Breaking News

Breaking News

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದ್ದು, ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನೀಡಲಾಗುತ್ತದೆ. ಪ್ರಾಯೋಗಿಕವಾಗಿ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. ಹೊಸ ಪಹಣಿಯಲ್ಲಿಯೂ ಹಳೆ ಪಹಣಿಯಲ್ಲಿ ಇರುವಂತೆಯೇ ಎಲ್ಲ ವಿವರಗಳು ಇರುತ್ತವೆ. ಎಡಗಡೆ ಡಿಜಿಟಲ್ ಸ್ಕೆಚ್ ಇರಲಿದೆ. ವಿಸ್ತೀರ್ಣ, ಜಮೀನು ಎಲ್ಲಿದೆ?, ಒತ್ತುವರಿ ಮಾಹಿತಿ, ಕ್ಯೂಆರ್ ಕೋಡ್, ಬಾರ್ಕೋಡ್ ಮೊದಲಾದವುಗಳನ್ನು ಒಳಗೊಂಡಂತೆ ಹೊಸ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.

Read More »

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡದ ಶ್ರೀರಾಮುಲು

ಬಳ್ಳಾರಿ: 2022-23ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಶ್ರೀರಾಮುಲು, ಬಾಯಿ ಚಪಲಕ್ಕೆ ಮಾತನಾಡುವವರ ಬಾಯಿ ಮುಚ್ಚಿಸಲಾಗದು ಎಂದು ಹೇಳಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದು ಅಡ್ಡಕಸಬಿ ಬಜೆಟ್ ಎಂದಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಇದು ಸಿದ್ದರಾಮಯ್ಯ ಅವರ ಭಂಡತನ, ಮೊಂಡುತನಕ್ಕೆ ಸಾಕ್ಷಿ. ಸಿದ್ದರಾಮಯ್ಯನವರು 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. …

Read More »

ಮೆಟ್ರೋ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣೆಯಲ್ಲಿ ಮೆಟ್ರೋ ರೈಲಿಗೆ ಚಾಲನೆ ನೀಡಿದ್ದಾರೆ, ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆಯನ್ನು ಅನಾವರಣ ಮಾಡಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇಂದು ಪುಣೆಯ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಶಿಲಾನ್ಯಾಸವನ್ನೂ ಮಾಡಲಾಗಿದೆ.ಪುಣೆ ಮೆಟ್ರೋದ ಶಂಕುಸ್ಥಾಪನೆಗೆ ನನ್ನನ್ನು ಕರೆದಿದ್ದ ನೀವು ಈಗ ಅದನ್ನು ಉದ್ಘಾಟನೆ ಮಾಡುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ನಿಗದಿತ ಸಮಯದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಬಹುದು …

Read More »

ಹರ್ಷ ಮನೆಗೆ ಮಾಜಿ ಸಿಎಂ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ಶಿವಮೊಗ್ಗ: ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರಕಾರದ ಪರವಾಗಿ ಹರ್ಷ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರದ ಚೆಕ್ ನೀಡಿದರು. ಸೀಗೆಹಟ್ಟಿಯಲ್ಲಿ ಹರ್ಷ ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಯಡಿಯೂರಪ್ಪ, 26 ವರ್ಷದ ಯುವಕ ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಈ ಭಾಗದಲ್ಲಿ ಗೊಂದಲ, ಹೋರಾಟಕ್ಕೆ ಅವಕಾಶ ನೀಡುತ್ತಾ ಇರಲಿಲ್ಲ. ಹಿಂದೂ ಯುವ …

Read More »

ಎ.ಪಿ.ಎಂ.ಸಿ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟಿಸಿದ ಸಿಎಂ

ಹುಬ್ಬಳ್ಳಿ: ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಏಷ್ಯಾದ ಅತಿದೊಡ್ಡ ಎ.ಪಿ.ಎಂ.ಸಿ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ಎ.ಪಿ‌.ಎಂ.ಸಿ ಗೆ ಸಾಮಾಜಿಕ ಸುಧಾರಕ ಜಗಜ್ಯೋತಿ ಬಸವೇಶ್ವರ ಹೆಸರಿಡಲಾಗಿದೆ. ಇದಕ್ಕೆ ತಕ್ಕಹಾಗೆ ಮುಖ್ಯದ್ವಾರವನ್ನು ನಿರ್ಮಿಸಲಾಗಿದ್ದು, ಉತ್ತರ ಕರ್ನಾಟಕದ ರೈತ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಬಸವಣ್ಣ, ನೇಗಿಲು ಹೊತ್ತ ರೈತ, ಅಲಂಕೃತ ಜೋಡೆತ್ತುಗಳ …

