admin
March 8, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದ 10 ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಂಗ ಬಂಧನ ನೀಡಿದೆ. ಹರ್ಷನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 10 ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಫೆ 25 ರಿಂದ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಸೋಮವಾರ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಎಲ್ಲ ಆರೋಪಿಗಳನ್ನು ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆ ಎಲ್ಲ ಆರೋಪಿಗಳನ್ನು …
Read More »
admin
March 8, 2022
Breaking News, ಗದಗ, ಜಿಲ್ಲೆ
ಗದಗ : ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರ ಗ್ರಾಮದಲ್ಲಿ ರೈತರ ಮಹಿಳೆಯರಿಬ್ಬರು ವಿಷ ಸೇವಿಸಿದ್ದು ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸಲು ಮುಂದಾಗಿದ್ದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಈ ವೇಳೆ ಮಹಿಳೆಯರಿಬ್ಬರು ಕ್ರಿಮಿನಾಶಕ ಸೇವಿಸಿದ್ದಾರೆ. ನಿರ್ಮಲಾ ಪಾಟೀಲ(32) ಅವರು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಸರೋಜಮ್ಮ ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಪ್ಪತಗುಡ್ಡ ವನ್ಯಜೀವಿ ಅರಣ್ಯ ಪ್ರದೇಶ ವ್ಯಾಪ್ತಿಯ ಜಮೀನಿನಲ್ಲಿ …
Read More »
admin
March 8, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ನಗರದ ಕಾರ್ ಸ್ಟ್ರೀಟ್ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ ಅನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ ಸೇರಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದು, ಇಂದು 155 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಹಾಗೆಯೇ ಐವರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. 349 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ 38,99,647 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ.
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು: ‘ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿಕೊಂಡಿದ್ದರು. ಅವರ ಕಾಲದಲ್ಲಿ ರಾಜ್ಯ ದಿವಾಳಿಯತ್ತ ಸಾಗಿದೆ. ಇಲ್ಲಿರುವುದು ಡಬಲ್ ಎಂಜಿನ್ ಸರ್ಕಾರವಲ್ಲ, ಡಬ್ಬಾ ಸರ್ಕಾರ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆ. ಆದರೆ, ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಆರ್‌ಎಸ್‌ಎಸ್ ಹಿನ್ನೆಲೆಯವರು ಯಾರಾದರೂ ಇಂಥಾ …
Read More »
admin
March 8, 2022
Breaking News, ದೆಹಲಿ
ನವದೆಹಲಿ: ದೇಶದ 28 ಸಾಧಕಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪರಿಗಣಿಸಿ ಮಾ.8ರ ಮಹಿಳಾ ದಿನಾಚರಣೆಯಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರು ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಲಿದ್ದಾರೆ.“ವಯಸ್ಸು, ಭೌಗೋಳಿಕ ಅಡೆತಡೆಗಳು, ಸಂಪನ್ಮೂಲಗಳನ್ನು ಹೊಂದಲು ಇರುವ ಅಡ್ಡಿಗಳನ್ನು ಮೀರಿ ಈ ಸಾಧಕಿಯರು ಗಣನೀಯ ಸಾಧನೆ ಮಾಡಿದ್ದಾರೆ.
Read More »
admin
March 8, 2022
Breaking News, ರಾಯಚೂರು
ರಾಆಯಯಚೂರು: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಇಂದು (ಮಾರ್ಚ್ 7) ರಾಯಚೂರು ನಗರ ಬಂದ್ ಆಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ( ಆಗಿದ್ದು, ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಲಂ 371(ಜೆ) ಅನ್ವಯಿಸದಂತೆ ನವೋದಯ ಸಂಸ್ಥೆ ಕೋರ್ಟ್ ಮೊರೆ ಹೋಗಿದೆ. ಕೋರ್ಟ್ಗೆ ಹಾಕಿದ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸಿ …
Read More »
admin
March 8, 2022
Breaking News
ಶ್ರೀನಿವಾಸಪುರ :ಯುವಕ ಹಾಗೂ ಅಪ್ರಾಪ್ತ ಬಾಲಕಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಯಲವಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಗಂಗಾಧರ್ ಹಾಗೂ ನಿಕಿತಾ ಆತ್ಮಹತ್ಯೆಗೆ ಶರಣಾದವರು,ಆತ್ಮಹತ್ಯೆಗೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ,ಇಬ್ಬರು ಶ್ರೀನಿವಾಸಪುರ ಪಟ್ಟಣದ ಜಗಜೀವನ ಪಾಳ್ಯ ದವರೆಂದು ತಿಳಿದುಬಂದಿದೆ, ನಿಕಿತಾ 10ನೇ ತರಗತಿ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರ ಭೇಟಿ ನೀಡಿ …
Read More »
admin
March 8, 2022
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ’ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಿಂದ ಮಾರ್ಚ್ 12 ರಂದು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ. ಗುಂಗಿರ್ಲಹಳ್ಳಿ (ಮಜರೆ) ಗ್ರಾಮದಲ್ಲಿ 171 ಕುಟುಂಬಗಳಿದ್ದು 977 ಜನರು ವಾಸವಿದ್ದಾರೆ, ಈ ಪೈಕಿ 157 ಖಾತೆದಾರರಿದ್ದಾರೆ. 977 …
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು: ಜೆಇಇ ಪರೀಕ್ಷೆಯಂದೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ದಿನಾಂಕ ಘೋಷಣೆಯಿಂದಾಗಿ, ಮತ್ತೆ ಪಿಯು ಬೋರ್ಡ್ ನಿಂದ ವಾರ್ಷಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ತಾತ್ಕಾಲಿಕ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ದಿನಾಂಕ 22-04-2022ರಿಂದ 11-05-2022ರವರೆಗೆ ನಿಗದಿಪಡಿಸಲಾಗಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 05-03-2022ರ ಸಂಜೆ 5 …
Read More »