Breaking News

Breaking News

ಹರ್ಷ ಹತ್ಯೆ ಪ್ರಕಣದಲ್ಲಿ ಬಿಗ್ ಟ್ವಿಸ್ಟ್

ಶಿವಮೊಗ್ಗ: ನಗರದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳ್ನು ಬಂಧಿಸಲಾಗಿದೆ. ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರೇ ಅಪರಾಧಿಗಳನ್ನು ಮಟ್ಟ ಹಾಕೋದರಲ್ಲಿ ನಿರ್ಲಕ್ಷ್ಯ ವಹಿಸಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಸೂಚಿಸಿರೋದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ತಮ್ಮ ಜಯಮಹಲ್ ನಿವಾಸದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದಂತ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಇಂದು ಮತ್ತಿಬ್ಬರು ಸೇರಿದಂತೆ 8 …

Read More »

ಹಿಜಾಬ್ ವಿವಾದ : ವಿಚಾರಣೆಯನ್ನು ಮುಂದೂಡಿದ ಹೈಕೋರ್ಟ್

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಇಂದು ಕೂಡ 8ನೇ ದಿನದಂದು ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಸರ್ಕಾರದ ಪರ ವಾದ ಹಾಗೂ ಶಿಕ್ಷಕರ ಪರ ವಾದವನ್ನು ಆಲಿಸಿದಂತ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರನ್ನೊಳಗೊಂಡ ಪೀಠದ …

Read More »

ಹರ್ಷನಿಗೆ ವಿಭಿನ್ನ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆ

ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈಗಾಗಲೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನೈಜ ಸಂಗತಿ ತಿಳಿಯಬೇಕಿದೆ. ಈ ನಡುವೆ ಮೃತ ಹರ್ಷನಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶಿವಾಜಿ ರೂಪದಲ್ಲಿ ಕೇಸರಿ ಶಾಲಿನೊಂದಿಗೆ ಚಿತ್ರ ಬಿಡಿಸಿ ಅಭಿಮಾನಿಗಳು ಓಂ ಶಾಂತಿ ಕೋರಿದ್ದಾರೆ. ಈ ಚಿತ್ರ ಎಲ್ಲೆಡೆ ವೈರಲ್ ಆಗುತ್ತಿದೆ.

Read More »

ಹರ್ಷ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಖಾಸೀಫ್ ಮೇಲೆ 17 ಕೇಸ್ ದಾಖಲು

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾರಿಕುವಂತ ಪೊಲೀಸರಿಗೆ ಸ್ಪೋಟಕ ಮಾಹಿತಿಗಳು ತಿಳಿದು ಬಂದಿವೆ. ಈ ಮೂಲಕ ಹರ್ಷ ಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಪ್ರಮುಖ ಆರೋಪಿ ಖಾಸೀಫ್ ಮೇಲೆ 17 ಕೇಸ್ ಇದೆ ಎನ್ನಲಾಗಿದೆ. ನಗರದಲ್ಲಿ ಭಾನುವಾರದಂದು ನಡೆದಂತ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ …

Read More »

ಬೆಳಗಾವಿ ಡಾ.ಬೆಟಗೇರಿ ಕೃಷ್ಣಶರ್ಮ ಆಯ್ಕೆ

ಬೆಳಗಾವಿ: ಇಲ್ಲಿನ ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ನಿಂದ ಕೊಡಮಾಡುವ 2021-22ನೇ ಸಾಲಿನ ವಿವಿಧ ‍ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ. ವಿಮರ್ಶೆ-ಸಂಶೋಧನೆ, ಜಾನಪದ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಲಾಗಿದೆ.ಡಾ.ಸಿ.ಎನ್. ರಾಮಚಂದ್ರನ್‌ (ವಿಮರ್ಶೆ-ಸಂಶೋಧನೆ), ಡಾ.ಎನ್.ಆರ್. ನಾಯ್ಕ್ (ಜಾನಪದ) ಮತ್ತು ಪದ್ಮರಾಜ ದಂಡಾವತಿ (ಡಾ.ಬೆಟಗೇರಿ ಕೃಷ್ಣಶರ್ಮ ಪತ್ರಕರ್ತ ಪ್ರಶಸ್ತಿ) ಅವರಿಗೆ ನೀಡಲು ಟ್ರಸ್ಟ್‌ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಪ್ರಶಸ್ತಿಯು ತಲಾ ₹ 50ಸಾವಿರ ನಗದು ಮತ್ತು ಫಲಕ …

Read More »

