admin
March 1, 2022
Breaking News, ಬೆಂಗಳೂರು
ದೇವನಹಳ್ಳಿ(ಬೆಂಗಳೂರು): ಉಕ್ರೇನ್ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್ ನಾಯಕ್, ನಿಹಾರಿಕಾ, ಆಶಾ ವೆಂಕಟೇಶ್ ರೆಡ್ಡಿ ಅವರನ್ನು ಪೋಷಕರು …
Read More »
admin
March 1, 2022
Breaking News, ದೆಹಲಿ
ನವದೆಹಲಿ: ಪ್ರಧಾನಮಂತ್ರಿ ಗತಿಶಕ್ತಿ ಯೋಜನೆಯಿಂದ ಆಧುನಿಕ ಮೂಲಭೂತ ಸೌಲಭ್ಯ ನಿರ್ಮಾಣಕ್ಕೆ ನವದಿಶೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್‌ಗೆ ಸಂಬಂಧಿಸಿ ನಡೆದ ವೆಬ್ ಗೋಷ್ಠಿಯಲ್ಲಿ ಪಾಲ್ಗೊಂಡು ಮೋದಿ ಮೇಲಿನಂತೆ ನುಡಿದರು. ಗತಿಶಕ್ತಿ ಯೋಜನೆಯನ್ನು ಕಳೆದ ವರ್ಷ ಘೋಷಿಸಲಾಗಿತ್ತು. ಯಾವುದೇ ಮೂಲಸೌಕರ್ಯ ನಿರ್ಮಾಣದ ವೇಳೆ ಬೇರೆಬೇರೆ ಇಲಾಖೆಗಳಿಂದ ಎದುರಾಗುವ ಅಡೆತಡೆಗಳನ್ನು ನಿವಾರಿಸಲು, ಅತ್ಯುತ್ತಮವಾದ, ಏಕೀಕೃತವಾದ ರೀತಿಯಲ್ಲಿ ಯೋಜನೆ ಮಾಡಿ, ಜಾರಿ ಮಾಡಲು ಇದನ್ನು ಆರಂಭಿಸಲಾಗಿದೆ. ಇದರ ಮೂಲಕ ಸರ್ಕಾರಿ-ಖಾಸಗಿ …
Read More »
admin
March 1, 2022
Breaking News, ಬೆಂಗಳೂರು
ಬೆಂಗಳೂರು : ಭಾರತದ ರಸ್ತೆಗಳ ಗುಣಮಟ್ಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಿದ್ದು 2024ರೊಳಗೆ ಕರ್ನಾಟಕದ ಎಲ್ಲ ರಸ್ತೆಗಳ ಗುಣಮಟ್ಟವನ್ನು ಅಮೆರಿಕ ಮಾದರಿಗೆ ಎತ್ತರಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಬೆಳಗಾವಿ, ಹುಬ್ಬಳ್ಳಿ ಮತ್ತು ಮಂಗಳೂರುಗಳಲ್ಲಿ ಸೋಮವಾರ ಒಂದೇ ದಿನದಲ್ಲಿ ನಡೆದ ಪ್ರತ್ಯೇಕ ಸಮಾರಂಭಗಳಲ್ಲಿ ಅವರು ಒಟ್ಟಾರೆ ರಾಜ್ಯದ ವಿವಿಧೆಡೆ ನಡೆಯಲಿರುವ .19,930 ಕೋಟಿ ವೆಚ್ಚದ 46 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿ …
Read More »
admin
March 1, 2022
Breaking News, ಬೆಂಗಳೂರು
ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಇಂದು ಮಾರ್ಚ್ 1 ವಿಶೇಷ ದಿನ.ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್’ನ ಲಿರಿಕಲ್ ಸಾಂಗ್, ‘ಟ್ರೇಡ್ಮಾರ್ಕ್. ಬೆಳಗ್ಗೆ 11:11ಕ್ಕೆ ರಿಲೀಸ್ ಆಗುತ್ತಿದೆ. ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು. ಹೀಗಾಗಿ, ಅಭಿಮಾನಿಗಳು ಈ ಸಾಂಗ್ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇ ಟೀಸರ್ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ ಅಭಿಮಾನಿಗಳು …
Read More »
admin
February 28, 2022
Breaking News, ರಾಮನಗರ
ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎ1 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎ2 ವಿಪಕ್ಷ ನಾಯಕ ಸಿದ್ದರಾಮಯ್ಯ, ಎ3 ಡಿ.ಕೆ. ಸುರೇಶ್, ಎ4 ಎಂಎಲ್‌ಸಿ ಎಸ್. ರವಿ ಸೇರಿ ಪಾದಯಾತ್ರೆ ನಡೆಸುತ್ತಿರುವ 37 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
Read More »
admin
