admin
March 5, 2022
Breaking News, ಬೆಂಗಳೂರು
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿದ್ದರಾಮಯ್ಯ ಅಡ್ಡಕಸುಬಿ ಬಜೆಟ್ ಎಂದು ಟ್ವೀಟ್ ಮೂಲಕ ಬಜೆಟ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಟೀಕೆಗೆ ರಾಜ್ಯ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ. ರಾಜಕೀಯ ಟೀಕೆಗಳು ಮರ್ಯಾದೆಯ ಗೆರೆ ದಾಟಬಾರದು. ಆದರೆ ಸಿದ್ದರಾಮಯ್ಯ ಅವರು ರಾಜ್ಯದ ಆಯವ್ಯಯವನ್ನೇ ಅಡ್ಡಕಸುಬಿ ಬಜೆಟ್ ಎಂದು ವ್ಯಾಖ್ಯಾನಿಸಿದ್ದಾರೆ. ಪ್ರಜಾಪ್ರಭುತ್ವದ ರೀತಿ ರಿವಾಜುಗಳಿಗೆ ವಿರುದ್ಧವಾದ ಹೇಳಿಕೆಯನ್ನು ಸಿದ್ದರಾಮಯ್ಯರಿಂದ ರಾಜ್ಯದ ಜನರು ನಿರೀಕ್ಷಿಸಿರಲಿಲ್ಲ. ಇದು ರಾಜ್ಯದ ಜನತೆಗೆ ಮಾಡಿದ …
Read More »
admin
March 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮುತ್ತಮ್ಮ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಭೂಮಿಪೂಜಾ ಕಾರ್ಯಕ್ರಮವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರು ನೆರೆವೇರಿಸಿದರು. ಹುಬ್ಬಳ್ಳಿ ನಗರದ ಕುಸುಗಲ್ ಗ್ರಾಮ ಬಳಿಯ ಮಹಾದುರ್ಗಾ ಕಾಲೋನಿಯಲ್ಲಿ ಜರುಗಿತು . ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಡಾ. ವೀರಸೋಮೇಶ್ವರ ರಾಜದೇಶಿಕೆಂದ್ರ ಶಿವಾಚಾರ್ಯ ಭಗವತ್ಪಾದರು, ಸಾನಿಧ್ಯ ಸುಳ್ಳ ಗ್ರಾಮದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಾಜಿ …
Read More »
admin
March 5, 2022
Breaking News, World
ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಯುದ್ದ ಆರಂಭಿಸಿರುವ ರಷ್ಯಾ ಇಂದು ಕದನ ವಿರಾಮ ಘೋಷಿಸಿದೆ.ಸಂಪೂರ್ಣ ಉಕ್ರೇನ್ ನಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿದ್ದು, 6 ಗಂಟೆಯಿಂದ ಇದು ಜಾರಿಗೆ ಬಂದಿದೆ. ಅಲ್ಲಿನ ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಅನುವಾಗುವಂತೆ ಈ ಕದನ ವಿರಾಮ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ.ರಷ್ಯಾದ ಈ ನಡೆ ವಿಶ್ವವನ್ನು ಅಚ್ಚರಿಗೊಳಿಸಿದ್ದು, ಏಕಾಏಕಿ ಕದನ ವಿರಾಮ ಘೋಷಿಸಿರುವುದರಿಂದ ಈಗಾಗಲೇ ಉಕ್ರೇನ್ ನ್ನು ರಷ್ಯಾ ತನ್ನ ಕೈ ವಶ …
Read More »
admin
March 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬ್ಯಾಂಕ್ ವ್ಯವಸ್ಥಾಪಕರೊಬ್ಬರು ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಿ ಸಾಲ ಮಂಜೂರು ಮಾಡಲು ಸಹಕರಿಸಿದ ಆರೋಪ ಕೇಳಿ ಬಂದಿದ್ದು, ಒಟ್ಟು 32 ಲಕ್ಷ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ. 20019 ರಲ್ಲಿ ಮಧುರಾ ಕಾಲೋನಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವ್ಯವಸ್ಥಾಪಕಾರಿಗಿದ್ದ ಸಂಧ್ಯಾ ಎಂಬುವರು ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಿ ತಲಾ 5 ಲಕ್ಷ ರೂ. ನಂತೆ ಒಟ್ಟು 7 ಜನರಿಗೆ 35 ಲಕ್ಷ ರೂ. ಸಾಲ …
Read More »
admin
March 5, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬ್ಯಾಂಕ್ ಖಾತೆ ಸ್ಥಗಿತವಾಗುತ್ತದೆ ಎಂದು ಅಪರಿಚಿತನೊಬ್ಬ ಸಂದೇಶ ಕಳಿಸಿ, ಗಫಾರಶೇಖ ಖಾದರವಲಿ ಎಂಬುವರ ಖಾತೆಯ ವಿವರ ಪಡೆದು, ಸುಮಾರು 73 ಸಾವಿರ ರೂ. ವಂಚಿಸಿರುವ ಪ್ರಕರಣ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅಪರಿಚಿತನೊಬ್ಬ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತವಾಗುತ್ತದೆ ಎಂದು ಇವರಿಗೆ ಸಂದೇಶ ಕಳುಹಿಸಿದ್ದಾನೆ. ಬ್ಯಾಂಕ್‌ನ ಸಿಬ್ಬಂದಿ ಇರಬಹುದು ಎಂದು ಖಾದರವಲಿ ಅವರು ಸಂದೇಶದಲ್ಲಿರುವ ಲಿಂಕ್ ಓಪನ್ ಮಾಡಿದ್ದಾರೆ. ನಂತರ ವೆಬ್‌ಸೈಟ್‌ನಲ್ಲಿ ಹೆಸರು, ಪಾಸವರ್ಡ್, ಮೊಬೈಲ್ ನಂಬರ್ ನಮೂದಿಸಿ …
