admin
March 9, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಕೊರೊನಾದಿಂದ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಈಗ ಮತ್ತೆ ದಿನಸಿ ವಸ್ತುಗಳು ಹಾಗೂ ತೈಲ ಬೆಲೆ ಏರಿಕೆ ಆಗುವುದರಿಂದ ನಿತ್ಯದ ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನಲೆ ಮತ್ತೇ ಹುಬ್ಬಳ್ಳಿ ಜನರಲ್ಲಿ ಹೊಸ ಆತಂಕ ಸೃಷ್ಟಿ ಆಗಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಭಾರತದಲ್ಲಿ ತೈಲ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂಬ ಚರ್ಚೆ ಪ್ರಾರಂಭವಾದ ಪರಿಣಾಮ ಸಾರ್ವಜನಿಕರಲ್ಲಿ ಮತ್ತೇ ಹೊಸ …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾರ್ಚ್ ಅಂತ್ಯದೊಳಗೆ 100 ಕೃಷಿ ಸಂಜೀವಿನಿ ಸಂಚಾರಿ ವಾಹನಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೃಷಿ ಸಂಬಂಧ ಬೆಳೆ, ಕೀಟ ನಿಯಂತ್ರ ಕುರಿತು ಮಾಹಿತಿ ಹಾಗೂ ಮಣ್ಣು ಪರೀಕ್ಷೆಗಳನ್ನು ರೈತರ ಜಮೀನಿನ ಬಳಿಯೇ ನೀಡುವ ಕೃಷಿ ಸಂಜೀವಿನಿ ವಾಹನಗಳ ಸೇವೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆ ಕರಿತು ಎಲ್ಲ ಪಕ್ಷಗಳ ಮುಖಂಡರನ್ನು ಹಾಗೂ ಕಾನೂನು ತಜ್ಞರನ್ನು ಕರೆದು ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲಾಗುತ್ತದೆ.ಅವರ ಸಲಹೆ ಹಾಗೂ ಅಭಿಪ್ರಾಯಗಳನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಅದರಂತೆ ಕೆಲಸ ಮಾಡಲಾಗುತ್ತದೆ.
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ನಗರದಲ್ಲಿ ಮೊಹಮ್ಮದ್ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯದ್ ಮೋಹಿನ್, ಅದ್ನಾನ್ ಖಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ ಗುಂಡುಹಾರಿಸಿ ಇಬ್ಬರನ್ನು ಬಂಧಿಸಲಾಗಿದೆ.ಇವರೊಂದಿಗೆ ಅರ್ಬಾಜ್, ಮಜರ್ ಮತ್ತು ಸೈಯದ್ ಶಾಹಿದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ : ನಿನ್ನೆ ರಾತ್ರಿ ಗಲಾಟೆ ನಡೆದು ಮೊಹಮ್ಮದ್ ಉಸ್ಮಾನ್ ನನ್ನು ಕೊಲೆ ಮಾಡಲಾಗಿತ್ತು. ಪುಲಕೇಶಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, …
Read More »
admin
March 9, 2022
Breaking News, World
ಲಖನೌ: ವಾರಾಣಸಿಯಲ್ಲಿ ಮತಯಂತ್ರಗಳನ್ನು ಕದಿಯಲಾಗುತ್ತಿದೆ. ಟ್ರಕ್‌ಗಳಲ್ಲಿ ಇವಿಎಂಗಳನ್ನು ಸಾಗಿಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಬಿಜೆಪಿ ಮತಗಳನ್ನು ಕದಿಯಲು ಪ್ರಯತ್ನಿಸುತ್ತಿದೆ ಎಂದು ಅಖಿಲೇಶ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ವಾತವರಣ ಸೃಷ್ಟಿಸಲು ಮತಗಟ್ಟೆ ಸಮೀಕ್ಷೆಗಳು ನಡೆದಿವೆ ಎಂದು ಎಂದ ಅವರು, ಸಮೀಕ್ಷೆ ಫಲಿತಾಂಶಗಳನ್ನು ತಳ್ಳಿಹಾಕಿದರು. ಬಿಜೆಪಿ ಈ ಚುನಾವಣೆಯಲ್ಲಿ ಸೋಲಲಿದೆ. ಹೀಗಾಗಿ ಮತಗಳ ಎಣಿಕೆಯನ್ನು ನಿಧಾನಗೊಳಿಸುವಂತೆ ಸರ್ಕಾರದ ಅಧಿಕಾರಿಗಳು ಅಧೀನ ಅಧಿಕಾರಿಗಳಿಗೆ ನಿರ್ದೇಶಿಸುತ್ತಿದ್ದಾರೆ …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜಗದೀಶ್ ಮಂಗಳವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಅವರ ಅಭಿಮಾನಿಗಳು ಜಗದೀಶ್‌ಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು.
