Breaking News

Breaking News

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಕೆ.ಗೋಪಾಲಯ್ಯ

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ  ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ  ಹೇಳಿದ್ದಾರೆ. 2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೆ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

Read More »

ನವೋದಯ ಸಂಸ್ಥೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಾಪಸ್‌ ಪಡೆದುಕೊಳ್ಳುವಂತೆ ಪ್ರತಿಭಟನೆ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ 371-ಜೆ ಮೀಸಲಾತಿ ಕುರಿತು ನವೋದಯ ಶಿಕ್ಷಣ ಸಂಸ್ಥೆಯಿಂದ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಾಪಸ್‌ ಪಡೆದುಕೊಳ್ಳುವಂತೆ ಒತ್ತಾಯಿಸಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಬೃಹತ್‌ ಮೆರವಣಿಗೆ ನಡೆಸಿದರು. ನಗರದ ಆರ್‌ಟಿಓ ಕಚೇರಿ ಎದುರು ಮಡಿವಾಳ ಮಾಚಿದೇವ ವೃತ್ತದಿಂದ ನವೋದಯ ಶಿಕ್ಷಣ ಸಂಸ್ಥೆಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಯಿತು. 371-ಜೆ ಪ್ರಕಾರ ಸರ್ಕಾರದಿಂದ …

Read More »

ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಯುದ್ದ ನಿಲಿಸುವಂತೆ ಮಾನವಿ ಮಾಡಿದ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಉಕ್ರೇನ್‌ನಲ್ಲಿ ಇಂದು ಬೆಳಿಗ್ಗೆ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು . ಮಧ್ಯಸ್ಥಿಕೆಗಾಗಿ ಭಾರತಕ್ಕೆ ಉಕ್ರೇನ್ ತುರ್ತು ಮನವಿ ಮಾಡಿದ ಗಂಟೆಗಳ ನಂತರ ಈ ಸಂಭಾಷಣೆ ನಡೆಯಿತು ಎನ್ನಲಾಗಿದೆ. “ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ …

Read More »

ರಷ್ಯಾ ದಾಳಿಗೆ 137 ನಾಗರಿಕರು, ಸೇನಾ ಸಿಬ್ಬಂದಿ ಸಾವು

ಕೀವ್​: ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹೇಳಿದ್ದಾರೆ. ಅವರು ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ …

Read More »

ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ಆಟೋ ಮೀಟರ್ ದರ ಏರಿಕೆಯ ಪ್ರಸ್ತಾವನೆಗೆ ಅನುಮತಿ ನೀಡಿ, ಗುಡ್ ನ್ಯೂಸ್ ನೀಡಿತ್ತು. ಈ ಬೆನ್ನಲ್ಲೇ, ಈಗ ಮಾರ್ಚ್ 1ರಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರಸ್ತೆಗೆ ಇಳಿಸುವಂತಿಲ್ಲ ಎಂಬುದಾಗಿ ಹೇಳುವ ಮೂಲಕ, ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯ ಸರ್ಕಾರದಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ಸ್ಕ್ರ್ಯಾಫ್ ಮಾಡಿ 4 ಸ್ಟ್ರೋಕ್ ಆಟೋಗಳನ್ನು ಖರೀದಿಸುವಂತೆ ಈ ಹಿಂದೆ ಆದೇಶಿಸಿತ್ತು. ಆದ್ರೇ ಕೋವಿಡ್ ತಂದಿಟ್ಟಂತ …

Read More »

‌ಉಕ್ರೇನ್ ನಲ್ಲಿ ಬಾಂಬ್ ಸ್ಪೋಟ್ : ಹೆತ್ತ ಕುರುಳಿನ ಆಗಮನಕ್ಕೆ ಜಾತಕಪಕ್ಷಿಯಂತೆ ಕಾದು ಕುಳಿತ ಪಾಲಕರು

ಹುಬ್ಬಳ್ಳಿ : ಉಕ್ರೇನ್ ನ‌ ಕಾರ್ಕ್ಯೂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಗಂಗಾಧರ ಹಾಗೂ ಸುನಂದಾ ಮಗಳು  MBBS ವಿದ್ಯಾರ್ಥಿನಿ ಚೈತ್ರಾ ಸಂಶಿ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಉಕ್ರೇನ್ ನಲ್ಲಿ  ಈ ವಿದ್ಯಾರ್ಥಿನಿ ಸಿಲುಕಿಕೊಂಡ ವಿಚಾರ ಅವರ ತಾಯಿಗೆ ತಿಳಿಯುತ್ತದ್ದಂತೆ ಹೆತ್ತ ಕೆರಳಿಗೆ ಎಲ್ಲಿಲ್ಲದ ಸಂಕಟ.  ಮಗಳು ಚೈತ್ರಾ  ಜೊತೆ ದೂರವಾಣಿಯಲ್ಲಿ    ತಾಯಿ ಸುನಂದಾ ಮಾತನಾಡಿ, ಉಕ್ರೇನ್ ನಲ್ಲಿ ಸಿಲುಕಿಕೊಂಡಿರೋ ಮಗಳಿಗೆ ಧೈರ್ಯ …

Read More »