February 28, 2022
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಬೆಳವಡಿ ಮಲ್ಲಮ್ಮ, ಕೆಳದಿ ಚೆನ್ನಮ್ಮ ಸೇರಿದಂತೆ ಕನ್ನಡನಾಡಿನ ವೀರವನಿತೆಯರ ಸಾಹಸಗಾಥೆಗಳನ್ನು ಪಠ್ಯದಲ್ಲಿ ಅಳವಡಿಸಿ ಮಕ್ಕಳಿಗೆ ಅವರ ಶೌರ್ಯ, ಸಾಹಸಗಳ ಪರಿಚಯ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ಸ್ವಗೃಹದಲ್ಲಿ ಬೆಳವಡಿ ಮಲ್ಲಮ್ಮನವರು ಮರಾಠಾ ಸೈನ್ಯದ ವಿರುದ್ಧದ ಜಯಗಳಿಸಿದ 374ನೇ ವರ್ಷಾಚರಣೆ ಸ್ಮರಣಾರ್ಥ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಸಾಂಕೇತಿಕವಾಗಿ ಬೆಳವಡಿ ಮಲ್ಲಮ್ಮನವರ ವಿಜಯ ದಿನವನ್ನು ಆಚರಿಸಲಾಗಿದೆ. ಕನ್ನಡನಾಡಿನ ಕೆಳದಿ ಚೆನ್ನಮ್ಮ, ಬೆಳವಡಿ …
Read More »
admin
February 28, 2022
Breaking News, World
ಕೀವ್ : ರಷ್ಯಾದ 400 ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಹತ್ಯೆ ಮಾಡಲು ಆದೇಶಿಸಿದ್ದು, ಇದರಿಂದಾಗಿ ಅವರು ರಷ್ಯಾ ಸೈನಿಕರು ಹುಡುಕುತ್ತಿದ್ದಾರೆ ಎಂಬ ವಿಷಯ ಇದೀಗ ಬಹಿರಂಗವಾಗಿದೆ. 400ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ಆಫ್ರಿಕಾದಿಂದ ಕರೆಸಿಕೊಂಡಿದ್ದು, ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಅವರ ಸರ್ಕಾರದ ಅಧಿಕಾರಿಗಳನ್ನು ಹತ್ಯೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ. ಅಧ್ಯಕ್ಷ ಪುಟಿನ್ ಅವರ ಮಿತ್ರರ ಬಳಗದಲ್ಲಿ ಒಬ್ಬರಿಂದ ನಡೆಸಲ್ಪಡುವ ವ್ಯಾಗ್ನರ್ ಗ್ರೂಪ್ ಕಂಪನಿಯು ಐದು ವಾರಗಳ …
Read More »
admin
February 28, 2022
Breaking News
ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಯದ್ಲಪತಿ ವೆಂಕಟ ರಾವ್ ಹೈದರಾಬಾದ್‌ನಲ್ಲಿ ಸೋಮವಾರ ನಿಧನರಾದರು. ಅವರಿಗೆ 102 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನಲ್ಲಿರುವ ಅವರ ಪುತ್ರಿಯ ಮನೆಯಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
Read More »
admin
February 28, 2022
Breaking News, ಬೆಂಗಳೂರು
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು. ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಬೆಳಗ್ಗೆ ಕೊನೆಯುಸಿರೆಳೆದರು.
Read More »
admin
February 28, 2022
Breaking News
ಹೈದರಾಬಾದ್ : ದೇಶದಲ್ಲಿ ಕೋವಿಡ್ 3ನೇ ಅಲೆ ಇನ್ನೇನು ಅಂತ್ಯಕ್ಕೆ ಸಮೀಪಿಸಿದೆ ಅನ್ನುವಷ್ಟರಲ್ಲೇ, 2022ರ ಜೂನ್ ಅಂತ್ಯದ ವೇಳೆಗೆ ದೇಶದ ಮೇಲೆ ಸೋಂಕಿನ 4ನೇ ದಾಳಿಯ ಸಾಧ್ಯತೆ ಇದೆ ಎಂದು ಐಐಟಿ ಕಾನ್ಪುರದ ತಜ್ಞರ ತಂಡ ಎಚ್ಚರಿಸಿದೆ. ಒಂದು ವೇಳೆ 4ನೇ ಅಲೆ ಕಾಣಿಸಿಕೊಂಡಿದ್ದೇ ಆದಲ್ಲಿ ಅದರ ಪರಿಣಾಮಗಳು, ಆಗ ಹುಟ್ಟಿಕೊಳ್ಳಬಹುದಾದ ಹೊಸ ರೂಪಾಂತರಿಯ ತೀವ್ರತೆ, ಕೋವಿಡ್ ಲಸಿಕೆ ವಿತರಣೆಯ ಸ್ಥಿತಿಗತಿ, ಬೂಸ್ಟರ್ ಡೋಸ್ ನೀಡಿಕೆ ಅವಲಂಬಿಸಿರುತ್ತದೆ ಎಂದು ಹೇಳಿದೆ. …
Read More »