Read More »
admin
March 9, 2022
Breaking News
ಕೊಪ್ಪ: ಇಲ್ಲಿನ ಸಹಕಾರ ಸಾರಿಗೆ ಸಂಸ್ಥೆಯ (ಟಿಸಿಎಸ್) ವ್ಯವಸ್ಥಾಪಕ ನಿರ್ದೇಶಕ ಗಾಡ್ವಿನ್ ಜಯಪ್ರಕಾಶ್ ಅವರನ್ನು ಮಾರ್ಚ್ 22ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ. ಗಾಡ್ವಿನ್ ಜಯಪ್ರಕಾಶ್ ಅವರು ಸಂಸ್ಥೆಯ ಕಾರ್ಮಿಕರ ಪಿಎಫ್ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ನೌಕರರ ಭವಿಷ್ಯ ನಿಧಿ ಸಂಘಟನೆಯ ಚಿಕ್ಕಮಗಳೂರು ಘಟಕದ ಅಧಿಕಾರಿಯು 2020ರ ಫೆಬ್ರುವರಿ 18ರಂದು ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2018ರ ಅಕ್ಟೋಬರ್‌ನಿಂದ …
Read More »
admin
March 9, 2022
Breaking News, ಕರ್ನಾಟಕ
ನಿಪ್ಪಾಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕುರ್ಲಿ ಗ್ರಾಮದ ನಿವಾಸಿ, ಸಿಐಪಿಎಫ್‍ನ ಯೋಧ ನವನಾಥ ದಿವಟೆ (30) ಉತ್ತರಪ್ರದೇಶದಲ್ಲಿ ಸೇವಾನಿರತನಿದ್ದಾಗ ಸಾವಿಗೀಡಾಗಿದ್ದಾರೆ.ಅವರಿಗೆ ಪತ್ನಿ, ತಾಯಿ, ತಂದೆ, ಪುತ್ರ, ಪುತ್ರಿ, ಸಹೋದರ ಮತ್ತು ಸಹೋದರಿ ಇದ್ದಾರೆ.ಪಾರ್ಥಿವ ಶರೀರವನ್ನು ಕುರ್ಲಿ ಗ್ರಾಮಕ್ಕೆ ಬುಧವಾರ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. 10 ವರ್ಷಗಳಿಂದ ಅವರು ಭಾರತೀಯ ಸೈನ್ಯದಲ್ಲಿ ಕೆಲಸ ಮಾಡುತ್ತಿದ್ದರು. ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಸೋಮವಾರ ಬೆಳಿಗ್ಗೆ ಅಸ್ವಸ್ಥಗೊಂಡ …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಹೇಳುತ್ತಾ ‘ಸಬ್ ಕಾ ಸರ್ವನಾಶ್’ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆಯು ಸದನದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು. ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ‘ಬಜೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ರಾಜ್ಯವನ್ನು ಸುಭಿಕ್ಷಗೊಳಿಸುತ್ತೇವೆ ಎಂದು ಹೇಳಲಾಗಿದೆ. …
Read More »
admin
March 9, 2022
Breaking News, World
ನ್ಯಾಟೋಗೆ ಸೇರುವ ಉದ್ದೇಶದಿಂದ ಯುದ್ಧ ಮಾಡುತ್ತಿರುವ ಉಕ್ರೇನ್ ಯುದ್ಧದಿಂದ ತತ್ತರಿಸಿದ್ದು, ಅಚ್ಚರಿ ನಿರ್ಧಾರ ಪ್ರಕಟಿಸಿದೆ. ಇನ್ನು ಮುಂದೆ NATO ಸದಸ್ಯತ್ವಕ್ಕೆ ಒತ್ತಾಯಿಸಲ್ಲ ಎಂದು ರಷ್ಯಾಕ್ಕೆ ಒಪ್ಪಿಗೆ ಸೂಚಿಸಿದೆ. ನಾವು ಅರ್ಥಮಾಡಿಕೊಂಡಿದ್ದೇವೆ. ಬಹಳ ಹಿಂದೆಯೇ ಈ ಪ್ರಶ್ನೆಗೆ ಸಂಬಂಧಿಸಿದಂತೆ ನಾನು ತಣ್ಣಗಾಗಿದ್ದೇನೆ. NATO ಸೇರಲು ಉಕ್ರೇನ್ ಸಿದ್ಧವಾಗಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ ಸ್ಕಿ ಹೇಳಿದ್ದಾರೆ. ವೊಲೊಡಿಮಿರ್ ಝೆಲೆನ್ಸ್ಕಿ ಅವರು, ಉಕ್ರೇನ್‌ಗೆ ನ್ಯಾಟೋ ಸದಸ್ಯತ್ವಕ್ಕಾಗಿ ಇನ್ನು ಮುಂದೆ ಒತ್ತಾಯಿಸುವುದಿಲ್ಲ. ಇದು …
Read More »