admin
March 4, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಉನ್ನತ ಶಿಕ್ಷಣಕ್ಕೆ ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಇಂದು (ಮಾರ್ಚ್ 4) ಚೊಚ್ಚಲ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು,ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ * ರಿಯಾಯಿತಿ ಬಸ್ ಪಾಸ್ ಯೋಜನೆ, * ಹುಬ್ಬಳ್ಳಿ ಹಾಗೂ ದಾವಣಗೆರೆ …
Read More »
admin
March 4, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ : ಉಕ್ರೇನ್ ಯುದ್ಧ ಭೂಮಿಯಲ್ಲಿ ನಿಂತು ಭಾರತದಲ್ಲಿರುವ ತಾಯಿಗೆ ಹುಬ್ಬಳ್ಳಿಯ MBBS ವಿದ್ಯಾರ್ಥಿನಿ ಧೈರ್ಯ ತುಂಬಿದ್ದಾಳೆ. ಹುಬ್ಬಳ್ಳಿಯ ಶಾಂತಿನಗರ ನಿವಾಸಿ ನಾಝೀಲಾ ಉಕ್ರೇನ್ ನಲ್ಲಿ ಸಿಲುಕಿದ್ದು, ತನ್ನ ತಾಯಿ ನೂರ್ ಜಹಾನ್ ಗಾಜಿಪುರಗೆ ವಾಟ್ಸ್ ಆಪ್ ವಾಯ್ಸ್ ಮೇಸಜ್ ಕಳುಹಿಸಿ ಧೈರ್ಯ ತುಂಬಿದ್ದಾಳೆ. ಕಳೆದ ಎರಡು ದಿನಗಳಿಂದ ಪಾಲಕರ ಜೊತೆಗೆ ನಿರಂತರವಾಗಿ ಫೋನ್ ಸಂಪರ್ಕದಲ್ಲಿರುವ ನಾಝಿಲಾ ನಾನು ಗಡಿ ದಾಟಿದ್ದು, ಉಕ್ರೇನ್ ಹಂಗೇರಿ ಪೋಲಿಸರ ಜೊತೆಗೆ ಶೆಫ್ ಆಗಿದ್ದೇನೆ.ನನಗೆ …
Read More »
admin
March 4, 2022
Breaking News
ಬಸ್ತಿ(ಉತ್ತರ ಪ್ರದೇಶ): ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಎರಡು ವಾಹನಗಳು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಕೇಂದ್ರ ಭದ್ರತಾ ಪಡೆಯ 3 ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೇ ವೇಳೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ದುಬಾರಿ ಶುಲ್ಕ, ದುಡ್ಡು ಕೊಟ್ಟರೂ ಸಿಗದ ಸೀಟುಗಳು ಈ ಎಲ್ಲ ಕಾರಣಗಳಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ನಂಥ ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಯುದ್ಧಪೀಡಿತ ಉಕ್ರೇನ್ ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವನ್ನು ಕಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಸುಧಾರಣೆಯ ನಿಟ್ಟಿನಲ್ಲಿ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ.
Read More »
admin
March 4, 2022
Breaking News, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಫೆ.20ರಂದು ಹತ್ಯೆಗೀಡಾದ ಹಿಂದೂಪರ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರು. ಪರಿಹಾರ ಘೋಷಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾನುವಾರ ತಾವು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಚೆಕ್ ಅನ್ನು ಹರ್ಷ ಕುಟುಂಬಕ್ಕೆ ಹಸ್ತಾಂತರಿಸಲಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಆಸ್ತಿಗಳಿಗೆ ಹಾನಿಯಿಂದ ನಷ್ಟಕ್ಕೆ ಒಳಗಾದವರಿಗೂ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
Read More »
admin
March 4, 2022
Breaking News, ದೆಹಲಿ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 6,396 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮತ್ತೆ 201 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514589 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 69897 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13450 ಜನರು ಕೋವಿಡ್ …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ಮತ್ತು ಭತ್ಯೆ ಪರೀಷ್ಕರಿಸಲು ಅಧಿಕಾರಿಗಳ ವೇತನ ಸಮಿತಿ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯಡಿಯೂರಪ್ಪ ಸರ್ಕಾರಿ ನೌಕರರು ರಾಜ್ಯದ ಸಾಮನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟಿದ್ದಾರೆ. ಕೊವಿಡ್ ಸಂದರ್ಭದಲ್ಲಿ ತಮ್ಮ ಜೀವನದ …
Read More »
admin
March 4, 2022
Breaking News, World
ಕೀವ್ : ಉಕ್ರೇನ್- ರಷ್ಯಾ ಯುದ್ಧ ಮುಂದುವರೆದಿದ್ದು, ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಸದ್ಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಕೆ.ಸಿಂಗ್ ಮಾಹಿತಿ ನೀಡಿದ್ದಾರೆ. ರಷ್ಯಾದ ಗುಂಡಿನ ದಾಳಿಯಲ್‌ಇ ಕೀವ್ ನ ವಿದ್ಯಾರ್ಥಿಯೊಬ್ಬನಿಗೆ ಗುಂಡು ತಗುಲಿದೆ.ತಕ್ಷಣವೇ ವಿದ್ಯಾರ್ಥಿಯನ್ನು ಕೀವ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜನರಲ್ ವಿ.ಕೆ.ಸಿಂಗ್ ಅವರು ಹೇಳಿದರು. ಪ್ರತಿಯೊಬ್ಬರೂ ಕೀವ್ ನಿಂದ ಹೊರಹೋಗಬೇಕೆಂದು ಭಾರತೀಯ …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಕೃಷಿ ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ನೀಡುವ ಸಾಧ್ಯತೆಯಿದೆ.ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳಕ್ಕೆ 7ನೇ ವೇತನ ಆಯೋಗವನ್ನು ರಚಿಸುವ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ. ಕಟ್ಟಡ ಮತ್ತು ಗಾರ್ಮೆಂಟ್ಸ್ ಕಾರ್ಮಿಕರಿಗೆ ವಸತಿ ಸೌಲಭ್ಯ, ಉಚಿತ ಬಸ್ …
Read More »