Breaking News

Breaking News

ನಿವೃತ್ತ ಸರ್ಕಾರಿ ನೌಕರರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ, ಮರಣೋತ್ತರ ಸರ್ಕಾರಿ ನೌಕರರ ತಡವಾಗಿ ಪಾವತಿಯಾದ ಪಿಂಚಣಿ, ಉಪದನ ಹಾಗೂ ಗಳಿಕ ರಜೆ ನಗದೀಕರಣಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಲಾಗಿದೆ. ಶೇ.8ರಷ್ಟಿದ್ದಂತ ಬಡ್ಡಿದರವನ್ನು ಪರಿಷ್ಕರಿಸಿ ಶೇ.5.4ಕ್ಕೆ ನಿಗದಿ ಪಡಿಸಲಾಗಿದೆ. ಈ ಮೂಲಕ ನಿವೃತ್ತಿ, ಮರಣೋತ್ತರ ಸೌಲಭ್ಯಗಳ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಸೇವೆಯಿಂದ ನಿವೃತ್ತಿ ಹೊಂದಿದ …

Read More »

ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದ ಮಾತುಗಳಲ್ಲಿ ಬಹುಪಾಲು ಜೊಳ್ಳು ಹಾಗೂ ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳು ಇಲ್ಲ ಎಂಬುದರ ಸೂಚಕವಾಗಿವೆ. ಅನೇಕ ಕಡೆ ಕೇಂದ್ರದ ಕಾರ್ಯಕ್ರಮಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಭಾಷಣದ ಮೇಲೆ ಸೂಚನೆಗಳನ್ನು ಮಂಡಿಸಿದ ಬಿಜೆಪಿಯ ಶಾಸಕರು ಮೋದಿಯವರನ್ನು ಮತ್ತು ಕೇಂದ್ರದ ಯೋಜನೆಗಳನ್ನು ಶ್ಲಾಘಿಸುವುದಕ್ಕಷ್ಟೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲಿ ಇಷ್ಟು ಕಳಪೆ …

Read More »

ಹರ್ಷ ಕೊಲೆ ಪ್ರಕರಣ ಸಂಬಂಧಿಸಿದಂತೆ ನನ್ನನ್ನೂ ಬಂಧಿಸಲಿ : ಡಿಕೆಶಿ ಸವಾಲು

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕ ಹರ್ಷ  ಕೊಲೆಗೆ ನನ್ನ ಪ್ರಚೋದನೆ ಇದೆ ಎಂದು ಸಚಿವರು ಹೇಳಿದ್ದಾರೆ. ಹೀಗಾಗಿ ನನ್ನನ್ನೂ ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಸವಾಲು ಹಾಕಿದ್ದಾರೆ. ರಾಜ್ಯ ಕಾಂಗ್ರೆಸ್‌  ಟ್ವೀಟರ್‌ ಖಾತೆ ಮೂಲಕ ತಮ್ಮ ಹೇಳಿಕೆ ದಾಖಲಿಸಿರುವ ಅವರು, ಹರ್ಷ ಕೊಲೆಯಲ್ಲಿ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆಯೂ ಇದೆ ಎಂದು ಹೇಳಿರುವುದರಿಂದ ನನ್ನನ್ನೂ ಬಂಧಿಸಲಿ ಎಂದು ಹೇಳಿದರು. ಇನ್ನು ಸಚಿವರೇ ನಿಷೇಧಾಜ್ಞೆ ಮುರಿದು ಪಾರ್ಥಿವ …

Read More »

ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಕಾಂಗ್ರೆಸ್‌ನವರು ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರ ನೀತಿ ಪಾಠ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು, …

Read More »

ಕೋವಿಡ್ ಲಸಿಕೆ ವಿತರಣೆಯಲ್ಲಿ ಕರ್ನಾಟಕ ಮತ್ತೊಂದು ಸಾಧನೆ

ಬೆಂಗಳೂರು :  ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೋವಿಡ್ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ.5.21 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಅವರಲ್ಲಿ 4.69 ಕೋಟಿ ಮಂದಿ ಎರಡನೇ ಡೋಸ್ ಹಾಗೂ …

Read More »

ಈಶ್ವರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲು ಹಿಂದೇಟು : ರಿಯಾಜ್‌ ಅಹಮದ್‌ ಆರೋಪ

