಾವೈಕ್ಯತೆ ಮೂಡಿಸು …
Read More »
admin
March 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಜಿಲ್ಲಾ ೧೪ ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.೨೬ ಮತ್ತು ೨೭ ಶನಿವಾರ ಮತ್ತು ರವಿವಾರ, ಧಾರವಾಡದ ಆರ್.ಎನ್ ಶೇಟ್ಟಿ ಕ್ರಿಡಾಂಗಣದ ಹತ್ತಿರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೋಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅದ್ಯಕ್ಷ ಡಾ.ಲಿಂಗರಾಜ ಅಂಗಡಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವು ೨ ದಿನಗಳ ಕಾಲ ನಡೆಯಲ್ಲಿದ್ದು ರಾಷ್ಟ್ರ ಧ್ವಜಾರೋಹಣ ವನ್ನು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಕನ್ನಡ ಧ್ವಜಾರೋಹಣ …
Read More »
admin
March 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸುವುದರಲ್ಲಿ ತಪ್ಪೆನಿಲ್ಲ. ಬಹಳ ಸ್ಪಷ್ಟವಾಗಿ ಹೇಳುತ್ತೇನೆ ಕೆಲ ವಿಚಾರಗಳು ಮಕ್ಕಳಿಗೆ ತಿಳಿಯಬೇಕು. ನೈತಿಕ ಶಿಕ್ಷಣ, ಧರ್ಮ ಕಲಿಯಬೇಕು. ಜಾತಿವಾದ ಮಾಡದೇ ಎಲ್ಲರೂ ಸ್ವಾಗತಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾನು ಇದನ್ನು ಸ್ವಾಗತ ಮಾಡುತ್ತೇನೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ವಾಗತ ಮಾಡಿದರೇ ಅವರಿಗೆ ಸದ್ಬುದ್ಧಿ ಬಂದಿದೆ ಎಂದು ಅದನ್ನೂ ಕೂಡಾ ಸ್ವಾಗತ ಮಾಡುತ್ತೇನೆ ಎಂದು ಅವರು …
Read More »
admin
March 19, 2022
Breaking News
ಚಂಡೀಗಡ: ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದಿರುವ ಎಎಪಿ ಸರ್ಕಾರಕ್ಕೆ ಒಬ್ಬರು ಮಹಿಳೆ ಸೇರಿದಂತೆ ಹತ್ತು ಸಚಿವರು ಶನಿವಾರ ಸೇರ್ಪಡೆ ಆಗಲಿದ್ದಾರೆ. ಸಂಭಾವ್ಯ 10 ಸಚಿವರಲ್ಲಿ ಎಂಟು ಮಂದಿ ಮೊದಲ ಬಾರಿಗೆ ಶಾಸಕರಾದವರು. ಹೊಸ ಸಚಿವರ ಪ್ರಮಾಣವಚನ ಸಮಾರಂಭವು ರಾಜಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.ಮುಖ್ಯಮಂತ್ರಿ ಭಗವಂತ ಮಾನ್ ಅವರು 10 ಸಚಿವರ ಹೆಸರನ್ನು ಶುಕ್ರವಾರ ಸಂಜೆ ಟ್ವೀಟ್‌ನಲ್ಲಿ ಪ್ರಕಟಿಸಿದ್ದಾರೆ.
Read More »
admin
March 19, 2022
Breaking News, ಜಿಲ್ಲೆ, ಹಾಸನ
ಹಾಸನ: ಡಿಸೆಂಬರ್‌ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಇದೆ. ಅದರ ಜೊತೆಗೆ ಕರ್ನಾಟಕದ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಚುನಾವಣೆ ನಡೆದರೆ ಮನೆಯಲ್ಲಿ ಮಲಗಿಕೊಳ್ಳೋದಕ್ಕೆ ಆಗಲ್ಲ. ಸೋಲೋ, ಗೆಲುವೋ ನಾವೂ ಕೂಡ ಹೋರಾಟ ಮಾಡುತ್ತೇವೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಲೋಕಸಭೆ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಬಿಜೆಪಿ ಬಲ ಹೆಚ್ಚಬಹುದು ಅಥವಾ ಕುಗ್ಗಬಹುದು. ರಾಜ್ಯಗಳ ಚುನಾವಣೆಗೂ, …
Read More »
admin
March 19, 2022
Breaking News, ಕರ್ನಾಟಕ
ರಾಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತ ಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಈ ಕುರಿತು ಮಾತನಾಡಿದ ನವೀನ ಗ್ಯಾನಗೌಡರ ತಂದೆ ಶೇಖರಪ್ಪ, ” ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಿ, 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. …
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 106ಕ್ಕೆ ಕುಸಿದಿದೆ. ಐವರು ಮೃತರಾಗಿದ್ದಾರೆ.154 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2013ಕ್ಕೆ ಇಳಿದಿದೆ. 36,326 ಕೋವಿಡ್ ಪರೀಕ್ಷೆ ನಡೆದಿದ್ದು, ಶೇ.0.29ರ ಪಾಸಿಟಿವಿಟಿ ದರ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 84 ಹೊಸ ಪ್ರಕರಣ ಪತ್ತೆಯಾಗಿದೆ.
Read More »