Breaking News

Breaking News

ಪವರ್ ಸ್ಟಾರ್ ಗೆ ಶೀಘ್ರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗುವುದು : ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು. ಪುನೀತ್ ಹಾಗೂ ಡಾ.ರಾಜ್ ಕುಮಾರ್ ಅವರಿಗೆ ಗೌರವ ತರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Read More »

ಮಾ. 28 ರಿಂದ SSLC ಪರೀಕ್ಷೆ ಪ್ರಾರಂಭ

ಬೆಂಗಳೂರು: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿವೆ. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಗುಂಪುಗೂಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮೊದಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ, ಕೊಠಡಿ, ಆಸನ ಸಂಖ್ಯೆ ಬಗ್ಗೆ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್‌ಎಂಎಸ್ ಮೂಲಕ …

Read More »

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕಣೆ : ಮನೆಗೆ ಮರಳಿದ ಮಕ್ಕಳು

ವಿಜಯಪುರ (ಬೆಂಗಳೂರು ಗ್ರಾಮಾಂತರ): ಹಿಜಾಬ್ಕುರಿತು ಹೈಕೋರ್ಟ್ ತೀರ್ಪನ್ನು ನೀಡಿದರು ಪ್ರತಿಭಟನೆಗೆ ಮುಕ್ತು ದೊರತ್ತೀಲ್ಲಾ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರಿಗೆ  ಪ್ರವೇಶ ನಿರಾಕರಿಸಲಾಯಿತು. ಸಿಬ್ಬಂದಿಯ ಈ ನಿರ್ಧಾರ ಖಂಡಿಸಿ ವಿದ್ಯಾರ್ಥಿನಿಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು. ಪಿಯು ಪ್ರಥಮ ವರ್ಷದ 16 ವಿದ್ಯಾರ್ಥಿನಿಯರು ಮನೆಗೆ ಮರಳಿ ಹೋದರು.ಸ್ಥಳಕ್ಕೆ ಬಂದ ತಹಶೀಲ್ದಾರ್ ಶಿವರಾಜ್, ‘ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಹಿಜಾಬ್ ತೆರೆದಿಟ್ಟು ತರಗತಿಗೆ ಹೋಗಿ’ …

Read More »

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಖಾಲಿ : ಬೊಮ್ಮಾಯಿ‌

ಬೆಂಗಳೂರು: ರಾಜ್ಯದಲ್ಲಿ ಇರುವ 38 ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ, 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.

Read More »

ಸಾಹಿತಿ ಕಲಬುರ್ಗಿ ಹತ್ಯೆ : ಮತ್ತೇ ಚುರುಕುಗೊಂಡ ತನಿಖೆ

ಧಾರವಾಡ : ಕಲಬುರ್ಗಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ ಹಲವು ದಿನಗಳು ಕಳೆದಿವೆ. ವಿಚಾರಣೆ ನಂತರ ಕಲಬುರ್ಗಿ ಹಂತಕರನ್ನು ಬಂಧಿಸಲಾಗಿತ್ತು. ಸದ್ಯ ಸುದೀರ್ಘ ಅವಧಿಯ ಬಳಿಕ ಈಗ ಆರೋಪಿಗಳ ಪ್ರಮುಖ ವಿಚಾರಣೆ ಧಾರವಾಡ ನ್ಯಾಯಾಲಯ ದಲ್ಲಿ ಆರಂಭಗೊಂಡಿದೆ. ಪ್ರಮುಖ ಆರೋಪಿಗಳಾದ ಗಣೇಶ ಮಿಸ್ಕಿನ್, ಅಮೂಲ್ ಕಾಳೆ, ಅಮಿತ್ ಬದ್ದಿ, ವಾಸುದೇವ ಸೂರ್ಯವಂಶಿ, ಪ್ರವೀಣ ಚತುರ್. ಈ ಆರೋಪಿಗಳನ್ನು ಈ ಹಿಂದೆಯೇ ವಿಚಾರಣೆ ಮಾಡಬೇಕಿತ್ತು. ಆದರೆ ಕೊರೊನಾ ಕಾರಣಕ್ಕೆ ಎರಡು ವರ್ಷ …

Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯ ತೆ

ಬೆಂಗಳೂರು : ಬಿಸಿಲ ತಾಪಕ್ಕೆ ಸುಸ್ತತಾಗಿ ಹೋಗಿದ್ದಾರೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ …

Read More »

ಭೂಮಿ ಸರ್ವೆ ಕುರಿತು ಮಹತ್ವದ ಆದೇಶ ಹೊರೆಡಿಸಿದ ರಾಜ್ಯ ಹೈಕೋರ್ಟ್

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ ಎಂದು ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್ ಅನ್ನೋರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದ್ದು, ‘ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ’ ಎಂದಿದೆ.

