BigTv News
June 29, 2026
Breaking News
ಮೈಸೂರಿನಲ್ಲಿ ವ್ಯಕ್ತಿಯೊಬ್ಬರ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ್ದ ಪ್ರಕರಣ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಮೃತ ನಿತ್ಯಾನಂದ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡು ಅನುಮಾನಗೊಂಡ ಅವರ ಸಹೋದರ ಪೊಲೀಸರಿಗೆ ದೂರು ನೀಡಿದ ಬಳಿಕ ಸತ್ಯ ಬಹಿರಂಗವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ನಿ ಸುಶೀಲ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಮಕ್ಕಳಿಲ್ಲದಿರುವುದು, ಕೌಟುಂಬಿಕ ಕಲಹ ಹಾಗೂ ಹಣಕಾಸು-ಆಸ್ತಿ ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತು. ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಹಗ್ಗದಿಂದ ಕುತ್ತಿಗೆ ಬಿಗಿದು …
Read More »
BigTv News
June 29, 2026
Breaking News
ರಟ್ಟಿಹಳ್ಳಿ: ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಆಟೋರಿಕ್ಷಾ ಮೇಲೆ ದಾಳಿ ನಡೆಸಿದ ಪೊಲೀಸರು 56 ಕೆ.ಜಿ. ಗೋಮಾಂಸ ಹಾಗೂ 20 ಕೆ.ಜಿ. ಗೋವಿನ ಗೊಬ್ಬನ್ನು ವಶಪಡಿಸಿಕೊಂಡ ಘಟನೆ ಇಲ್ಲಿಯ ಭಗತ್ಸಿಂಗ್ ವೃತ್ತದಲ್ಲಿ ನಡೆದಿದೆ.ಹರಿಹರ ತಾಲೂಕಿನ ಭರಮಪುರಿ ಗಾಂಧಿನಗರದ ನಿವಾಸಿ ಎಸ್. ಮಹ್ಮದ್ಖೈಪ್ ಶಬ್ಬೀರ್ (24) ಹಾಗೂ ಮಾಸೂರ ಗ್ರಾಮದ ಇರ್ಫಾನ್ ಬಾಬುಲಾಲ್ಸಾಬ ಮೇಡ್ಲೇರಿ ಎಂಬುವರು ಆಟೋರಿಕ್ಷಾದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ …
Read More »
BigTv News
June 29, 2026
Breaking News
ಸವಣೂರ: ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಹಿಡಿದ ಪೊಲೀಸರು 5 ಗೋವಿಗಳನ್ನು ರಕ್ಷಣೆ ಮಾಡಿರುವ ಘಟನೆ ಪಟ್ಟಣದ ಮಾವೂರ ರಸ್ತೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಿವಪುರ ಬಡಾವಣೆಯ ಮಹ್ಮದ್‌ಅಲಿ ಮುಸ್ತಫಾ ಬೆಳಗಾಂವ (33) ಹಾಗೂ ಮಹಬೂಬಸಾಬ ಬಾಬಾಜಾನಸಾಬ ಬೆಳಗಾಂವ (45) ಎಂಬುವರು ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಶೋಕ ಲೈಲ್ಯಾಂಡ್ ವಾಹನ ವಶಕ್ಕೆ ಪಡೆದು 5 ಆಕಳುಗಳನ್ನು …
Read More »
BigTv News
June 29, 2026
Breaking News, Crime, ತಮಿಳುನಾಡು
ಆಸ್ಪತ್ರೆ ಭಯಕ್ಕೆ ಬಲಿಯಾದ ಜೀವ: ಯೂಟ್ಯೂಬ್ ಹೆರಿಗೆ ಪ್ರಯೋಗ ದುರಂತದಲ್ಲಿ ಮಹಿಳೆ ಸಾವು..! ತಮಿಳುನಾಡಿನ Tamil Nadu ರಾಜ್ಯದ ತಿರುಪುರ್ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳುವ ಭಯದಿಂದ 32 ವರ್ಷದ ಮಹಿಳೆಯೊಬ್ಬರು ಯೂಟ್ಯೂಬ್ ವಿಡಿಯೋಗಳನ್ನು ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ್ದು, ಬಳಿಕ ಉಂಟಾದ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ… ಮೃತ ಮಹಿಳೆಯನ್ನು ಕೆ. ಶಶಿಕಲಾ ಎಂದು ಗುರುತಿಸಲಾಗಿದೆ. ಜೂನ್ 24ರ ಮುಂಜಾನೆ ಹೆರಿಗೆ ನೋವು …
Read More »
BigTv News
June 29, 2026
Breaking News
ಚಾಮರಾಜನಗರ: ಟೈಯರ್ ಸ್ಪೋಟಗೊಂಡು ಸಾರಿಗೆ ಬಸ್ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಬೈಪಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕೊಳ್ಳೇಗಾಲದ ಪುಟ್ಟನಂಜಮ್ಮ(60), ಕುದೇರು ನಿವಾಸಿ ಮಹೇಶ್(50) ಮೃತಪಟ್ಟವರು ಎಂದು ಗುರುತಿಸಲಾಗಿದೆ. 50ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 10ಕ್ಕೂ ಹೆಚ್ಚು ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ …
