admin
March 19, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬಿರು ಬಿಸಿಲಿನ ನಡುವೆಯೇ ಹುಬ್ಬಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 3.30ರ ಸುಮಾರಿಗೆ, ನಗರದ ವಿವಿಧೆಡೆ ಕೆಲ ಹೊತ್ತು ಮಳೆ ತನ್ನ ಆರ್ಭಟ ತೋರಿಸಿತ್ತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು.ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ಕೆಲವರು ವಿಧಿ ಇಲ್ಲದೆ ನೆನೆಯಬೇಕಾಯಿತು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ ಅಲ್ಲಲ್ಲಿ ಕಂಡುಬಂತು.
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು : ಇಂದಿನಿಂದ ಮಾರ್ಚ್ 21 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಇದೆ.
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ಅ ವರ ಕೊನೆಯ ಚಿತ್ರ ಜೇಮ್ಸ್ ಮೊದಲ ದಿನವೇ ದಾಖಲೆ ಬರೆದಿತ್ತು. ನಿನ್ನೆ ಎರಡನೇ ದಿನವೂ ತನ್ನ ಅಬ್ಬರವನ್ನು ಮುಂದುವರೆಸಿದೆ. ಜೇಮ್ಸ್ ಚಿತ್ರ ಬಿಡುಗಡೆಯಾದ ಮೊದಲ ದಿನ ಅಂದರೆ ಗುರುವಾರ 25 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡಿತ್ತು.ಇನ್ನೂ ಎರಡನೇ ದಿನ ಅಂದರೆ ಶುಕ್ರವಾರದ ಅಂತ್ಯಕ್ಕೆ 20 ಕೋಟಿ ರೂ. ಕಮಾಯಿ ಮಾಡಿದೆ ಎಂದು ಅಂದಾಜಿಸಲಾಗಿದ್ದು, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು : ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ ಎಂದರು.
Read More »
admin
March 19, 2022
Breaking News, ಬೆಂಗಳೂರು
ಬೆಂಗಳೂರು: ದೇಶದ ಮೊದಲ ರಾಜ್ಯ ಕರ್ನಾಟಕ ಕಲಿಕಾ ಹಿನ್ನಡೆ ಸರಿದೂಗಿಸಲು ‘ಕಲಿಕಾ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಜಯನಗರದಲ್ಲಿರುವ ಆರ್.ವಿ. ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಕೋವಿಡ್-19 ಸೋಂಕಿನ ಋಣಾತ್ಮಕ ಪರಿಣಾಮ ಶಿಕ್ಷಣ ಕ್ಷೇತ್ರದ ಮೇಲೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೀರಿದೆ. ತರಗತಿಗಳಿಲ್ಲದೆ ಧೀರ್ಘಾವಧಿಯಲ್ಲಿ ಮಕ್ಕಳ …
Read More »
admin
March 19, 2022
Breaking News
ನ್ಯಾಯಬೆಲೆ ಅಂಗಡಿಗಳಲ್ಲಿ ಇದುವರೆಗೂ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳೇ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತಣೆಯಾಗಲಿದೆ. ಇದುವರೆಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಕೋಟಾದಲ್ಲಿಪ್ರತಿ ಸದಸ್ಯನಿಗೆ 10 ಕೆ.ಜಿ. ಹಾಗೂ ಒಂದು ಪಡಿತರ ಕಾರ್ಡ್‌ಗೆ 2 ಕೆ.ಜಿ. ಗೋಧಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಏಪ್ರಿಲ್ ತಿಂಗಳಿಂದ ಕೊರೊನಾ ಕಾರಣ ಕೇಂದ್ರ ಸರಕಾರ …
Read More »
admin
March 18, 2022
Breaking News, ಬೆಂಗಳೂರು
ಬೆಂಗಳೂರು: ಎಲ್ಲರ ಹೃದಯದಲ್ಲಿ ಅಚ್ಚಳಿಯಾಗಿರುವ ಪವರಸ್ಟಾರ್ ಗೆ ಇದೀಗ ಮತ್ತೊಂದು ಮರಣೋತ್ತರ ಪ್ರಶಸ್ತಿ ದೊರಕಲಿದೆ. ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಅಂತ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. KMF ಹಾಗೂ ಶಿಕ್ಷಣ ಕ್ಷೇತ್ರದ ರಾಯಭಾರಿ ಆಗಿದ್ರು , ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ ಅಂತ …
Read More »
admin
March 18, 2022
Breaking News
ಹಾಸನ: ಸುತ್ತೂರು ಮಠದ ಸ್ವಾಮೀಜಿ ಅವರು ಬರೀ ರೇವಣ್ಣ ಅವರ ಮೇಲೆ ಪ್ರೀತಿ ಇದ್ದರೆ ಸಾಲದು. ಅವರ ಮಗನ ಮೇಲೂ ಒಂದಷ್ಟು ಪ್ರೀತಿ, ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ನಾನೂ ಕೂಡ ಬೆಳೆಯಲು ಒಳ್ಳೆಯದಾಗುತ್ತೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀನಂಜುಂಡೇಶ್ವರ ದೇವಾಲಯ ಉದ್ಘಾಟನೆ ಹಾಗೂ ವಿಗ್ರಹ ಪ್ರತಿಷ್ಠಾಪನೆ ಮತ್ತು ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಜ್ವಲ್ …
Read More »
BigTv News
March 18, 2022
Breaking News, World
ಕೀವ್ : ಉಕ್ರೇನ್ ನಗರಗಳ ಮೇಲೆ ರಷ್ಯಾ ದಾಳಿ ಮುಂದುವರಿದಿದೆ. ನಗರದ ವಸತಿ ಕಟ್ಟಡದ ಮೇಲೆ ರಷ್ಯಾ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಖ್ಯಾತ ನಟಿಯೊಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನಗರದ ವಸತಿ ಕಟ್ಟಡದ ಮೇಲೆ ರಷ್ಯಾ ಸೈನಿಕರು ನಡೆಸಿದ ರಾಕೆಟ್ ಶೆಲ್ ದಾಳಿಯಲ್ಲಿ ಖ್ಯಾತ ನಟಿ ಒಕ್ಸಾನಾ ಶ್ವೆಟ್ಸ್ನ್ನು (67) ಕೊಂದಿದ್ದಾರೆ ಎಂದು ಯಂಗ್ ಥಿಯೇಟರ್ ತಂಡ ಹೇಳಿಕೆ ನೀಡಿದೆ.
Read More »
admin
March 18, 2022
Breaking News, ಬೆಂಗಳೂರು
ಬೆಂಗಳೂರು: ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಸಭಾಪತಿ ಸ್ಥಾನ ಉನ್ನತವಾದುದು. ಸಾಂವಿಧಾನಿಕ ಹುದ್ದೆಗಳಲ್ಲಿರುವವರ ವಿರುದ್ಧ ದೂರು ದಾಖಲಿಸು ವಾಗ ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಅನುಸರಿಸಬೇಕು. ಹೊರಟ್ಟಿ ಅವರ ಪ್ರಕರಣದಲ್ಲಿ ಯಾವುದೂ ಪಾಲನೆಯಾಗದೇ ಲೋಪಗಳಾಗಿದ್ದು, ಮೇಲ್ನೋಟಕ್ಕೆ ದೃಢಪಟ್ಟಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ …
Read More »