Read More »
admin
March 5, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ನಗರದಲ್ಲಿ ನಡೆದಂತ ಹರ್ಷ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಮತ್ತೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣ ವರದಿಯಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕಃ-3-3-2022 ರಂದು ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿಯೊಬ್ಬರು ತಮ್ಮ ನಾಯಿಯನ್ನು …
Read More »
admin
March 5, 2022
Breaking News
ಚಳಗೇರಿ (ಕುಮಾರಪಟ್ಟಣ): ‘ರಾಜ್ಯ ಸರ್ಕಾರದಿಂದ ಮೃತ ನವೀನ ಗ್ಯಾನಗೌಡರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಗೊಂಡಿದ್ದಾರೆ. ಬೊಮ್ಮಾಯಿ ಅವರೇ ಶನಿವಾರ ಇಲ್ಲಿಗೆ ಬಂದು ಪರಿಹಾರದ ಚೆಕ್ ವಿತರಿಸುವ ನಿರೀಕ್ಷೆಯಿದೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿರುವ ಮೃತ ನವೀನ ಗ್ಯಾನಗೌಡರ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ, ಪಾಲಕರಿಗೆ ಸಮಾಧಾನ ಪಡಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ …
Read More »
admin
March 5, 2022
Breaking News, ಬೆಂಗಳೂರು
ಬೆಂಗಳೂರು : ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು,ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ.ಖರಕಾಯ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ …
Read More »
admin
March 5, 2022
Breaking News, World
ಮುಂಬೈ: ಬೀದಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿ ರಿಜ್ವಾನ್ ಶೇಖ್ (45) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮನೆಯ ಮುಂದಿನ ರಸ್ತೆಯಲ್ಲಿ ಸುತ್ತಾಡುತ್ತಿದ್ದ ಬೀದಿನಾಯಿಯನ್ನು ಬಲವಂತವಾಗಿ ಮನೆಯೊಳಗೆ ಎಳೆದುಕೊಂಡು ಹೋಗುವುದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ನೋಡಿದ್ದರು. ಇದರಿಂದ ಅನುಮಾನಗೊಂಡ ಅವರು ಆತನನ್ನು ಗಮನಿಸುತ್ತಿದ್ದರು. ನಂತರ ಆ ಬೀದಿನಾಯಿ ತೀವ್ರ ನೋವಿನಿಂದ ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿ ಅದನ್ನು ಪಶು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. …
Read More »
admin
March 5, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 233 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 648 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 3,469ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 6 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 2, ಧಾರವಾಡ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಆ ಮೂಲಕ ಮರಣ ದರ ಶೇ. 2.57 ಹಾಗೂ ಪಾಸಿಟಿವ್ ದರ ಶೇ. 0.48ಕ್ಕೆ ಇಳಿಕೆಯಾಗಿದೆ.
Read More »