ಗಾಯಕ ರಘು ದೀಕ್ಷಿತ್​ ತಾಯಿ ವಿಧಿವಶ

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗು ಗಾಯಕನಾಗಿರುವ ರಘು ದೀಕ್ಷಿತ್​ ಅವರ ತಾಯಿ ವಿಧಿವಶರಾಗಿದ್ದಾರೆ. ಸದ್ಯ ರಘು ದೀಕ್ಷಿತ್ ತಂಡ ದುಬೈನಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನ ನೀಡುತ್ತಿದೆ. ಮ್ಯೂಸಿಕ್ ಶೋ ಮುಗಿಯುತ್ತಿದ್ದಂತೆಯೇ ರಘು ದೀಕ್ಷಿತ್ ದುಬೈನಿಂದ ಭಾರತಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ನೇರವಾಗಿ ರಘು ದೀಕ್ಷಿತ್ ಮೈಸೂರಿನಲ್ಲಿರುವ ಮನೆಗೆ ತೆರಳಲಿದ್ದಾರೆ. ಮೈಸೂರಿನಲ್ಲಿ ರಘು ದೀಕ್ಷಿತ್ ತಾಯಿ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

Read More »

ಹರ್ಷ ದೇಶಕ್ಕೋಸ್ಕರ ಬಂದ ದೇಶಕ್ಕೋಸ್ಕರ ಹೋದ

ಶಿವಮೊಗ್ಗ: ಕೊಲೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರು ಸುದ್ದಿಗೋಷ್ಠಿ ನಡೆಸಿ, ಸಾಂತ್ವನ ಹೇಳಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ತಂದೆ, ತಾಯಿ ಹಾಗು ಅಕ್ಕ ಈ ವೇಳೆ ಮಾತನಾಡಿದರು. ‘ನನಗೇನು ಮಾಡಬೇಕು, ಹೇಳಬೇಕು ಗೊತ್ತಾಗ್ತಿಲ್ಲ. ಹರ್ಷ ದೇಶಕ್ಕೋಸ್ಕರ ಬಂದ ದೇಶಕ್ಕೋಸ್ಕರ ಹೋದ. ಎಲ್ಲರಲ್ಲೂ ಹರ್ಷನನ್ನು ಕಾಣುತ್ತಿದ್ದೇನೆ. ಎಲ್ಲರಿಗೂ ನಾವು ಚಿರಋಣಿ’ ಎಂದು ತಾಯಿ ಪದ್ಮ ಭಾವುಕರಾದರು. ‘ಎಲ್ಲ ಅಣ್ಣ-ತಮ್ಮಂದಿರಲ್ಲಿ ನನ್ನ ಸಹೋದರನನ್ನು ಕಾಣುತ್ತಿದ್ದೇವೆ. ನಮ್ಮ ಮೇಲೆ ಪ್ರೀತಿ ತೋರುತ್ತಿರುವುದಕ್ಕೆ ನಿಮಗೆಲ್ಲ …

Read More »

ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ

ಮುಂಬೈ: ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಿಸಿದ ಬೆನ್ನಲ್ಲೇ ಭಾರತದ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡುಬಂದಿದೆ. ಮುಂಬೈ ಷೇರು ಸೂಚ್ಯಂಕ 1,457 ಅಂಶಗಳಷ್ಟು ಕುಸಿದಿದ್ದು, 55,774 ಅಂಶಗಳಲ್ಲಿ ವಹಿವಾಟು ಆರಂಭಿಸಿತು. ನಿಫ್ಟಿ 391 ಅಂಶ ಕುಸಿತ ಕಂಡು, 16,671 ಅಂಶಗಳಲ್ಲಿ ವಹಿವಾಟು ಆರಂಭಿಸಿತು. ಆರಂಭಿಕ ವಹಿವಾಟಿನಲ್ಲಿ. ಸೆನ್ಸೆಕ್ಸ್ ಮತ್ತು ನಿಫ್ಟಿಯ ಎಲ್ಲಾ ಷೇರುಗಳು ಕೆಂಪು ಬಣ್ಣದಲ್ಲಿ ವಹಿವಾಟು ಆರಂಭಿಸಿದವು. ರಷ್ಯಾ ಮತ್ತು ಉಕ್ರೇನ್ ಸಂಘರ್ಷದ ಹಿನ್ನೆಲೆಯಲ್ಲಿ …

Read More »

ಆಫ್‌ಲೈನ್‌ ಪರೀಕ್ಷೆಗಳನ್ನು ಸಲ್ಲಿಕೆ ಮನವಿಗೆ ಸುಪ್ರೀಂ ಕೋರ್ಟ್‌ ನಿರಾಕರಣೆ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹಾಗೂ ಇತರ ಶಿಕ್ಷಣಾ ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಯ ಆಫ್‌ಲೈನ್‌ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌, ದಿನೇಶ್‌ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್‌ ಅವರನ್ನೊಳಗೊಂಡ ಪೀಠವು, ‘ಈರೀತಿಯ ಅರ್ಜಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಸುಳ್ಳು ಭರವಸೆಗಳನ್ನು ಮೂಡಿಸುವುದರ ಜತೆಗೆ ಗೊಂದಲಗಳನ್ನು ಮೂಡಿಸುತ್ತದೆ’ ಎಂದು ಹೇಳಿತು.

Read More »