admin
March 15, 2022
Breaking News, ಬೆಂಗಳೂರು
ಬೆಂಗಳೂರು : ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕೋರ್ಟ್ ತೀರ್ಪನ್ನು ಸ್ವಾಗತ ಮಾಡಿದ್ದಾರೆ. ತೀರ್ಪಿನ ಬಗ್ಗೆ ವ್ಯಾಖ್ಯಾನ ಮಾಡಲ್ಲ. ಹೈಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಬೇಕ ಎಂದಿದ್ದಾರೆ.
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ಕುರಿತ ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ಅರ್ಜಿದಾರರ ಪರ ವಕೀಲ ಶತಭಿಷ ಶಿವಣ್ಣ ತಿಳಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಿಜಾಬ್ ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಳಿಸಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Read More »
admin
March 15, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಹಿಜಾಬ್ ಕುರಿತಂತೆ ಹೈಕೋರ್ಟ್ ತೀರ್ಪಿಗೆ ನಮ್ಮ ವಿರೋಧವಿದೆ ನಾವು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅಶ್ಪಾಕ್ ಕುಮಟಾಕರ ಹೇಳಿದರು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರುಹೈಕೋರ್ಟ್ ತೀರ್ಪು ಅದನ್ನು ನಾವು ಒಪ್ಪೋದಿಲ್ಲ ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ನಾವು ಸುಪ್ರೀಂಕೋರ್ಟ್ ಗೆ ಹೋಗಿ ಅರ್ಜಿಯನ್ನು ತಿಳಿಸುತ್ತೇವೆ ಸುಪ್ರೀಂಕೋರ್ಟ್ ಆದೇಶ ಬರುವವರೆಗೂ ನಾವು ಕಾದು ನೋಡುತ್ತೇವೆ ನಾವು ಕಾಲೇಜಿಗೆ ಶಾಲೆಗೆ ಹೋಗುವುದಿಲ್ಲ ಹಿಜಾಬ್ ಧರಿಸಿ ಕಾಲೇಜು ಶಾಲೆಗೆ ಹೋಗುತ್ತೇವೆ ಎಂದರು.
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಲಾಗಿದೆ. ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ …
Read More »
admin
March 15, 2022
Breaking News, ದಾವಣಗೆರೆ
ದಾವಣಗೆರೆ : ನಗರದಲ್ಲಿ ನಗರ ದೇವತೆ ಶ್ರೀ ದುಗಾರ್ಂಬಿಕಾ ದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ ಎಂದುಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ. ಮಾ.15 ರ ಬೆಳಿಗ್ಗೆ 06 ಗಂಟೆಯಿಂದ ಮಾ.16 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಗೊಳಿಸಿದೆ.ಜಿಲ್ಲೆಯಲ್ಲಿ ಮಾ.13 ರಿಂದ ಮಾ.22 …
Read More »
admin
March 15, 2022
Breaking News, ಕರ್ನಾಟಕ
ದೊಡ್ಡಬಳ್ಳಾಪುರ : ಕಾಲೇಜ್ಗೆ ತೆರಳುತ್ತಿದ್ದ ತಂದೆ-ಮಗನ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅಪ್ಪನ ಎದುರೇ ಮಗ ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ ಚುಂಚೇಗೌಡನ ಹೊಸಹಳ್ಳಿ ಗೇಟ್ ಬಳಿ ಈ ರಸ್ತೆ ಅಪಘಾತ ನಡೆದಿದ್ದು, ಅಂಬಲಗೆರೆಯ ನಿವಾಸಿ ವರುಣ್ (18) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆ ಸಿದ್ದಲಿಂಗಪ್ಪ (54) ಗಾಯಗೊಂಡಿದ್ದಾರೆ. ಮೃತ ಯುವಕ ದೊಡ್ಡಬಳ್ಳಾಪುರ ನಗರದ ಶ್ರೀವಾಣಿ ಕಾಲೇಜ್ನಲ್ಲಿ ವ್ಯಾಸಂಗ ಮಾಡುತ್ತಿದ್ದ. …
Read More »
admin
March 15, 2022
Breaking News, ದೆಹಲಿ
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಲ್ಲಿ ಇದ್ದರೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಸೋಮವಾರ 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆಯನ್ನು ಘೋಷಿಸಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ. ಮಕ್ಕಳು ಮತ್ತು ವೃದ್ಧರ ಪೋಷಕರು ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಸಚಿವರು ಮನವಿ …
Read More »
admin
March 15, 2022
Breaking News, ಬೆಂಗಳೂರು
ಬೆಂಗಳೂರು : “ನನ್ನ ಬಗ್ಗೆ ಟೀಕೆ ಮಾಡಿರುವ ವ್ಯಕ್ತಿಯ ಹೇಳಿಕೆ, ಆತ ಬಳಸಿರುವ ಪದಪುಂಜಗಳು ಆತನ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. ಆತನ ಮಾತುಗಳೇ ಆತನ ಸಂಸ್ಕಾರ ಎಂಥದ್ದು ಎಂದು ತೋರಿಸುತ್ತದೆ” ಎಂದು ಯೋಗೇಶ್ವರ್ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹರಿಹಾಯ್ದರು. ವಿಧಾನಸೌಧದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. “ನನ್ನ ಜೇವನ ತೆರೆದ ಪುಸ್ತಕ. ನನಗೆ ಯಾರ ಸರ್ಟಿಫಿಕೇಟ್ ಕೂಡಾ ಬೇಕಿಲ್ಲ. ತಾಜ್ ವೆಸ್ಟೆಂಡ್‌ನಲ್ಲಿ ರಾಸಲೀಲೆ …
Read More »
admin
March 15, 2022
Breaking News, ಗದಗ, ಜಿಲ್ಲೆ
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಬಳಿ ಇಂದು ಈ ಅಪಘಾತ ಸಂಭವಿಸಿದೆ.ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ್ದರಿಂದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗದಗ-ಹಾವೇರಿ ಮಾರ್ಗದಲ್ಲಿ ಸಂಚಾರ ಮಾಡುವ ಈ ಬಸ್ನಲ್ಲಿ 50ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಆ ಪೈಕಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಕ್ಷ್ಮೇಶ್ವರ ಪೊಲೀಸ …
Read More »
admin
March 15, 2022
Breaking News, ಕರ್ನಾಟಕ
ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ ಎಂದು …
Read More »