ಶಿವಮೊಗ್ಗ: ‘ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಸಚಿವ ಕೆ.ಎಸ್‌. ಈಶ್ವರಪ್ಪ, ನಗರ ಪಾಲಿಕೆ ಸದಸ್ಯ ಎಸ್‌.ಎನ್‌. ಚನ್ನಬಸಪ್ಪ ಅವರು ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಒಂದು ಸಮುದಾಯದ ಜೀವಿಸುವ ಹಕ್ಕನ್ನೇ ಕಿತ್ತುಕೊಳ್ಳುವಂತೆ ಅಪಪ್ರಚಾರ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕೋರಿ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದೇವೆ. ಆದರೆ, ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಶಿವಮೊಗ್ಗ ಪೀಸ್‌ ಆರ್ಗನೈಶೇಷನ್‌ ಅಧ್ಯಕ್ಷ ರಿಯಾಜ್‌ ಅಹಮದ್‌ …

Read More »

ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರ ಜೊತೆ ರಾಹುಲ್ ಗಾಂಧಿ ಮೀಟಿಂಗ್

ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ರಾಜ್ಯದ ಪ್ರಸಕ್ತ ವಿದ್ಯಮಾನ ಸೇರಿದಂತೆ ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ರಾಹುಲ್‌ಗಾಂಧಿ ಅವರು ಗುರುವಾರ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಚರ್ಚಿಸಲಿದ್ದಾರೆ. ಗುರುವಾರ ಸಂಜೆ 4.30 ಕ್ಕೆ ದೆಹಲಿಯಲ್ಲಿ ಸಭೆ ನಡೆಯಲಿದ್ದು ರಾಹುಲ್‌ಗಾಂಧಿ ಜತೆ ನೇರಾ-ನೇರಾ ಮಾತುಕತೆಗೆ ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವಿನ ಬಣ ರಾಜಕೀಯದಿಂದ ಉಂಟಾಗುತ್ತಿರುವ ಗೊಂದಲ, ಪ್ರಮುಖ ತೀರ್ಮಾನ ಕೈಗೊಳ್ಳಲು ಸಮನ್ವಯ ಸಮಿತಿ ರಚನೆ ಬಗ್ಗೆ …

Read More »

ನಟ ಚೇತನ್ ಬಂಧನ : ಟ್ವೀಟ್ ಮೂಲಕ ಖಂಡಿಸಿದ ರಮ್ಯಾ

ನಟ ಚೇತನ್ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.ಆಗಾಗಾ ಟ್ವೀಟ್​ನಲ್ಲಿ ಹರಿಹಾಯುವ ಸ್ಯಾಂಡಲ್​ವುಡ್​ ನಟಿ ರಮ್ಯಾ ಇದೀಗ ಮತ್ತೊಂದು ವಿಷಯ ಪ್ರಸ್ತಾಪಿಸಿ ಟ್ವೀಟ್​ ಮಾಡಿದ್ದಾರೆ. ನ್ಯಾಯಮೂರ್ತಿಗಳಿಗೆ ಅಗೌರವ ತೋರುವಂತಹ ಟ್ವೀಟ್​ ಮಾಡಿದ ಕಾರಣಕ್ಕಾಗಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ಚೇತನ್ ಪರ ಸ್ಯಾಂಡಲ್​ವುಡ್​ ನಟಿ ರಮ್ಯಾ ಬ್ಯಾಟ್ ಬೀಸಿದ್ದಾರೆ.

Read More »

ತನಿಖೆ ಆಧಾರದ ಮೇಲೆ ಮುಂದಿನ ಕ್ರಮ : ಬೊಮ್ಮಾಯಿ

ಶಿವಮೊಗ್ಗ : ” ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ” ಎಂದು ತಿಳಿಸಿದರು.

Read More »

ವೇಶ್ಯವಾಟಿಕೆ ದಂಧೆ : ಇಬ್ಬರು ಮಹಿಳೆಯರ ರಕ್ಷಣೆ

ಮೈಸೂರು: ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಬಂಧಿಸಿರುವ ಮೈಸೂರಿನ ಪೊಲೀಸರು ಇಬ್ಬರು ಮಹಿಳೆಯರ ರಕ್ಷಣೆ ಮಾಡಿದ್ದಾರೆ. ಸಂಘಟತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಜಯನಗರ 4ನೇ ಹಂತದಲ್ಲಿನ ಮನೆ ಮೇಲೆ ದಾಳಿ ಮಾಡಿ, ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಇದೇ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 31,500 ರೂ ನಗದು …

Read More »