Read More »

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಿದ ಸಿಎಂ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಇಂದು ಲೋಕಾರ್ಪಣೆ ಮಾಡಿದರು.  ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕರಾದ ಪ್ರಸಾದ ಅಬ್ಬಯ್ಯ,  ಸಲೀಂ ಅಹ್ಮದ್, ಮಾಜಿ ಶಾಸಕ ವಿ …

Read More »

ಕೆಲಸ ಹೆಸರಿನಲ್ಲಿ ಅತ್ಯಾಚಾರ : ಧಾರವಾಡ ಖಾಸಗಿ ವಾಹಿನಿಯ ಪತ್ರಕರ್ತ ಬಂಧನ

ಧಾರವಾಡ: ಕೆಲಸ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಧಾರವಾಡದ ಖಾಸಗಿ ವಾಹಿನಿಯ ಪತ್ರಕರ್ತನನ್ನು ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಸೋಮಾಪೂರ ಗ್ರಾಮದ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಾಸಗಿ ವಾಹಿನಿ ಪತ್ರಕರ್ತ ಕೃಷ್ಣಮೂರ್ತಿ ಕುಲಕರ್ಣಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಕೆಲಸ ಕೊಡಿಸುವುದಾಗಿ ಮಹಿಷಿ ರಸ್ತೆಯಲ್ಲಿರುವ ತನ್ನ ನಿವಾಸಕ್ಕೆ ಕರೆಸಿಕೊಂಡಿದ್ದ ಆರೋಪಿ ಫೆಬ್ರವರಿ 27 ರಿಂದ ಮಾರ್ಚ್ 1ರ ನಡುವೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ …

Read More »

ವಕೀಲ ಜಗದೀಶ್ ಗೆ ಜಾಮೀನು ಮಂಜೂರು : ಬಿಡುಗಡೆ ಭಾಗ್ಯವಿಲ್ಲಾ

ಬೆಂಗಳೂರು: ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ವಕೀಲ ಜಗದೀಶ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಕೂಡ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಗಲಾಟೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಜಗದೀಶ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ.ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂದು ತಿಳಿಸಿದೆ. ಅಲ್ಲದೇ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ …

Read More »

ಯುಕ್ರೇನ್ ನಿಂದ ಭಾರತಕ್ಕೆ ಹೊರಟ 296 ವಿದ್ಯಾರ್ಥಿಗಳು

ಬಾಗಲಕೋಟೆ/ಬೀದರ್​: ಖಾರ್ಕೀವ್ ಬಳಿಯ ಪೆಸೊಚಿನ್ ಪ್ರದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದ 37 ಮಂದಿಯೂ ಸೇರಿದಂತೆ ಭಾರತದ 296 ವಿದ್ಯಾರ್ಥಿಗಳು ಬಸ್​​ನಲ್ಲಿ ಹೊರಟಿದ್ದು, ಲೆವಿವ್ ತಲುಪಿ ನಂತರ ಪೊಲ್ಯಾಂಡ್ ಅಥವಾ ರೊಮೇನಿಯಾ ಮಾರ್ಗವಾಗಿ ಭಾರತವನ್ನು ಸೇರಲಿದ್ದಾರೆ. ಬೀದರನಿಂದ ಯೂಕ್ರೇನ್​ಗೆ ಎಂಬಿಬಿಎಸ್​ ವ್ಯಾಸಂಗಕ್ಕಾಗಿ ಹೋಗಿದ್ದ ಶಶಾಂಕ, ವಿವೇಕ ಹಾಗೂ ಬಾಗಲಕೋಟೆಯ ಕಿರಣ ಸವದಿ ಸೇರಿ 296 ಜನ ಭಾರತೀಯರು ಬಸ್ ಮೂಲಕ ಯೂಕ್ರೇನ್​ನಿಂದ ಭಾರತದತ್ತ ಹೊರಟಿದ್ದಾರೆ.

Read More »