admin
March 15, 2022
Breaking News, ಗದಗ, ಜಿಲ್ಲೆ
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ …
Read More »
admin
March 15, 2022
Breaking News, ಕರ್ನಾಟಕ
ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ ಎಂದು …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ವಿವಾದ ಸದನದಲ್ಲಿ ಮತ್ತೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿದ ಪರಿಣಾಮ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಕುರಿತು ಪ್ರಾಥಮಿಕ ವಿಚಾರ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಜಮೀರ್ ಅಹಮದ್ ಖಾನ್, ಇಷ್ಟು ದಿನ ಕುಮಾರಸ್ವಾಮಿ ಏಕೆ ಸುಮ್ಮನಿದ್ದರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು : ಚುನಾವಣೆಯ ಅಧಿಕಾರಯ ಆಳ್ವಿಕೆ ಯ ಅವಧಿ ಮುಗಿದ ನಂತರ ಆಸ್ತಿ ದುಪ್ಪಟ್ಟು ಆದರೂ ಯಾವುದೇ ತನಿಖೆ ನಡೆಯುತ್ತೀಲ್ಲಾ. ಚುನಾವಣೆ ಮೊದಲು ಕೇಂದ್ರ ಚುನಾವಣಾ ಆಯೋಗದ ನಿಯಮದಂತೆ ಚುನಾವಣೆಗೆ ಸ್ಪರ್ಧಿಸುವವರು ತಮ್ಮ ಆಸ್ತಿಯ ವಿವರ ಘೋಷಿಸಿ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು. ಆದರೆ ಪ್ರಮಾಣಪತ್ರ ನೀಡಿದ ಜನಪ್ರತಿನಿಧಿಗಳ ಆಸ್ತಿಯು ತಮ್ಮ ಅವಧಿ ಮುಗಿಯುವ ವೇಳೆಗೆ 10 ರಿಂದ 20 ಪಟ್ಟು ಹೆಚ್ಚಾಗುತ್ತಿದ್ದರೂ ತನಿಖೆಯಾಗುತ್ತಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಎಲ್ಲಾ ಆಸ್ತಿಯ …
Read More »
admin
March 15, 2022
Breaking News
ಅಂತರಾಷ್ಟ್ರೀಯ ಪ್ರತಿಭೆ ಸಂದೀಪ್ ಅವರನ್ನು ದಷ್ಟರು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಒಂದು ದಶಕಕ್ಕೂ ಹೆಚ್ಚು ಕಾಲ ಕಬಡ್ಡಿ ಜಗತ್ತನ್ನ ಆಳಿದರು ಮತ್ತು ಪಂಜಾಬ್ ಹೊರತುಪಡಿಸಿ ಕೆನಡಾ, ಯುಎಸ್‌ಎ, ಯುಕೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಭಾರತೀಯ ಕಬ್ಬಡಿ ಸ್ಪರ್ಧಿಯಾಗಿದ್ದ ಸಂದೀಪ್, ಇತ್ತೀಚಿನ ದಿನಗಳಲ್ಲಿ ತಮ್ಮ ವಿಜಯಗಳ ಕಾರಣದಿಂದಾಗಿ ಖ್ಯಾತಿಯನ್ನ ಗಳಿಸಿದರು. ಕೆಳಭಾಗದಲ್ಲಿಅವರ ಅಥ್ಲೆಟಿಕ್ ಪ್ರತಿಭೆ ಮತ್ತು ಪರಿಣತಿಯ ಕಾರಣದಿಂದಾಗಿ ಅವರನ್ನ ಕೆಲವೊಮ್ಮೆ ಡೈಮಂಡ್ ಸ್ಪರ್ಧಿ ಎಂದು ಕರೆಯಲಾಗುತ್ತಿತ್ತು ಆದರೆ ಈ …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾರಣ ಹೈಕೋರ್ಟ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.
Read More »
admin
March 14, 2022
Breaking News, ಧಾರವಾಡ
ಧಾರವಾಡ: ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಬೆಳಿಗ್ಗೆ ಎರಡು ವಾಹನಗಳ ಮಧ್ಯೆ ರಸ್ತೆ ಅಪಘಾತ ಸಂಭವಿಸಿ ಹರಿಯಾಣ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರು ಹಾಗೂ ಖಾಸಗಿ ಬಸ್‌ಗಳ ಮಧ್ಯೆ ಈ ಅಪಘಾತ ಸಂಬಂಧಿಸಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಅಸುನಿಗಿದ್ದಾನೆ. ಅಪಘಾತವಾದ ಕೂಡಲೇ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣ ಗರಗ ಠಾಣೆ ಪಿಎಸ್‌ಐ ಕಿರಣ ಮೋಹಿತೆ, ಇನ್‌ಸ್ಪೆಕ್ಟರ್ ಎಸ್.ಸಿ.ಪಾಟೀಲ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »
admin
March 14, 2022
Breaking News, ಜಿಲ್ಲೆ, ಮೈಸೂರು
ಮೈಸೂರು: ಕೆಆರ್ ನಗರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ಸಾ.ರಾ.ಮಹೇಶ್ ವ್ಯಂಗ್ಯಮಾಡಿದರು. ಮಾತನಾಡಿದ ಅವರು, ಹೆಚ್ಚು ಸಾಲ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತ ರತ್ನ ನೀಡಬೇಕು ಎಂದರು. ಹಲವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಯಾರು ಮಾಡದಷ್ಟು ಸಾಲವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಆದರೂ ಜೆಡಿಎಸ್ ಬಗ್ಗೆ ಅವರು ಮಾತನಾಡುತ್ತಾರೆಂದರು. ಇನ್ನು ಮುಂದೆಯಾದರೂ ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
Read More »
admin
March 14, 2022
Breaking News, ದೆಹಲಿ
ನವದೆಹಲಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಉಕ್ರೇನ್‍ನಲ್ಲಿ ಕಳೆದ ಮಾರ್ಚ್ 1ರಂದು ರಷ್ಯಾ ದಾಳಿಗೆ ಬಲಿಯಾಗಿದ್ದಾರೆ. ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.
Read More »
admin
March 14, 2022
Breaking News, ಬೆಂಗಳೂರು
ಬೆಂಗಳೂರು : ಹಿಜಾಬ್ ಧರಿಸಲು ಕುರಿತು ನಾಳೆ (ಮಾ.15, ಮಂಗಳವಾರ) ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ. ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದೆ.ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ …
Read More »