Read More »
BigTv News
June 29, 2026
Breaking News
ಬೆಳಗಾವಿಯ ಬಸವನ ಗಲ್ಲಿಯ ಸಮರ್ಥ ನಗರ ಅಪಾರ್ಟ್‌ಮೆಂಟ್‌ಗೆ ಹಗಲು ಹೊತ್ತಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿ ಒಣ ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಕೃತ್ಯ ಅಪಾರ್ಟ್‌ಮೆಂಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 25ರಂದು ಮಧ್ಯಾಹ್ನ 2.10ರ ಸುಮಾರಿಗೆ ಎರಡನೇ ಮಹಡಿಗೆ ತೆರಳಿದ ಶಂಕಿತ ವ್ಯಕ್ತಿ ಒಣಗುತ್ತಿದ್ದ ಬಟ್ಟೆಗಳನ್ನು ತೆಗೆಯಲು ಮುಂದಾಗಿದ್ದಾನೆ. ಆದರೆ ಯಾರೋ ಬರುತ್ತಿರುವುದನ್ನು ಗಮನಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ನಿವಾಸಿ ಹಾಗೂ ಸಾಮಾಜಿಕ …
Read More »
BigTv News
June 29, 2026
Breaking News, Crime
ಮಂಗಳೂರಿನ ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಕುಟುಂಬಸ್ಥರಿಗೆ ಬೆದರಿಕೆ ಒಡ್ಡಿದ ದುಷ್ಕರ್ಮಿಗಳು ಸುಮಾರು ₹20 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ. ವ್ಯಾಪಾರಿ ವಿಕಾಸ್ ಅವರು ಮಹಾರಾಷ್ಟ್ರದಿಂದ ಕುಟುಂಬದೊಂದಿಗೆ ಕೇರಳಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಕೆಳಗಿಳಿಸಿ, ಅವರ ಪತ್ನಿ …
Read More »
BigTv News
June 29, 2026
Breaking News
ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಲಗೇಜ್ ಟ್ರಾಲಿ ಬ್ಯಾಗ್‌ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಮೂವರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಸುಮಾರು ₹21 ಕೋಟಿ ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮಾದನಾಯಕನಹಳ್ಳಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ …
Read More »
BigTv News
June 29, 2026
Breaking News
ಬೆಳಗಾವಿ: ನಗರದ ರಾಮದೇವ್ ಹೋಟೆಲ್ ಸಮೀಪ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಎಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ಪ್ರಯಾಣಿಕರು ಕಾರಿನಿಂದ ಇಳಿದು ಸುರಕ್ಷಿತವಾಗಿ ದೂರ ಸರಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ನಿಖರ ಕಾರಣ ತನಿಖೆಯಿಂದ ತಿಳಿಯಬೇಕಿದೆ. ಘಟನೆಯಿಂದ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ಸ್ಥಳಕ್ಕೆ …
Read More »
BigTv News
June 29, 2026
Breaking News
ಬೆಂಗಳೂರು: ಜೆ.ಪಿ.ನಗರದಲ್ಲಿ ದಶಕದ ಹಿಂದಿನ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿಶೀಟರ್ ರಾಜ ಅಲಿಯಾಸ್ ಹಾಫ್ಮುಖ ರಾಜನನ್ನು ಸಾರ್ವಜನಿಕ ರಸ್ತೆಯಲ್ಲೇ ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ಹೊರಬಿದ್ದಿವೆ. ಸಿಸಿಟಿವಿಯಲ್ಲಿ ರಾಜ ಜೀವ ಉಳಿಸಿಕೊಳ್ಳಲು ರಸ್ತೆಯಲ್ಲಿ ಓಡುತ್ತಿರುವುದು, ಆತನನ್ನು ಬೆನ್ನಟ್ಟಿದ ಮೂವರು ದುಷ್ಕರ್ಮಿಗಳು ರಸ್ತೆ ಮಧ್ಯೆಯೇ ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸೆರೆಯಾಗಿವೆ. ಹೋಮ್ ಗಾರ್ಡ್ಸ್ ಸಮ್ಮುಖದಲ್ಲೇ ಕೃತ್ಯ ಎಸಗಿದ ಆರೋಪಿಗಳು ಬಳಿಕ ಹಳದಿ ಬೋರ್ಡ್ …
Read More »