admin
March 16, 2022
Breaking News
ಮೇಲುಕೋಟೆ: ‘ತಿರುಪತಿ ತಿರುಮಲ ದೇವಸ್ಥಾನದ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ವೈರಮುಡಿ ಉತ್ಸವದ ಅಂಗವಾಗಿ ಮೇಲುಕೋಟೆಯಲ್ಲಿ ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ‘ಆಂಧ್ರಪ್ರದೇಶದ ಟಿಟಿಡಿ ಮಾದರಿ ಪ್ರಾಧಿಕಾರ ರಚಿಸಿದರೆ ಕ್ಷೇತ್ರದ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಬಹುದು. ಭಕ್ತರ ಅನುಕೂಲಕ್ಕಾಗಿ 50 ಕೊಠಡಿಗಳ ಯಾತ್ರಿನಿವಾಸ್ ನಿರ್ಮಿಸಲು ತಕ್ಷಣ ಕ್ರಮವಹಿಸಲಾಗುವುದು’ ಎಂದರು.
Read More »
admin
March 16, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ. ಈ ಪರಿಕಲ್ಪನೆಯ ಅಂಗವಾಗಿ ದಿ:19/03/2022ರ ಶನಿವಾರ ಬೆಳಗ್ಗೆ 11.00ಕ್ಕೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ …
Read More »
admin
March 16, 2022
Breaking News, ಬೆಂಗಳೂರು
ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ಇನ್ನೂರಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ರಾಜ್ಯಾದ್ಯಂತ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ 3 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿದಂತೆ 14 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ ಶಿವಕುಮಾರ್ ಹೆಚ್ಚುವರಿ ನಿರ್ದೇಶಕ, ಕೈಗಾರಿಕೆ & ವಾಣಿಹಜ್ಯ ಇಲಾಖೆ, ಖನಿಜ ಭವನ, …
Read More »
admin
March 16, 2022
Breaking News, ಚಿತ್ರದುರ್ಗ
ಚಿತ್ರದುರ್ಗ: ರಸ್ತೆಯಲ್ಲಿ ಅಡ್ಡಬಂದ ಹಂದಿಗೆ ಗುದ್ದಿ ಕಾರ್ ಪಲ್ಟಿಯಾಗಿದ್ದು, ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ರವಿಚಂದ್ರ(40), ತಾಯಿ ಎಲ್ಲಮ್ಮ(65) ಮೃತಪಟ್ಟವರು ಎನ್ನಲಾಗಿದೆ. ಇನ್ನು ಈ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »
admin
March 16, 2022
Breaking News, ಬೆಂಗಳೂರು
ಬೆಂಗಳೂರು : ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯ ವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಕರ್ನಾಟಕ ವಿಷನ್ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿಗೆ 1.5 ಟ್ರಿಲಿಯನ್ ಡಾಲರ್ ಗಳ ಕೊಡುಗೆ ಕರ್ನಾಟಕ ನೀಡಲಿದೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು. 2025 …
Read More »
admin
March 16, 2022
Breaking News, ದೆಹಲಿ
ಹೊಸದಿಲ್ಲಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಂದೇಶದ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷ ಮತ್ತು ಸುಳ್ಳು ಹರಡುವ ಮೂಲಕ ಎಷ್ಟು ರಾಜಕೀಯ ಅವಕಾಶಗಳನ್ನು ಪಡೆಯಲು ಬಯಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.
Read More »
admin
March 16, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಾ.16ರಿಂದ ಮಾ.20ರ ವರೆಗೆ `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ವೀಕ್ಷಣೆಗೆ ಹುಬ್ಬಳ್ಳಿಯ ರೂಪಂ ಮತ್ತು ಧಾರವಾಡದ ಶ್ರೀನಿವಾಸ ಚಿತ್ರಮಂದಿರದಲ್ಲಿ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯವಸ್ಥೆ ಮಾಡಿದ್ದಾರೆ. ಬುಧವಾರದಿಂದ ಮಧ್ಯಾಹ್ನ 3 ಹಾಗೂ ಸಂಜೆ 6ರ ಪ್ರದರ್ಶನಗಳಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ ಮೂರುಸಾವಿರ ಮಠದ ಗುರುಸಿದ್ಧ ರಾಜೇಂದ್ರ ಸ್ವಾಮೀಜಿ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.