Read More »

ಪೊಲೀಸ್​​ ಕಾನ್ಸ್​ಟೇಬಲ್​ ಆತ್ಮಹತ್ಯೆ ಪ್ರಕರಣ : 9 ಜನರ ವಿರುದ್ಧ ಎಫ್​ಐಆರ್​ ದಾಖಲು

ಗದಗ: ಕಿರುಕುಳಕ್ಕೆ ಬೇಸತ್ತು, ಡೇತ್ ನೋಟ್ ಬರೆದಿಟ್ಟುಆತ್ಮಹತ್ಯೆ ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ …

Read More »

ತಮ್ಮ ನ ಚಿತ್ರ ವೀಕ್ಷಿಸಿ ಕಣ್ಣೀರು ಇಟ್ಟ ಹ್ಯಾಟ್ರಿಕ್ ಹಿರೋ

ಮೈಸೂರು: ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್​ ಹುಟ್ಟುಹಬ್ಬದ ಅಂಗವಾಗಿ ಚೇಮ್ಸ್ ಚಿತ್ರ ದೇಶ ವಿದೇಶದಲ್ಲಿ ಬಿಡುಗಡೆಯಾಗಿದೆ. ಅಪ್ಪು ನಟನೆಯ ಕೊನೇ ಚಿತ್ರವಾಗಿರೋ ಜೇಮ್ಸ್ ಇಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿದೆ. ಬಹಳಷ್ಟು ಅಭಿಮಾನಿಗಳು ಚಿತ್ರ ನೋಡ್ತಿದ್ದಂತೆ ಪುನೀತ್​ ರಾಜ್​ಕುಮಾರ್​ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು 2 ದಿನಗಳಿಂದ ಮೈಸೂರಿನ ಶಕ್ತಿಧಾಮದಲ್ಲಿ ಕಾಲಕಳೆಯುತ್ತಿರೋ ಶಿವರಾಜ್​ ಕುಮಾರ್ , ಇವತ್ತು ಮೈಸೂರು ಚಿತ್ರಮಂದಿರದಲ್ಲೇ ಜೇಮ್ಸ್​ ಚಿತ್ರ ನೋಡಿ ಕಣ್ಣೀರಿಟ್ಟಿದ್ದಾರೆ.

Read More »

ಡಿವಿಜಿ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು : ಶಿವಾನಂದ ತಗಡೂರು

ಎಂಖ್ಯಾತ ಸಾಹಿತಿ ಮತ್ತು ದಿಟ್ಟ ಪತ್ರಕರ್ತ ಡಿ.ವಿ. ಗುಂಡಪ್ಪ( ಡಿವಿಜಿ) ಅವರು ವೃತ್ತಿನಿರತ ಪತ್ರಕರ್ತರ ಒಂದು ಘನತೆ ಎಂದು ಕರ್ನಾಟಕ‌ ಕಾರ್ಯ ನಿರತ ಪತ್ರಕರ್ತರ ಸಂಘ ದ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು. ನಗರದ ಕೆಯುಡಬ್ಲ್ಯೂಜೆಯಲ್ಲಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡಿವಿಜಿ ಅವರ ಜನ್ಮದಿನ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿವಿಜಿ ಸಾಹಿತಿಯಾಗಿ ಅಷ್ಟೆ ಅಲ್ಲ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು. ಪತ್ರಿಕಾಧರ್ಮ, ಮೌಲ್ಯಗಳನ್ನು ಗಟ್ಟಿಯಾಗಿ ಪ್ರತಿಪಾದಿಸಿದರು. ಕನ್ನಡ ಪತ್ರಿಕೋದ್ಯಮದಲ್ಲಿನ …

Read More »