ಇಂದು 2022ರ ಕೇಂದ್ರ ಬಜೆಟ್ ಅನುಷ್ಠಾನ ಕುರಿತು ಪ್ರಾಧಾನಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದುʻಕೇಂದ್ರ ಬಜೆಟ್ 2022ರ ಬಜೆಟ್ ನಂತರದ ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ‘ಯಾವುದೇ ನಾಗರಿಕರನ್ನು ಹಿಂದೆ ಬಿಡುವುದಿಲ್ಲ ಕಾರ್ಯಕ್ರಮದ ಥೀಮ್ ಆಗಿದೆ. ಬಜೆಟ್‌ನ ಸಕಾರಾತ್ಮಕ ಪರಿಣಾಮದ ಕುರಿತು ಉದ್ದೇಶಪೂರ್ವಕವಾಗಿ ಉದ್ಯಮದ ಮುಖಂಡರು, ನೀತಿ ನಿರೂಪಕರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಒಟ್ಟುಗೂಡಿಸುವ ಗುರಿಯನ್ನು ಹೊಂದಿದೆ ಮತ್ತು ಸಾಮೂಹಿಕವಾಗಿ ಕೆಲಸ ಮಾಡಲು ಕಾರ್ಯತಂತ್ರಗಳನ್ನು ಗುರುತಿಸುತ್ತದೆ. ಪ್ರತಿಯೊಬ್ಬರ ಉನ್ನತಿಯ ಸಾಮಾನ್ಯ …

Read More »

ಹರ್ಷ ಕುಟುಂಬಕ್ಕೆ ಶಾಸಕರಿಂದ ನೆರವು

ಮಲ್ಪೆ: ಶಿವಮೊಗ್ಗದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ ಭೇಟಿ ನೀಡಿ ತಾಯಿ ಹಾಗೂ ಕುಟುಂಬಸ್ಥರನ್ನು ಸಂತೈಸಿದರು. ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಮೊತ್ತದ ಚೆಕ್‌ ನೀಡಿದ್ದಲ್ಲದೆ ಸಂಕಷ್ಟದ ಸಂದರ್ಭದಲ್ಲಿ ಸಮಸ್ತ ಹಿಂದೂ ಸಮಾಜ ಕುಟುಂಬದ ಜತೆ ನಿಲ್ಲುವ ಭರವಸೆ ನೀಡಿದರು..

Read More »

ಮಾ. 24ರಂದು ಕಲಬುರಗಿ ಪ್ರಧಾನಿ ಭೇಟಿ

ಕಲಬುರಗಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಸ್ವಾಮಿತ್ವ ಹಕ್ಕುಪತ್ರ ವಿತರಣೆ’ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 24ರಂದು ಕಲಬುರಗಿ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ‘ರಾಜ್ಯದ ಶಿವಮೊಗ್ಗ, ವಿಜಯನಗರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸ್ವಾಮಿತ್ವ ಹಕ್ಕುಪತ್ರ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ.ಕಲಬುರಗಿ ತಾಲ್ಲೂಕಿನ ಭೀಮಳ್ಳಿ ಗ್ರಾಮದಲ್ಲಿ ಕೂಡ ಈ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಪ್ರಧಾನಿ ಭೇಟಿಯ ಬಗ್ಗೆ ನಮಗೆ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಯಶವಂತ್‌ ಗುರುಕರ್‌ ತಿಳಿಸಿದ್ದಾರೆ.

Read More »

ಕಾಂಗ್ರೆಸ್‌ಗೆ ಸವಾಲು ಹಾಕಿದ ಸಿಎಂ

ವಿಧಾನ ಪರಿಷತ್ತು: “ನೀವು ಈಗ ನಡೆಸುತ್ತಿರುವ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯವನ್ನು ಇಟ್ಟುಕೊಂಡೇ ಜನರ ಮುಂದೆ ಬನ್ನಿ. ನಾವು ಅಭಿವೃದ್ಧಿ ಮಂತ್ರದೊಂದಿಗೆ ಬರುತ್ತೇವೆ. ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಸವಾಲು ಹಾಕಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಮಂಡನೆ ವೇಳೆ ಮಾತನಾಡಿದ ಅವರು, “ರಾಜಕೀಯ ಲಾಭಕ್ಕಾಗಿ ನೀವು (ಕಾಂಗ್ರೆಸ್‌) ಅಧಿವೇಶನದಲ್ಲಿ ಈ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಷಯ ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೀರಿ. ವಾಸ್ತವವಾಗಿ ಸಚಿವರು ಹೇಳಿದೆ …

Read More »

ಈಶ್ವರಪ್ಪ ಸಂಪುಟದಿಂದ ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಕೇಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುವ ಹೇಳಿಕೆ ನೀಡಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಕಾಂಗ್ರೆಸ್‌ ಶಾಸಕರ ನಿಯೋಗವು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹಾಗೂ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲ ತಾವರಚಂದ್‌ ಗೆಹ್ಲೋತ್‌ ಅವರಿಗೆ ಮನವಿ ಸಲ್ಲಿಸಿತು.

Read More »