Read More »
admin
March 16, 2022
Breaking News, ದೆಹಲಿ
ನವದೆಹಲಿ: ‘ಕಾಶ್ಮೀರ್ ಫೈಲ್ಸ್ ’ಸಿನಿಮಾವನ್ನು ನೋಡಿ, ಅದರಲ್ಲಿ ಏನಿದೆ ಎಂಬುದನ್ನು ವೀಕ್ಷಿಸಿ ಸತ್ಯ ಪರೀಕ್ಷಿಸುವ ಬದಲು ಅದರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ವಾಕ್‌ಸ್ವಾತಂತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂದು ಪ್ರತಿಪಾದಿಸುವ ಕೆಲವರು 5-6 ದಿನಗಳಿಂದ ವ್ಯಗ್ರರಾಗಿದ್ದಾರೆ. ಬಹಳ ಕಾಲದಿಂದ ಉದ್ದೇಶ ಪೂರ್ವಕವಾಗಿ ಮುಚ್ಚಿಟ ಸತ್ಯ ಈಗ ಬಹಿರಂಗವಾಗಿರುವುದಕ್ಕೆ ಕೆಲವರಿಗೆ ಅಸಮಾಧಾನ ಇದೆ ಎಂದೂ ಮೋದಿ ಛೇಡಿಸಿದ್ದಾರೆ. …
Read More »
admin
March 16, 2022
Breaking News, ಚಾಮರಾಜನಗರ
ಚಾಮರಾಜನಗರ:ಕೌಟುಂಬಿಕ ಕಲಹಕ್ಕೆ ಬೇಸತ್ತ ಪಿಡಿಓ ಪತ್ನಿ ನೇಣಿಗೆ ಶರಣಾದ ಘಟನೆ ನಡೆದಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ಪಿಡಿಒ ಆನಂದ್ ಕಾಂಬ್ಳೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆನಂದ್ ಕಾಂಬ್ಳೆ ಜತೆ 3 ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ದಿವ್ಯಾಗೆ ಮದುವೆ ಆಗಿತ್ತು. ದಂಪತಿ ಕೊಳ್ಳೇಗಾಲದಲ್ಲಿ ವಾಸವಿದ್ದರು. ದಂಪತಿಗೆ 8 ತಿಂಗಳ ಹೆಣ್ಣು ಮಗು ಇದೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ …
Read More »
admin
March 16, 2022
Breaking News, ಕರ್ನಾಟಕ
ಭಟ್ಕಳ: ಹಿಜಾಬ್ ಧಾರಣೆ ಬಗ್ಗೆ ಪಟ್ಟಣದಲ್ಲಿ ಯಾವುದೇ ಶಾಲೆ ಅಥವಾ ಕಾಲೇಜಿನಲ್ಲಿ, ಅಹಿತಕರ ಘಟನೆ ನಡೆದಿಲ್ಲ.ಆದರೂ ಹಿಜಾಬ್ ಮುಸ್ಲಿಮರ ಮೂಲಭೂತ ಹಕ್ಕು. ಅದಕ್ಕೆ ಅವಕಾಶ ನೀಡುವಂತೆ ತಂಝೀಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ಮನವಿ ಸಲ್ಲಿಸಿದ್ದವು. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧಾರಣೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದ ಬಳಿಕ ಪಟ್ಟಣದಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚಿದರು. ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಮುಸ್ಲಿಮರು ಮಧ್ಯಾಹ್ನ …
Read More »